Site icon Vistara News

Weather report : ಒಳನಾಡು ಪೂರ್ತಿ ಮಳೆ ಮಯ; ಕರಾವಳಿಯಲ್ಲಿ ಮಳೆಯೇ ಮಾಯ!

Rainy weather

ಬೆಂಗಳೂರು: ನೈರುತ್ಯ ಮುಂಗಾರು (Southwest monsoon) ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿರಲಿದ್ದು, ಕರಾವಳಿಯಲ್ಲಿ ದುರ್ಬಲಗೊಂಡಿದೆ. ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಮುನ್ಸೂಚನೆ ಇದೆ. ಈ ವೇಳೆ ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ (Weather report) ಬೀಸಲಿದೆ.

ಒಳನಾಡು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಿಗೆ ಯಾವುದೇ ಮಳೆ ಸೂಚನೆ ಇಲ್ಲ. ಕರಾವಳಿ ಭಾಗದ ಪ್ರತ್ಯೇಕ ಕಡೆಗಳಲ್ಲಿ ಅಲ್ಲಲ್ಲಿ ತುಂತುರ ಮಳೆಯಾಗಬಹುದು.

ಭಾರೀ ಮಳೆ ಮುನ್ನೆಚ್ಚರಿಕೆ

ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ಯಾದಗಿರಿ ಹಾಗೂ ಕಲಬುರಗಿ, ರಾಯಚೂರು, ವಿಜಯಪುರ, ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಜತೆಗೆ ದಕ್ಷಿಣ ಒಳನಾಡಿನ ಚಾಮರಾಜನಗರ, ಕೋಲಾರ, ರಾಮನಗರ ಮತ್ತು ತುಮಕೂರಿನ ಒಂದೆರಡು ಕಡೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಮುಂದಿನ 48 ಗಂಟೆಯೊಳಗೆ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ. ಮೀನುಗಾರರಿಗೆ ಯಾವುದೇ ಎಚ್ಚರಿಕೆ ಇಲ್ಲ.

ಬೆಂಗಳೂರಿಗರಿಗೆ ರಾತ್ರಿ ಮಳೆ ಕಾಟ

ಬೆಂಗಳೂರು ನಗರದಲ್ಲಿ ಎರಡು ದಿನಗಳು ಸುರಿದ ಮಳೆಗೆ ಉಷ್ಣಾಂಶ ಪ್ರಮಾಣ ಕಡಿಮೆ ಆಗಿದೆ. ವಾತಾವರಣವು ಕೂಲ್‌ ಆಗಿದೆ. ಭಾನುವಾರದಂದು ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಒಂದೆರಡು ಬಾರಿ ಗುಡುಗು ಸಹಿತ ಮಳೆ ಸುರಿಯಲಿದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 30 ಡಿ.ಸೆ – 21 ಡಿ.ಸೆ
ಮಂಗಳೂರು: 31 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 22 ಡಿ.ಸೆ
ಗದಗ: 30 ಡಿ.ಸೆ – 21 ಡಿ.ಸೆ
ಹೊನ್ನಾವರ: 31 ಡಿ.ಸೆ- 24 ಡಿ.ಸೆ
ಕಲಬುರಗಿ: 35 ಡಿ.ಸೆ – 25 ಡಿ.ಸೆ
ಬೆಳಗಾವಿ: 30 ಡಿ.ಸೆ – 21 ಡಿ.ಸೆ
ಕಾರವಾರ: 34 ಡಿ.ಸೆ – 24 ಡಿ.ಸೆ

ಸೆಪ್ಟೆಂಬರ್‌ 3ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ

ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯದಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗರಿಷ್ಠ ಮಟ್ಟ (ಅಡಿಗಳಲ್ಲಿ)ಇಂದಿನ ಮಟ್ಟ (ಅಡಿಗಳಲ್ಲಿ)ಒಳ ಹರಿವು (ಕ್ಯೂಸೆಕ್)ಹೊರ ಹರಿವು (ಕ್ಯೂಸೆಕ್)
ಕೆಆರ್‌ಎಸ್ ಜಲಾಶಯ (KRS Dam)38.0423.5716107329
ಆಲಮಟ್ಟಿ ಜಲಾಶಯ
(Almatti Dam)
519.6519.5457671705
ಮಲಪ್ರಭಾ ಜಲಾಶಯ (Malaprabha Dam)633.8022.5102194
ಘಟಪ್ರಭಾ ಜಲಾಶಯ
(Ghataprabha Dam)
662.9141.069961131
ತುಂಗಾಭದ್ರಾ ಜಲಾಶಯ (Tungabhadra Dam)497.7177.01261 9475
ಭದ್ರಾ ಜಲಾಶಯ (Bhadra Dam)657.7346.943513222
ಕಬಿನಿ ಜಲಾಶಯ (Kabini Dam)696.1313.6520382000
ಹಾರಂಗಿ
(Harangi Dam)
871.387.573261700
ಲಿಂಗನಮಕ್ಕಿ (Linganamakki Dam) 554.4470.1622737443
ಹೇಮಾವತಿ
(Hemavathi Dam)
890.5824.848055750
ಜಲಾಶಯಗಳ ನೀರಿನ ಮಟ್ಟ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version