ಬೆಂಗಳೂರು: ಕರಾವಳಿಯಾದ್ಯಂತ ಜು.16ರಂದು ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು (Weather report) ನೀಡಲಾಗಿದೆ. ಕರಾವಳಿಯಲ್ಲಿ ಮಳೆ ಭರ್ಜರಿ ಪ್ರದರ್ಶನ ಇದ್ದರೆ, ಬೆಂಗಳೂರು ಸೇರಿದಂತೆ ಒಳನಾಡಿನಲ್ಲಿ ಮಳೆಯಾಟ ಸಾಧಾರಣವಾಗಿ ಇರಲಿದೆ.
ಮಲೆನಾಡಿನ ಜಿಲ್ಲೆಯಾದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಮೂರು ಕಡೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ಭಾರೀ ಮಳೆ ಮುನ್ನೆಚ್ಚರಿಕೆ
ಮುಂದಿನ 24 ಗಂಟೆಯಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಮಿಂಚು ಗುಡುಗಿನ ಸಾಧ್ಯತೆ ಇದ್ದು, ಬಿರುಗಾಳಿಯ ವೇಗವು 30-40 ಕಿ.ಮೀ ಇರುವ ಸಾಧ್ಯತೆ ಇದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು 30-40 ಕಿ.ಮೀ ಇರುವ ಸಾಧ್ಯತೆ ಇದೆ. ಇನ್ನು ಮೀನುಗಾರರಿಗೆ ಯಾವುದೇ ಎಚ್ಚರಿಕೆ ನೀಡಿಲ್ಲ.
ಕೋಲಾರ, ರಾಮನಗರದಲ್ಲಿ ಗುಡುಗು ಮಳೆ
ದಕ್ಷಿಣ ಒಳನಾಡಿನ ಜಿಲ್ಲೆಯಾದ ತುಮಕೂರು, ಮಂಡ್ಯ, ರಾಮನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಮುಂಗಾರು ದುರ್ಬಲಗೊಂಡಿದ್ದು, ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಇದನ್ನೂ ಓದಿ: Monsoon Health Tips: ಮಳೆಗಾಲದಲ್ಲಿ ಹರಡುವ ಕಾಯಿಲೆಗಳಿಂದ ದೂರವಿರಲು ಸುಲಭ ಸೂತ್ರಗಳು!
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ತುಂತುರ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ರಾಜ್ಯದಲ್ಲಿ ಶುಕ್ರವಾರ ನೈರುತ್ಯ ಮುಂಗಾರು ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿದ್ದರೆ, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಕರಾವಳಿಯ ಬಹುತೇಕ ಎಲ್ಲ ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ, ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಶಿರಾಲಿ 9, ಕುಂದಾಪುರದಲ್ಲಿ 7 ಸೆಂ.ಮೀ ಅತಿ ಹೆಚ್ಚು ಮಳೆ ಆಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ