ಬೆಂಗಳೂರು: ಉತ್ತರದಿಂದ ದಕ್ಷಿಣದವರೆಗೆ ಕರಾವಳಿಯಿಂದ ಮಲೆನಾಡಿನವರೆಗೆ ವರುಣ (Rain News) ಅಬ್ಬರಿಸುತ್ತಿದ್ದಾನೆ. ಜೂ.22ರಂದು ಗುಡುಗು ಸಹಿತ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ , ಉಡುಪಿ ಭಾಗದಲ್ಲಿ ಧಾರಾಕಾರ ಮಳೆಯಾಗಲಿದೆ. ಬಲವಾದ ಗಾಳಿಯೊಂದಿಗೆ ಗುಡುಗು, ಸಿಡಿಲು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ದಾವಣಗೆರೆ, ಚಿತ್ರದುರ್ಗ, ತುಮಕೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದರೆ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಭಾಗವಾದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗಿನಲ್ಲೂ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನೂರಾರು ಎಕರೆ ಕೃಷಿ ಪ್ರದೇಶ ನೀರುಪಾಲು
ಅರಮನೆ ನಗರೀ ಮೈಸೂರಲ್ಲಿ ದಿಢೀರ್ ಮಳೆಗೆ ನೂರಾರು ಎಕರೆ ಕೃಷಿ ಪ್ರದೇಶಕ್ಕೆ ನೀರು ನುಗ್ಗಿದೆ. ಹುಣಸೂರು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ತಂಬಾಕು, ಶುಂಠಿ, ಬಾಳೆ ಬೆಳೆ ಸೇರಿ ಹಲವು ಬೆಳೆಗಳು ನಾಶವಾಗಿದೆ. ಮಳೆ ನೀರು ಪ್ರವಾಹದಂತೆ ಜಮೀನಿಗೆ ನುಗ್ಗಿದ್ದು, ನದಿಯಂತಾಗಿದೆ. ಬೆಳೆ ನಾಶದಿಂದಾಗಿ ರೈತರು ಕಂಗಾಲಾಗಿದ್ದು, ಪರಿಹಾರಕ್ಕಾಗಿ ಆಗ್ರಹಿಸಿದ್ದಾರೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 39 ಡಿ.ಸೆ – 24 ಡಿ.ಸೆ
ಗದಗ: 34 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 32ಡಿ.ಸೆ – 21 ಡಿ.ಸೆ
ಬೆಳಗಾವಿ: 31 ಡಿ.ಸೆ – 21 ಡಿ.ಸೆ
ಕಾರವಾರ: 34 ಡಿ.ಸೆ – 25 ಡಿ.ಸೆ
ಮಂಗಳೂರು: 31 ಡಿ.ಸೆ – 25 ಡಿ.ಸೆ
ಹೊನ್ನಾವರ: 33 ಡಿ.ಸೆ- 25 ಡಿ.ಸೆ
ಬೆಂಗಳೂರು ನಗರ: 28 ಡಿ.ಸೆ – 20 ಡಿ.ಸೆ