ಉತ್ತರ ಕನ್ನಡ
Weather report: ಬೆಂಗಳೂರಲ್ಲಿ ತಣ್ಣಗಾದ ವರುಣ; ಕರಾವಳಿ ಸೇರಿ ಇತರ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
Weather Report: ರಾಜ್ಯಾದ್ಯಂತ ವರುಣ ತಣ್ಣಗಾಗಿದ್ದು, ಪ್ರತ್ಯೇಕ ಕಡೆಗಳಲ್ಲಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather Update) ನೀಡಿದೆ. ಜತೆಗೆ ಕೆಲವು ಕಡೆಗಳಲ್ಲಿ ತಾಪಮಾನ ಏರಿಕೆ ಆಗುವ ಸಾಧ್ಯತೆಯೂ ಇದೆ.
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯ ಕೆಲವು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ಉಳಿದಂತೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ (Rain alert) ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಕೆಲವು ಭಾಗಗಳಲ್ಲಿ ಮಳೆಯಾಗುವ (Weather report) ಸಾಧ್ಯತೆ ಇದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಮಂಡ್ಯ ಸೇರಿದಂತೆ ಚಾಮರಾಜನಗರದಲ್ಲೂ ಮಳೆಯ ಅಬ್ಬರ ಇರಲಿದೆ. ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೊಡಗು ಸೇರಿದಂತೆ ಕೋಲಾರದಲ್ಲೂ ಮಳೆಯಾಗಲಿದೆ.
ಕಳೆದೆರಡು ದಿನಗಳಿಂದ ಬೆಂಗಳೂರಲ್ಲಿ ವರುಣ ತಣ್ಣಗಾಗಿದ್ದು, ಶನಿವಾರದಂದು ಸಾಮಾನ್ಯವಾಗಿ ಬೆಳಗ್ಗೆ ಬಿಸಿಲಿನಿಂದ ಕೂಡಿದರೆ, ಮಧ್ಯಾಹ್ನದ ಸಮಯ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ತಾಪಮಾನ ಏರಿಕೆ ಸಾಧ್ಯತೆ
ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿ.ಮೀ. ಇರುವ ಸಾಧ್ಯತೆ ಇದೆ. ಮಳೆ ನಡುವೆಯು ಗರಿಷ್ಠ ಉಷ್ಣಾಂಶವು ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: Karnataka Cabinet Expansion Live : ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ
ಪ್ರಮುಖ ನಗರಗಳಲ್ಲಿನ ಪ್ರಸ್ತುತ ಹವಾಮಾನ ಹೀಗಿದೆ
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 40 ಡಿ.ಸೆ – 26 ಡಿ.ಸೆ
ಗದಗ: 38 ಡಿ.ಸೆ – 21 ಡಿ.ಸೆ
ಚಿತ್ರದುರ್ಗ: 35 ಡಿ.ಸೆ – 22 ಡಿ.ಸೆ
ಬೆಳಗಾವಿ: 34 ಡಿ.ಸೆ – 21 ಡಿ.ಸೆ
ಕಾರವಾರ: 37 ಡಿ.ಸೆ – 26 ಡಿ.ಸೆ
ಮಂಗಳೂರು: 34 ಡಿ.ಸೆ – 25 ಡಿ.ಸೆ
ಹೊನ್ನಾವರ: 33 ಡಿ.ಸೆ- 26 ಡಿ.ಸೆ
ಬೆಂಗಳೂರು ನಗರ: 33 ಡಿ.ಸೆ – 22 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉಡುಪಿ
Rain News: ಬಿಪರ್‌ಜಾಯ್ ಸೈಕ್ಲೋನ್ ಎಫೆಕ್ಟ್; ಮಂಗಳೂರಲ್ಲಿ ಚಿಟಪಟ ಮಳೆ
weather Report: ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆ ಆಗದೇ ಇರುವುದು ತೀವ್ರ ನೀರಿನ ಅಭಾವಕ್ಕೆ ಕಾರಣವಾಗಿದ್ದು, ಮಂಗಳೂರು ವಿಶ್ವವಿದ್ಯಾಲಯವು (Mangalore University) ತನ್ನ ಕಾಲೇಜಿಗೆ ರಜೆಯನ್ನೇ ಘೋಷಿಸಿತ್ತು. ಇದೀಗ ಬಿಪರ್‌ಜಾಯ್ ಚಂಡಮಾರುತದಿಂದಾಗಿ (Cyclone Biparjoy) ಎಡಬಿಡದೆ ಮಳೆ (Rain News)ಸುರಿಯುತ್ತಿದೆ.
ಮಂಗಳೂರು/ಬೆಂಗಳೂರು: ಬಿಪರ್‌ಜಾಯ್ ಚಂಡಮಾರುತ ಎಫೆಕ್ಟ್‌ನಿಂದಾಗಿ (Cyclone Biparjoy) ಶುಕ್ರವಾರ (ಜೂ.8) ಮುಂಜಾನೆ ಮಂಗಳೂರಿನಲ್ಲಿ ಬಿಡದೆ ಮಳೆ (Rain News) ಸುರಿಯುತ್ತಿದೆ. ಮುಂಜಾನೆಯೇ ಆರಂಭಗೊಂಡ ಮಳೆಯಿಂದ ಕಛೇರಿಗೆ ತೆರಳುವವರು, ಶಾಲಾ-ಕಾಲೇಜಿಗೆ ಹೋಗುವವರು ಕೊಂಚ (Weather Report) ಪರದಾಡಿದರು.
ಜೂನ್ 8 ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ವೇಳೆ ವಿದ್ಯುತ್ ವ್ಯತ್ಯಯ ಉಂಟಾಗಬಹುದು. ಬಿರುಗಾಳಿ ಸಹಿತ ಮಳೆಯಾಗುವ ಕಾರಣದಿಂದಾಗಿ ಮರದಡಿ ನಿಲ್ಲದಂತೆ ಸೂಚನೆ ನೀಡಲಾಗಿದೆ. ಇನ್ನು ಕರ್ನಾಟಕ ಕರಾವಳಿಯ ಸಮುದ್ರ ತೀರಾದಲ್ಲಿ ಗಾಳಿ ವೇಗವು 45-55 ಕಿ.ಮೀ ತಲುಪುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಐಎಂಡಿ ಎಚ್ಚರಿಕೆ ನೀಡಿದೆ.
ಬಿಪರ್‌ಜಾಯ್ ಚಂಡಮಾರುತ ಎಫೆಕ್ಟ್‌ನಿಂದಾಗಿ ಉತ್ತರಕನ್ನಡದ ಭಟ್ಕಳ, ಹೊನ್ನಾವರ, ಅಂಕೋಲಾ ತಾಲೂಕುಗಳಲ್ಲಿ ಬೆಳಗ್ಗೆ 9 ಗಂಟೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಬಿಸಿಲಿಗೆ ಕಾದಿದ್ದ ಇಳೆಗೆ ವರುಣ ತಂಪೆರೆದಿದ್ದಾನೆ. ಬಿಪರ್‌ಜಾಯ್ ಚಂಡಮಾರುತ ಹಿನ್ನೆಲೆ ಜೂ.10 ರವರೆಗೆ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕಡಲತೀರದಲ್ಲಿ ಅಲೆಗಳ ಅಬ್ಬರ ಹೆಚ್ಚಿದ್ದು, ಭಾರೀ ಪ್ರಮಾಣದಲ್ಲಿ ಗಾಳಿ ಬೀಸುತ್ತಿದೆ. ಹೀಗಾಗಿ ತೀರ ಪ್ರದೇಶದ ನಿವಾಸಿಗಳಿಗೆ ಎಚ್ಚರಿಕೆಯಲ್ಲಿ ಇರುವಂತೆ ಸೂಚನೆ ನೀಡಲಾಗಿದೆ. ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇತ್ತ ಕುಮಟಾ, ಕಾರವಾರ ತಾಲೂಕಿನಲ್ಲಿ ಬಿಸಿಲಿನ ವಾತಾವರಣ ಇದೆ.
ಬೆಂಗಳೂರಲ್ಲಿ ಕೆಲವೊಮ್ಮೆ ವಾತಾವರಣವು ಬಿಸಿಲಿನಿಂದ ಕೂಡಿದ್ದರೆ ಮಧ್ಯಾಹ್ನದ ವೇಳೆ ಮೋಡ ಕವಿಯಲಿದೆ. ಸಂಜೆ ಅಥವಾ ರಾತ್ರಿಯಂದು ಮಳೆಯಾಗುವ ಸಾಧ್ಯತೆ ಇದೆ. ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಮೈಸೂರು, ಮಂಡ್ಯ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಬೆಳಗಾವಿ, ಬಾಗಲಕೋಟೆ ಮತ್ತು ಧಾರವಾಡ, ಗದಗ, ಕೊಪ್ಪಳ, ರಾಯಚೂರು ಹಾಗೂ ಬಳ್ಳಾರಿ, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಮಾತ್ರ ಮಳೆಯಾಗಲಿದೆ. ಮಲೆನಾಡಿನ ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಅಲ್ಲಲ್ಲಿ ವರುಣ ಅಬ್ಬರಿಸಲಿದ್ದಾನೆ.
ಇದನ್ನೂ ಓದಿ:Mother Dairy: ಬಳಕೆದಾರರ ಮೇಲೆ ‘ಮದರ್ ಡೇರಿ’ ಮಮತೆ, ಅಡುಗೆ ಎಣ್ಣೆ ದರದಲ್ಲಿ ಭಾರೀ ಇಳಿಕೆ!
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 42 ಡಿ.ಸೆ – 27 ಡಿ.ಸೆ
ಗದಗ: 37 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 35 ಡಿ.ಸೆ – 23 ಡಿ.ಸೆ
ಬೆಳಗಾವಿ: 35 ಡಿ.ಸೆ – 21 ಡಿ.ಸೆ
ಕಾರವಾರ: 33 ಡಿ.ಸೆ – 27 ಡಿ.ಸೆ
ಮಂಗಳೂರು: 34 ಡಿ.ಸೆ – 25 ಡಿ.ಸೆ
ಹೊನ್ನಾವರ: 33 ಡಿ.ಸೆ- 25 ಡಿ.ಸೆ
ಬೆಂಗಳೂರು ನಗರ: 32 ಡಿ.ಸೆ – 22 ಡಿ.ಸೆ
ಉತ್ತರ ಕನ್ನಡದಲ್ಲಿ ವರುಣಾರ್ಭಟ ಇಲ್ಲಿದೆ ನೋಡಿ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉಡುಪಿ
Weather Report: ಕರಾವಳಿಯಲ್ಲಿ ಗುಡುಗಲಿರುವ ಮಳೆ; ಮಲೆನಾಡು, ಒಳನಾಡಲ್ಲಿ ಹೇಗಿರಲಿದೆ ಪ್ರಭಾವಳಿ
Weather Report: ಬಿಪರ್‌ಜಾಯ್ ಸೈಕ್ಲೋನ್ ಎಫೆಕ್ಟ್‌ನಿಂದಾಗಿ ರಾಜ್ಯಾದ್ಯಂತ ಇನ್ನೂ ಎರಡು ದಿನ ಭಾರಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ವರುಣ (Rain News) ಗುಡುಗಿದ್ದರೆ, ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಕೊಂಚ ತಗ್ಗಿದ್ದಾನೆ.
ಬೆಂಗಳೂರು: ಬಿಪರ್‌ಜಾಯ್ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯಾದ್ಯಂತ ಇನ್ನೆರಡು ದಿನ ಮಳೆಯಾಗುವ (Rain News) ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಮೈಸೂರು, ಮಂಡ್ಯ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಬೆಳಗಾವಿ, ಬಾಗಲಕೋಟೆ ಮತ್ತು ಧಾರವಾಡ, ಗದಗ, ಕೊಪ್ಪಳ, ರಾಯಚೂರು ಹಾಗೂ ಬಳ್ಳಾರಿ, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಕೆಲವು ಕಡೆ ವ್ಯಾಪಕ ಮಳೆಯಾಗಲಿದೆ. ಮಲೆನಾಡಿನ ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಅಲ್ಲಲ್ಲಿ ವರುಣ ಅಬ್ಬರಿಸಲಿದ್ದಾನೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಗುಡುಗು ಮುನ್ನೆಚ್ಚರಿಕೆ
ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಕೆಲವು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶವು ಕೂಡ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 35-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ರಾಜ್ಯದಲ್ಲಿ ಬುಧವಾರದಂದು ಕರಾವಳಿ ಹಾಗೂ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಯಾದಗಿರಿಯ ಕವಾಡಿಮಟ್ಟಿ ಏಆರ್‌ಜಿ 6 ಸೆಂ.ಮೀ ಮಳೆಯಾಗಿದೆ. ಕಲಬುರಗಿಯ ಸುಲೇಪೇಟೆ 3 ಸೆಂ.ಮೀ ಹಾಗೂ ಕೋಡ್ಲಾ, ಚಿಂಚೋಳಿ, ಕುಣಿಗಲ್, ಹೆಸರಘಟ್ಟ, ತುಮಕೂರಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಮಂಗಳೂರು ವಿಮಾನ ನಿಲ್ದಾಣ, ಧರ್ಮಸ್ಥಳ, ಬೆಳ್ತಂಗಡಿ, ಕಾರವಾರ, ಕೋಟ, ಹೊನಾವರ ಹಾಗೂ ಮುಧೋಳೆ, ಅಡಕಿ, ಸೇಡಂ, ಸೈದಾಪುರ, ಬೀದರ್ ಪಿಟಿಒ, ಬೀದರ್, ಹುಮನಾಬಾದ್, ಬಾಳೆಹೊನ್ನೂರು, ಕೊಟ್ಟಿಗೆಹಾರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಗರಿಷ್ಠ ಉಷ್ಣಾಂಶ 41.5 ಡಿಗ್ರಿ ಸೆಲ್ಸಿಯಸ್ ಕಲಬುಗಿರಯಲ್ಲಿ ದಾಖಲಾಗಿದೆ.
ಬಿರುಗಾಳಿ ಮಳೆಗೆ ಕೊಪ್ಪಳ ತತ್ತರ
ಕೊಪ್ಪಳ ತಾಲೂಕಿನ ಕುಟುಗನಹಳ್ಳಿ ಗ್ರಾಮದಲ್ಲಿ ಗುರುವಾರ (ಜೂ. 8) ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಮಳೆಯಿಂದಾಗಿ ಅಸ್ತಮಾ ಕಾಯಿಲೆಗೆ ಔಷಧಿ ಪಡೆಯಲು ಬಂದಿದ್ದ ಜನರು ಪರದಾಡಿದರು. ಕುಟುಗನಹಳ್ಳಿಯಲ್ಲಿ ಅಸ್ತಮಾಕ್ಕೆ ವನಸ್ಪತಿ ಔಷಧಿ ನೀಡಲಾಗುತ್ತಿದೆ. ಔಷಧಿಗಾಗಿ ರಾಜ್ಯದ ಮೂಲೆ ಮೂಲೆಯಿಂದ ಸಾವಿರಾರು ಜನರು ಬಂದಿದ್ದಾರೆ. ಮಳೆಗೆ ಕೆಲವರು ಮರದಡಿ ಆಶ್ರಯ ಪಡೆದರೆ, ಹಲವರು ತಾವು ತಂದಿದ್ದ ಕೊಡೆಗಳ ಸಹಾಯವನ್ನು ಪಡೆದಿದ್ದರು. ಜತೆಗೆ ಅಕ್ಕಿ ಚೀಲವನ್ನು ಹಿಡಿದು ಕ್ಯೂನಲ್ಲಿ ನಿಂತಿರುವುದು ಕಂಡು ಬಂತು.
ಕಾರಿನ ಮೇಲೆ ಉರುಳಿ ಬಿದ್ದ ಮರ
ಕೊಪ್ಪಳ ನಗರ ಹೊರವಲಯದ ವಿಶ್ವತೇಜ ಮೋಟರ್ಸ್ ಬಳಿ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದಿದೆ. ಡಸ್ಟರ್ ಕಾರನ್ನು ಸರ್ವಿಸ್‌ಗಾಗಿ ನಿಲ್ಲಿಸಲಾಗಿತ್ತು. ಭಾರಿ ಗಾಳಿ ಮಳೆಗೆ ಮರವು ಕಾರಿನ ಮೇಲೆ ಬಿದ್ದಿದ್ದು, ಜಖಂಗೊಂಡಿದೆ.
ಇನ್ನು ಬಿಸಿಲಿನಿಂದ ಕಂಗೆಟ್ಟಿದ್ದ ಮಂಗಳೂರಿನ ಜನರಿಗೆ ವರುಣ ತಂಪೆರೆದಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆ ಮಳೆ ಸುರಿಯುತ್ತಿದೆ. ಮಳೆ ಇಲ್ಲದೆ ಕುಡಿಯುವ ನೀರಿಗೂ ಸಮಸ್ಯೆ ಎದುರಾಗಿತ್ತು. ಮಳೆಯಿಂದಾಗಿ ಜನರು ಸಂತಸಗೊಂಡಿದ್ದಾರೆ.
ಇದನ್ನೂ ಓದಿ: Monsoon Precaution: ಮಳೆಗಾಲಕ್ಕೆ ಶುರುವಾಯ್ತು ಕ್ಷಣಗಣನೆ; ಈ ಆ್ಯಪ್‌ಗಳು ಈಗ ನಿಮಗೆ ಅತ್ಯಗತ್ಯ
ಕೋಲಾರದಲ್ಲಿ ಆಲಿಕಲ್ಲು ಮಳೆ
ಕೋಲಾರ ಹಾಗೂ ಶ್ರೀನಿವಾಸಪುರದಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಭಾರಿ ಮಳೆ ಸುರಿದಿದೆ. ಕೆಲವು ಕಡೆಗಳಲ್ಲಿ ಆಲಿಕಲ್ಲು ಸಹಿತ ಮಳೆ ಆಗುತ್ತಿದ್ದು, ತರಕಾರಿ ತೋಟಗಳಿಗೆ ಹಾನಿ ಆಗಿದೆ. ಮಾವು ಬೆಳೆಗಾರರಿಗೆ ಕಾಯಿ ಉದುರುವ ಭೀತಿ ಎದುರಾಗಿದೆ. ಇನ್ನೂ ಎರಡು ದಿನಗಳ ಕಾಲ ಕೋಲಾರ ಜಿಲ್ಲೆಯಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಇದೆ. ಹೀಗಾಗಿ ರೈತರು ಮುಂಜಾಗ್ರತಾ ಕ್ರಮವನ್ನು ತೆಗೆದು ಕೊಳ್ಳಲು ಕೃಷಿ ವಿಜ್ಞಾನ ಕೇಂದ್ರ ಸೂಚನೆ ನೀಡಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉತ್ತರ ಕನ್ನಡ
Hassan Accident: ಮದುವೆಗೆ ಹೋಗಿ ಬರುತ್ತಿದ್ದ ಮಿನಿ ಬಸ್ ಪಲ್ಟಿ; 12 ಮಂದಿಗೆ ಗಾಯ
Hassan Accident: ಹಾಸನ ತಾಲೂಕಿನ ಕಾರೇಕೆರೆ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಬುಧವಾರ ಅಪಘಾತ ನಡೆದಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಹಾಸನ: ಮದುವೆಗೆ ಜನರನ್ನು ಕರೆದೊಯ್ದು ವಾಪಸ್ ಬರುತ್ತಿದ್ದ ಮಿನಿ ಬಸ್ ಪಲ್ಟಿಯಾಗಿ 12 ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಶಾಂತಿಗ್ರಾಮ ಹೋಬಳಿಯ ಕಾರೇಕೆರೆ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಬುಧವಾರ ನಡೆದಿದೆ. ಗಾಯಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
ಹಾಸನದ ಗುಂಡೇಗೌಡನಕೊಪ್ಪಲು ನಿವಾಸಿಗಳು ಚನ್ನರಾಯಪಟ್ಟಣಕ್ಕೆ ಮದುವೆಗೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ಅಪಘಾತ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಮಿನಿ ಬಸ್ ಪಲ್ಟಿಯಾಗಿದ್ದರಿಂದ 12 ಮಂದಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಶಾಂತಿಗ್ರಾಮ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಖಾಸಗಿ ಬಸ್ ವೇಗದ ಧಾವಂತಕ್ಕೆ ವಿದ್ಯಾರ್ಥಿ ಬಲಿ
ಮಂಗಳೂರು: ಖಾಸಗಿ ಬಸ್ ವೇಗದ ಧಾವಂತಕ್ಕೆ ವಿದ್ಯಾರ್ಥಿ ಬಲಿಯಾಗಿರುವುದು ಮೂಡಬಿದಿರೆಯ ಎಡಪದವು ಎಂಬಲ್ಲಿ ನಡೆದಿದೆ. ಬೈಕ್‌ಗೆ ಬಸ್ ಡಿಕ್ಕಿಯಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕಾರ್ತಿಕ್ ಆಚಾರ್ಯ ಮೃತ ವಿದ್ಯಾರ್ಥಿ. ಅಫಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬಸ್ ಚಾಲಕನ ಅಜಾಗರೂಕತೆಯ ಚಾಲನೆಯಿಂದಲೇ ಅಪಘಾತ ಸಂಭವಿಸಿದೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.
ಫೋಟೋ ತೆಗೆಯಲು ಹೋಗಿ ಯುವಕ ನೀರುಪಾಲು
ಕಾರವಾರ: ಕುಮಟಾ ತಾಲೂಕಿನ ವನ್ನಳ್ಳಿ ಕಡಲತೀರದಲ್ಲಿ ಘಟನೆ ಫೋಟೊ ತೆಗೆಯಲು ಹೋಗಿ ಯುವಕನೊಬ್ಬ ನೀರುಪಾಲಾಗಿರುವ ಘಟನೆ ನಡೆದಿದೆ. ಬೆಳಗಾವಿ ಮೂಲದ ಜುಬೇದಾರ್ (27) ಮೃತ ದುರ್ದೈವಿ. ವೆಲ್ಡಿಂಗ್ ಕೆಲಸಕ್ಕೆಂದು ಬೆಳಗಾವಿಯಿಂದ ಕುಮಟಾಕ್ಕೆ ಬಂದಿದ್ದ ಯುವಕರು, ಕಡಲತೀರದ ಬಂಡೆಗಳ ಮೇಲೆ ನಿಂತು ಫೋಟೋ ತೆಗೆದುಕೊಳ್ಳಲು ಮುಂದಾಗಿದ್ದರು. ಈ ವೇಳೆ ಸ್ನೇಹಿತರೊಂದಿಗೆ ಸೇರಿ ಬಂಡೆ ಮೇಲೆ ನಿಂತು ಜುಬೇದಾರ್ ಫೋಟೊ ತೆಗೆದುಕೊಳ್ಳುವಾಗ ಕಾಲು ಜಾರಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದಾನೆ. ಸ್ಥಳೀಯರ ಸಹಾಯದಿಂದ ಪೊಲೀಸರು ಯುವಕನ ಮೃತದೇಹ ಹೊರಕ್ಕೆ ತೆಗೆದಿದ್ದಾರೆ.
ಇದನ್ನೂ ಓದಿ | Crime : ಬಾಡಿಗೆ ಸರಿಯಾಗಿ ಕೊಡಲಿಲ್ಲವೆಂದು ಕುಡುಕನ್ನೇ ರೇಪ್ ಮಾಡಿದ ಆಟೋ ಚಾಲಕ!
ಕಾರು ಡಿಕ್ಕಿಯಾಗಿ ಪಾದಚಾರಿ ಸಾವು
ಹುಬ್ಬಳ್ಳಿ: ತಾಲೂಕಿನ ಶಿರಗುಪ್ಪಿ ಗ್ರಾಮದ ಬಳಿ ಕಾರು ಹೊಡೆದು ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ. ಶಿರಗುಪ್ಪಿ ಗ್ರಾಮದ ಬಸವರಾಜ ಮಲನಾಡ ಮೃತರು. ರಸ್ತೆ ದಾಟುತ್ತಿದ್ದಾಗ ಕಾರು ವೇಗವಾಗಿ ಬಂದು ಡಿಕ್ಕಿಯಾಗಿದ್ದರಿಂದ ಪಾದಚಾರಿ ಕೊನೆಯುಸಿರೆಳೆದಿದ್ದಾರೆ. ಅಪಘಾತ ಬಳಿಕ ಶಿರಗುಪ್ಪಿ ಗ್ರಾಮಸ್ಥರು ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಸಾವು
ಧಾರವಾಡ: ಕೆಲಸದ ವೇಳೆ ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಮೃತಪಟ್ಟಿರುವುದು ಧಾರವಾಡದ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಸಂಜೆ ಕಂಬ ಹತ್ತಿ ಕೆಲಸ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಅವಘಡ ನಡೆದಿದೆ. ಧಾರವಾಡ ತಾಲೂಕಿನ ಶಿಬಾರಗಟ್ಟಿ ಗ್ರಾಮದ ನಿವಾಸಿ ನಿಜಗುಣಿ ಗಿರಿಯಪ್ಪನವರ ಮೃತರು. ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.
ಉಡುಪಿ
Weather Report: ಬಿಪರ್‌ಜಾಯ್ ಸೈಕ್ಲೋನ್ ಎಫೆಕ್ಟ್; ರಾಜ್ಯಾದ್ಯಂತ ಇನ್ನೂ 4 ದಿನ ಜಡಿ ಮಳೆ
Weather Report: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಎದ್ದಿದ್ದು, ಇದರ ಪ್ರಭಾವದಿಂದಾಗಿ ರಾಜ್ಯಾದ್ಯಂತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಯಾವ್ಯಾವ ಜಿಲ್ಲೆಗಳಿಗೆ ಅಲರ್ಟ್ ನೀಡಲಾಗಿದೆ ಎಂಬುದರ ಮಾಹಿತಿ ಇಲ್ಲಿದೆ.
ಬೆಂಗಳೂರು: ಬಿಪರ್‌ಜಾಯ್ ಸೈಕ್ಲೋನ್ (Cyclone Biporjoy) ಎಫೆಕ್ಟ್‌ನಿಂದಾಗಿ ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕರಾವಳಿ ಸೇರಿ ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಮುಂದಿನ 4 ದಿನ ಮಳೆಯ ಅಬ್ಬರ (Weather Report) ಇರಲಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಗದಗ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಬಾಗಲಕೋಟೆ, ಧಾರವಾಡ, ಹಾವೇರಿಯಲ್ಲಿ ಒಣಹವೆ ಇರಲಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಲ್ಲೂ ಮಳೆಯ ಅಬ್ಬರ ಇರಲಿದೆ. ವಿಜಯನಗರ, ದಾವಣಗೆರೆಯಲ್ಲಿ ಯಾವುದೇ ಮಳೆ ಮುನ್ಸೂಚನೆ ಇಲ್ಲ.
ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಸುಳಿಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ತಾಪಮಾನ ಏರಿಕೆ ಮುನ್ಸೂಚನೆ
ಮಳೆ ಎಚ್ಚರಿಕೆಯ ನಡುವೆಯೂ ಗರಿಷ್ಠ ಉಷ್ಣಾಂಶವು ರಾಜ್ಯಾದ್ಯಂತ ಹೆಚ್ಚಾಗುವ ಸಾಧ್ಯತೆ ಇದೆ. ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಯಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗಲಿದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-50 ಕಿ.ಮೀ ಯಿಂದ 60 ಕಿ.ಮೀ ವೇಗದಲ್ಲಿ ಬೀಸುವ ವಾತಾವರಣ ಇರಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಇದನ್ನೂ ಓದಿ: Cyclone Biparjoy: ಬಿಪರ್‌ಜಾಯ್ ಚಂಡಮಾರುತ ಭೀತಿ; ಈ ಪದದ ಅರ್ಥ ಏನು? ಮೊದಲು ಎಲ್ಲಿ ಬಳಕೆ?
ಮಂಗಳವಾರ (ಜೂ.6) ಶಿವಮೊಗ್ಗದ ಹೊಳೆಹೊನ್ನೂರು, ಹಾಸನದ ಚನ್ನರಾಯಪಟ್ಟಣದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಕಲಬುರಗಿಯ ಮಹಾಗಾವ್, ಯಾದಗಿರಿಯ ಶೋರಪುರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಗರಿಷ್ಠ ಉಷ್ಣಾಂಶ 39.9 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
-
ಸುವಚನ13 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಪ್ರಮುಖ ಸುದ್ದಿ19 hours ago
ವಿಸ್ತಾರ ಸಂಪಾದಕೀಯ: ಇಂದಿರಾ ಗಾಂಧಿ ಹತ್ಯೆಯ ಸಂಭ್ರಮ; ಕೆನಡಾದಲ್ಲಿ ಖಲಿಸ್ತಾನಿಗಳ ಉದ್ಧಟತನ ಖಂಡನೀಯ
-
South Cinema23 hours ago
Kannada New Movie: ಹಿಮಾಲಯದ ಕೊರೆಯುವ ಚಳಿಯಲ್ಲಿ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಶೂಟಿಂಗ್!
-
South Cinema23 hours ago
Nandamuri Balakrishna: ‘ಐ ಡೋಂಟ್ ಕೇರ್ʼ ಎಂದು ಮಾಸ್ ಅವತಾರವೆತ್ತ ನಂದಮೂರಿ ಬಾಲಕೃಷ್ಣ; ಟೈಟಲ್ ರಿವೀಲ್!
-
ದೇಶ18 hours ago
ಬದುಕುಳಿಯಲಿಲ್ಲ ಬೋರ್ವೆಲ್ಗೆ ಬಿದ್ದ ಕಂದಮ್ಮ; ಸಾವಿನ ವಿರುದ್ಧ 50 ಗಂಟೆ ಹೋರಾಟದಲ್ಲಿ ಗೆದ್ದಿದ್ದು ವಿಧಿ
-
ದೇಶ21 hours ago
ಸಹಕಾರಿ ಬ್ಯಾಂಕ್ಗಳು ಕೂಡ ಸುಸ್ತಿದಾರರ ಜತೆ ರಾಜಿ, ಸಾಲ ರೈಟ್-ಆಫ್ ಮಾಡಬಹುದು; ಆರ್ಬಿಐ ಮಹತ್ವದ ಘೋಷಣೆ
-
ಕರ್ನಾಟಕ23 hours ago
Fraud Case: ಬೆಳದಿಂಗಳ ಬಾಲೆ ಪ್ರಕರಣಕ್ಕೆ ಟ್ವಿಸ್ಟ್; ಸ್ವಾಮೀಜಿ ವಂಚನೆ ಕೇಸಲ್ಲಿ ಎ2 ಆರೋಪಿ ಈಗ ಎ1!
-
ದೇಶ10 hours ago
Miss World- 2023: 27 ವರ್ಷಗಳ ಬಳಿಕ ಭಾರತಕ್ಕೆ ಬರುತ್ತಿರುವ ʼಮಿಸ್ ವರ್ಲ್ಡ್ʼ