ಬೆಂಗಳೂರು: ಕರ್ನಾಟಕ ಕರಾವಳಿಯಲ್ಲಿ ನೈರುತ್ಯ ಮುಂಗಾರು (Southwest monsoon) ಸಾಮಾನ್ಯವಾಗಿದ್ದು, ಮಲೆನಾಡು ಹಾಗೂ ಒಳನಾಡಿನಲ್ಲಿ ಚುರುಕುಗೊಂಡಿದೆ. ಜು.17ರಂದು ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆಯಿದೆ. ಕರಾವಳಿ ಜಿಲ್ಲೆಯಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ (Weather report) ಸಾಧ್ಯತೆಯಿದೆ.
ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆ ಬಿರುಗಾಳಿ ಸಹಿತ ಮಿಂಚು ಗುಡುಗಿನ ಸಾಧ್ಯತೆ ಇದ್ದು, ಬಿರುಗಾಳಿಯ ವೇಗವು 30-40 ಕಿ.ಮೀ ಇರುವ ಸಾಧ್ಯತೆ ಇದೆ. ಮೀನುಗಾರರಿಗೆ ಯಾವುದೇ ಎಚ್ಚರಿಕೆ ನೀಡಿಲ್ಲ. ಮಲೆನಾಡಿನ ಜಿಲ್ಲೆಯಾದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಲ್ಲಿ ಗುಡುಗು ಸಹಿತ ಮಳೆ
ದಕ್ಷಿಣ ಒಳನಾಡಿನ ಜಿಲ್ಲೆಯಾದ ರಾಮನಗರ, ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ (dry weather) ಇರಲಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವೊಮ್ಮೆ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Attempt Murder Case : ಹೆತ್ತವರಿಂದ ದೂರವಿಟ್ಟು ಡಿವೋರ್ಸ್ ಕೊಡದ ಪತ್ನಿಯ ಆ್ಯಕ್ಸಿಡೆಂಟ್!
ಉತ್ತರ ಒಳನಾಡಿನಲ್ಲಿ ಸಾಧಾರಣ
ಬೆಳಗಾವಿ, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದರೆ, ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಇನ್ನು ನೈರುತ್ಯ ಮುಂಗಾರು ಶನಿವಾರ ರಾಜ್ಯದಲ್ಲಿ ಸಾಮಾನ್ಯವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿದೆ. ಕ್ಯಾಸಲ್ ರಾಕ್, ಶೃಂಗೇರಿ ಎಚ್‌ಎಂಎಸ್ ತಲಾ 6 ಸೆಂ.ಮೀ ಮಳೆಯಾಗಿದೆ. ಸಿದ್ದಾಪುರ, ಜಗಲಬೆಟ್, ತಾಳಗುಪ್ಪ ತಲಾ 5 ಸೆಂ.ಮಿ ಮಳೆಯಾಗಿರುವ ವರದಿ ಆಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ