Site icon Vistara News

Weather Report : ಈ ವಾರ ಪೂರ್ತಿ ಮಳೆಯೋ ಮಳೆ!

Rain in women

ಬೆಂಗಳೂರು : ನೈರುತ್ಯ ಮುಂಗಾರು (Southwest monsoon) ರಾಜ್ಯಾದ್ಯಂತ ಚುರುಕಾಗಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ (Rain News) ಮಳೆಯಾಗಿದೆ. ಅತ್ಯಂತ ಭಾರಿ ಮಳೆಯು (Heavy Rainfall) ಕ್ಯಾಸಲ್ ರಾಕ್ (ಉತ್ತರ ಕನ್ನಡ ಜಿಲ್ಲೆ) 28; ಭಾಗಮಂಡಲ (ಕೊಡಗು ಜಿಲ್ಲೆ) 24; ಕಾರ್ಕಳ (ಉಡುಪಿ ಜಿಲ್ಲೆ) 23; ಮೂಲ್ಕಿ (ದಕ್ಷಿಣ ಕನ್ನಡ ಜಿಲ್ಲೆ), ಉಡುಪಿ ತಲಾ 22 ಸೆಂ.ಮೀ (Weather report) ಮಳೆಯಾಗಿದೆ.

ಮುಂದಿನ 24 ಗಂಟೆಯಲ್ಲಿ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಜೋರು ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿಯಿಂದ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ ಮತ್ತು ದಕ್ಷಿಣ ಒಳನಾಡಿನ ಹಾಸನ, ಬಳ್ಳಾರಿಯಲ್ಲೂ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಬಿರುಗಾಳಿ ಮುನ್ನೆಚ್ಚರಿಕೆ

ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಕಣ್ಮರೆಯಾಗುವ ಸೂರ್ಯ

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಜಿಟಿ ಜಿಟಿ ಮಳೆಯಾಗಲಿದ್ದು, ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.

ಇದನ್ನೂ ಓದಿ: Rain News : ರಸ್ತೆಯಲ್ಲಿ ಬೋಟ್‌ ಸಂಚಾರ! ಮಳೆಗೆ ಮನೆಗಳು ನೆಲಸಮ

ವಾರ ಪೂರ್ತಿ ಈ ಜಿಲ್ಲೆಯಲ್ಲಿ ಸುರಿಯುವ ಮಳೆ

ಮಲೆನಾಡಿನ ಜಿಲ್ಲೆಯಾದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಯಾದ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗಲಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version