Site icon Vistara News

Weather Report : ವಾರಾಂತ್ಯದಲ್ಲಿ ಬಿಡದೆ ಬಿರುಸಾಗಿ ಸುರಿಯಲಿದ್ಯಾ ಮಳೆ?

Occasional picture

ಬೆಂಗಳೂರು: ಕರಾವಳಿ ಭಾಗದಲ್ಲಿ ಬಲವಾಗಿರುವ ಮುಂಗಾರು ಉಳಿದ ಜಿಲ್ಲೆಗಳಲ್ಲಿ ದುರ್ಬಲಗೊಂಡಂತೆ ಕಾಣುತ್ತಿದೆ. ಮಳೆಗಾಗಿ (Rain news) ಹಲವು ಜಿಲ್ಲೆಗಳಲ್ಲಿ ಪ್ರಾರ್ಥನೆಗಳು ಜೋರಾಗಿ ನಡೆಯುತ್ತಿದೆ. ಈ ಮಧ್ಯೆ ಹವಾಮಾನ ಇಲಾಖೆ (Weather report) ಹಲವು ಜಿಲ್ಲೆಗಳಿಗೆ ಮಳೆ ಅಲರ್ಟ್‌ (rain alert) ನೀಡಿದೆ.

ಜುಲೈ 1 ರಿಂದ 5ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಕೆಲವೊಮ್ಮೆ ಗಾಳಿಯ ವೇಗವೂ ಹೆಚ್ಚಿರಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಭಾಗವಾದ ಶಿವಮೊಗ್ಗ ಜಿಲ್ಲೆಯಾದ್ಯಂತ ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗಲಿದೆ. ಉಳಿದಂತೆ ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಭಾಗಗಳಲ್ಲಿ ವರುಣ ಗುಡುಗಲಿದ್ದಾನೆ.

ಬೆಳಗಾವಿ ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಅಂದಾಜಿಸಲಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಗಾಳಿಯ ವೇಗವು 40-50 ಕಿ.ಮೀ ಇದ್ದರೆ ಉತ್ತರ ಒಳನಾಡಿನಲ್ಲಿ ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ. ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದೆ.

ಇದನ್ನೂ ಓದಿ: Monsoon Fashion: ಮಾನ್ಸೂನ್‌ನಲ್ಲಿ ಟ್ರೆಂಡಿಯಾಗಿರುವ ಡೆನಿಮ್‌ ಪ್ಯಾಂಟ್‌ ಸೂಟ್‌ ಲೇಯರ್ಡ್ ಲುಕ್‌ ಟ್ರೈ ಮಾಡಿ ನೋಡಿ !

ಉತ್ತರ ಕನ್ನಡದಲ್ಲಿ ಭರ್ಜರಿ ಮಳೆ

ರಾಜ್ಯದಲ್ಲಿ ಜೂ.29ರಂದು ನೈರುತ್ಯ ಮುಂಗಾರು ಸಾಮಾನ್ಯವಾಗಿತ್ತು. ಕರಾವಳಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಕನ್ನಡದ ಕುಮಟಾ, ಗೋಕರ್ಣ, ಅಂಕೋಲಾದಲ್ಲಿ ತಲಾ 9 ಸೆಂ.ಮೀ ಮಳೆಯಾಗಿದೆ. ಹೊನ್ನಾವರದಲ್ಲಿ 8 ಹಾಗೂ ಶಿರಾಲಿ ಪಿಟಿಓ, ಕಾರವಾರದಲ್ಲಿ ತಲಾ 7 ಸೆಂ.ಮೀ ಮಳೆಯಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version