Site icon Vistara News

Weather Report : ಕರಾವಳಿ, ಮಲೆನಾಡಿನಲ್ಲಿ ಬಿರುಸಾಗಿ ಸುರಿಯಲಿದೆ ಮಳೆ

Rain Image

ಬೆಂಗಳೂರು: ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಭಾಗದಲ್ಲಿ ಸೂರ್ಯ ಮರೆಯಾಗಿ ವರ್ಷಾಧಾರೆ (Weather Report) ಭರ್ಜರಿಯಾಗಿ ಇರಲಿದೆ. ಉತ್ತರ ಒಳನಾಡಿನಲ್ಲಿ ಕೆಲವು ಕಡೆಗಳಲ್ಲಿ ಮಾತ್ರ ಬಿರುಸಿನ (Rain News) ಮಳೆಯಾಗಲಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಭಾಗವಾದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಜಿಲ್ಲೆಯಾದ ಕೊಪ್ಪಳ, ಬೆಳಗಾವಿ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ. ಗದಗ, ಹಾವೇರಿ, ರಾಯಚೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ ಇರಲಿದೆ.

ಮತ್ತೆ ಮೀನುಗಾರರಿಗೆ ಎಚ್ಚರಿಕೆ

ಮುಂದಿನ 24 ಗಂಟೆಯಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿ.ಮೀ ವ್ಯಾಪ್ತಿಯಲ್ಲಿ ವೇಗವಾಗಿ ಬೀಸಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮುಂದಿನ ಎರಡು ದಿನಗಳ ಅವಧಿಯಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದ್ದು, ರಾಜ್ಯದ ಹಲವು ಕಡೆ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಕಲಬುರಗಿ: 31 ಡಿ.ಸೆ – 25 ಡಿ.ಸೆ
ಗದಗ: 30 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 28 ಡಿ.ಸೆ – 21 ಡಿ.ಸೆ
ಬೆಳಗಾವಿ: 27 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 25 ಡಿ.ಸೆ
ಮಂಗಳೂರು: 30 ಡಿ.ಸೆ – 24 ಡಿ.ಸೆ
ಹೊನ್ನಾವರ: 29 ಡಿ.ಸೆ- 24 ಡಿ.ಸೆ
ಬೆಂಗಳೂರು ನಗರ: 28 ಡಿ.ಸೆ – 21 ಡಿ.ಸೆ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version