ಬೆಂಗಳೂರು: ರಾಜ್ಯದಲ್ಲಿ ಭಾನುವಾರ ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Rain News)ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ರಾಜಧಾನಿ ಬೆಂಗಳೂರಲ್ಲಿ ಮುಂಜಾನೆ ಮೋಡ ಕವಿದ ವಾತಾವಾರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ವೀಕೆಂಡ್ ಎಂದು ಹೊರಗೆ ಹೋಗುವ ಮುನ್ನ ಎಚ್ಚರವಾಗಿರಿ.
ಕರಾವಳಿಯಲ್ಲಿ ಜೋರು ಮಳೆಯಾಗುತ್ತಿದ್ದು, ಭಾನುವಾರವೂ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಗುಡುಗು, ಮಿಂಚಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕಡಲ ತೀರದಲ್ಲಿ ಬಿರುಗಾಳಿಯು ಗಂಟೆಗೆ 40-50 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ಈ ಸಮಯದಲ್ಲಿ ಮೀನುಗಾರಿಕೆಗೆ ಇಳಿಯದಂತೆ ಸೂಚನೆ ನೀಡಲಾಗಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಬೆಳಗಾವಿ, ರಾಯಚೂರು, ಹಾವೇರಿ, ಗದಗ, ಬಾಗಲಕೋಟೆ ಸೇರಿದಂತೆ ಬಳ್ಳಾರಿ, ವಿಜಯಪುರ, ಕೊಪ್ಪಳ ಮತ್ತು ವಿಜಯನಗರದಲ್ಲೂ ಮಳೆಯ ಅಬ್ಬರ ಇರಲಿದೆ.
ಮಲೆನಾಡಿನ ಭಾಗವಾದ ಶಿವಮೊಗ್ಗ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಗುಡುಗು ಇರಲಿದ್ದು, ಸಾಧಾರಣ ಮಳೆಯಾಗಲಿದೆ.
ಇದನ್ನೂ ಓದಿ: ಮುಂಗಾರು ಮಳೆಗಾಗಿ ಕಸರತ್ತು; ಮೈಸೂರಲ್ಲಿ ಕಪ್ಪೆಗಳಿಗೆ ಮದುವೆ, ಬೆತ್ತಲಾಗಿ ಮೆರವಣಿಗೆ ಹೋದ ಬಾಲಕ!
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 30 ಡಿ.ಸೆ – 24 ಡಿ.ಸೆ
ಗದಗ: 31 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 31ಡಿ.ಸೆ – 21 ಡಿ.ಸೆ
ಬೆಳಗಾವಿ: 30 ಡಿ.ಸೆ – 21 ಡಿ.ಸೆ
ಕಾರವಾರ:29 ಡಿ.ಸೆ – 25 ಡಿ.ಸೆ
ಮಂಗಳೂರು: 31 ಡಿ.ಸೆ – 25 ಡಿ.ಸೆ
ಹೊನ್ನಾವರ: 33 ಡಿ.ಸೆ- 24 ಡಿ.ಸೆ
ಬೆಂಗಳೂರು ನಗರ: 29 ಡಿ.ಸೆ – 20 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ