ಬೆಂಗಳೂರು: ಕರ್ನಾಟಕ ಕರಾವಳಿ, ಮಲೆನಾಡು ಸೇರಿದಂತೆ ಉತ್ತರ ಒಳನಾಡಿನಲ್ಲಿ ನೈರುತ್ಯ ಮುಂಗಾರು (Southwest monsoon) ಚುರುಕುಗೊಂಡಿದೆ. ಹೀಗಾಗಿ ಜು.15ರಿಂದ 18ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ಕರ್ನಾಟಕ ಕರಾವಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಕರಾವಳಿ ಭಾಗವಾದ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಭಾಗವಾದ ಶಿವಮೊಗ್ಗ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ವರುಣ ಗುಡುಗಲಿದ್ದಾನೆ.
ಉತ್ತರ ಒಳನಾಡಿನಲ್ಲಿ ಚುರುಕು
ಉತ್ತರ ಒಳನಾಡಿನ ಜಿಲ್ಲೆಯಾದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲಬುರಗಿ, ರಾಯಚೂರು, ಕೊಪ್ಪಳ ಮತ್ತು ಬೀದರ್ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಬಹಳ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನಲ್ಲಿ ದುರ್ಬಲಗೊಂಡ ಮುಂಗಾರು
ಕಳೆದೊಂದು ವಾರದಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿತ್ತು. ಆದರೆ ಮುಂದಿನ ಮೂರು ದಿನಗಳು ದಕ್ಷಿಣ ಒಳನಾಡಿನಲ್ಲಿ ಮುಂಗಾರು ದುರ್ಬಲಗೊಂಡಿದೆ. ಹೀಗಾಗಿ ಯಾವುದೇ ಅಲರ್ಟ್ ನೀಡಿಲ್ಲ. ಜು.15ರಂದು ದಕ್ಷಿಣ ಒಳನಾಡಿನ ಜಿಲ್ಲೆಯಾದ ದಾವಣಗೆರೆಯಲ್ಲಿ ಮಾತ್ರ ಗುಡುಗು ಸಹಿತ ಧಾರಾಕಾರ ಮಳೆ ಸಾಧ್ಯತೆ ಇದೆ. ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರದಲ್ಲಿ ಚದುರಿದ ಮಳೆಯಾಗುವ ಸಾಧ್ಯತೆ ಇದೆ.
65 ಕಿ.ಮೀ ವೇಗದಲ್ಲಿ ಬೀಸಲಿದೆ ಬಿರುಗಾಳಿ
ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದೆ. ಬಿರುಗಾಳಿ ವೇಗವು ಉತ್ತರ ಒಳನಾಡಿನಲ್ಲಿ ಗಂಟೆಗೆ 55 ಕಿ.ಮೀ ತಲುಪಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗಂಟೆಗೆ 40 ಕಿ.ಮೀ ಇರುವ ಸಾಧ್ಯತೆ ಇದೆ. ಮುಂದಿನ 24 ಗಂಟೆಯಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 65 ಕಿ.ಮೀ ವೇಗದಲ್ಲಿ ಬೀಸಲುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಇದನ್ನೂ ಓದಿ: Kidnap case: ಬೆಂಗಳೂರಿನಲ್ಲಿ ಯುವಕನ ಕಿಡ್‌ನ್ಯಾಪ್, ಜಾಗೃತ ನಾಗರಿಕರಿಂದ ವಿಡಿಯೊ, ಟ್ವೀಟ್ ಮಾಡಿ ದೂರು
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 34 ಡಿ.ಸೆ – 24 ಡಿ.ಸೆ
ಗದಗ: 31 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 21 ಡಿ.ಸೆ
ಬೆಳಗಾವಿ: 28 ಡಿ.ಸೆ – 21 ಡಿ.ಸೆ
ಕಾರವಾರ: 29 ಡಿ.ಸೆ – 25 ಡಿ.ಸೆ
ಮಂಗಳೂರು: 27 ಡಿ.ಸೆ – 24 ಡಿ.ಸೆ
ಹೊನ್ನಾವರ: 29 ಡಿ.ಸೆ- 24 ಡಿ.ಸೆ
ಬೆಂಗಳೂರು ನಗರ: 28 ಡಿ.ಸೆ – 20 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ