Site icon Vistara News

Weather Report : ಉತ್ತರ ಕರ್ನಾಟಕದಲ್ಲಿ ಮಳೆ ಅಬ್ಬರ; ಕರಾವಳಿಗರೂ ತತ್ತರ

Rain News

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು (Southwest monsoon) ಉತ್ತರ ಒಳನಾಡಿನಲ್ಲಿ ತೀವ್ರಗೊಂಡಿದ್ದು, ದಕ್ಷಿಣ ಒಳನಾಡಿನಲ್ಲಿ (Weather report) ಚುರುಕುಗೊಂಡಿದೆ. ಕರಾವಳಿಯಲ್ಲಿ ಸಾಮಾನ್ಯವಾಗಿದೆ. ರಾಜ್ಯದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್‌ ರಾಕ್‌ನಲ್ಲಿ 23 ಸೆಂ.ಮೀ ಅತಿ ಹೆಚ್ಚು ಮಳೆಯಾಗಿರುವ (Rain News) ವರದಿ ಆಗಿದೆ. ಇನ್ನೆರಡು ದಿನಗಳು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಮಲೆನಾಡು ವ್ಯಾಪಕ ಮಳೆಯಾಗಲಿದೆ.

ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಧಾರಾಕಾರ ಮಳೆಯಾಗಲಿದೆ. ಕರಾವಳಿ ಜಿಲ್ಲೆಯಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಜಿಲ್ಲೆಯಾದ ದಾವಣಗೆರೆ, ಚಿತ್ರದುರ್ಗ, ತುಮಕೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸುತ್ತಮುತ್ತಲ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಉತ್ತರ ಒಳನಾಡಿನ ಜಿಲ್ಲೆಯಾದ ಬೆಳಗಾವಿಯಲ್ಲಿ ಗುಡುಗು ಸಹಿತ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಬೀದರ್, ಕಲಬುರಗಿ, ಯಾದಗಿರಿ ಮತ್ತು ಧಾರವಾಡ ಅಬ್ಬರದ ಮಳೆಯಾಗಲಿದೆ.

ಇದನ್ನೂ ಓದಿ: Rain News : ಮಳೆ ಅಬ್ಬರಕ್ಕೆ ಜನರು ತತ್ತರ; ಹಲವೆಡೆ ಗೋಡೆ ಕುಸಿತ, ಸೇತುವೆ ಮುಳುಗಡೆ

ಈ ಜಿಲ್ಲೆಗಳಲ್ಲಿ ಮಳೆ ಅಬ್ಬರ

ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ, ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಗುಡುಗು ಮುನ್ನೆಚ್ಚರಿಕೆ

ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಗುಡುಗಿನ ಸಾಧ್ಯತೆ ಇದೆ. ಬಿರುಗಾಳಿಯ ವೇಗವು ಒಳನಾಡಿನಲ್ಲಿ ಗಂಟೆಗೆ 40-50 ಕಿ.ಮೀ. ಮತ್ತು ಕರಾವಳಿಯಲ್ಲಿ 30-40 ಕಿ.ಮೀ. ಇರುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ

ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version