ಬೆಂಗಳೂರು/ಕಾರವಾರ: ಉತ್ತರ ಕನ್ನಡ ಮುಂಗಾರು ಚುರುಕಾಗಿದ್ದು, ಶುಕ್ರವಾರ ಮುಂಜಾನೆಯಿಂದ ಧಾರಾಕಾರವಾಗಿ ಮಳೆ (Rain News) ಸುರಿಯುತ್ತಿದೆ. ಮುಂಗಾರು ಆರಂಭವಾಗಿ 20 ದಿನದ ಬಳಿಕ ವರುಣ ಅಬ್ಬರಿಸುತ್ತಿದ್ದಾನೆ. ಮಳೆಗಾಗಿ (Weather report) ಕಾದು ಕುಳಿತಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಕರಾವಳಿಯುದ್ದಕ್ಕೂ ಜೋರು ಮಳೆಯಾಗುತ್ತಿದ್ದು, ಕೆರೆ ಕಟ್ಟೆ ಬಾವಿಗಳು ಭರ್ತಿಯಾಗುತ್ತಿದೆ.
ಜೂ. 23ರಿಂದ 27 ರವರೆಗೆ ರಾಜ್ಯಾದ್ಯಂತ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗಾಳಿ ವೇಗವೂ 55ಕಿ.ಮೀ ತಲುಪಲಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
9 ಜಿಲ್ಲೆಗಳಿಗೆ ವ್ಯಾಪಕ ಮಳೆ
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮಳೆಯ ಅಬ್ಬರ ಇರಲಿದೆ. ಮಲೆನಾಡಿನ ಭಾಗವಾದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗಿನಲ್ಲಿ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ತುಮಕೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ, ಮೈಸೂರು, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ, ಹಾವೇರಿ, ಗದಗ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ವರುಣ ಗುಡುಗಲಿದ್ದಾನೆ. ಬೆಂಗಳೂರು ವ್ಯಾಪ್ತಿಯಲ್ಲಿ ಕೆಲವೊಮ್ಮೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Fake News: ಇಲ್ಲಿದೆ ಸುಳ್ಸುದ್ದಿಗಳ ಪಟ್ಟಿ, ಕ್ರಮ ಕೈಗೊಳ್ಳಿ; ಕಾಂಗ್ರೆಸ್ ಎಚ್ಚರಿಕೆಗೆ ಬಿಜೆಪಿ ಟ್ವೀಟ್ ಗೇಲಿ!
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 39 ಡಿ.ಸೆ – 24 ಡಿ.ಸೆ
ಗದಗ: 33 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 31ಡಿ.ಸೆ – 21 ಡಿ.ಸೆ
ಬೆಳಗಾವಿ: 31 ಡಿ.ಸೆ – 21 ಡಿ.ಸೆ
ಕಾರವಾರ: 34 ಡಿ.ಸೆ – 25 ಡಿ.ಸೆ
ಮಂಗಳೂರು: 31 ಡಿ.ಸೆ – 25 ಡಿ.ಸೆ
ಹೊನ್ನಾವರ: 33 ಡಿ.ಸೆ- 24 ಡಿ.ಸೆ
ಬೆಂಗಳೂರು ನಗರ: 28 ಡಿ.ಸೆ – 20 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ