Site icon Vistara News

Weather Report : ಕರಾವಳಿ, ಮಲೆನಾಡಲ್ಲಿ ಇನ್ನೆರಡು ದಿನ ಭಾರಿ ಮಳೆ

rain Image

ಬೆಂಗಳೂರು: ರಾಜ್ಯದಲ್ಲಿ ಭಾನುವಾರ ನೈರುತ್ಯ ಮುಂಗಾರು (Southwest monsoon) ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿದ್ದರೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್‌ನಲ್ಲಿ 10 ಸೆಂ.ಮೀ ಮಳೆಯಾಗಿದೆ. ರಾಜ್ಯದಲ್ಲಿ ಇನ್ನೆರಡು ದಿನಗಳು ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ (Rain Alert) ಮಳೆಯಾಗಲಿದೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಗುಡುಗು ಸಹಿತ ಸಾಧಾರಣ ಮಳೆಯಾಗುವ (Weather report) ಸಾಧ್ಯತೆ ಇದೆ.

ಜು.18-19ರಂದು ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಯಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಜಿಲ್ಲೆಯಾದ ಬೀದರ್, ಬೆಳಗಾವಿ, ಕೊಪ್ಪಳ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಜಿಟಿ ಜಿಟಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Theft Case : ಕೊನೆಗೂ ಕಳ್ಳನಿಂದ ಮರಳಿ ಸಿಕ್ತು ರಿವಾಲ್ವರ್‌; ಜಿಗಿದು ಜಿಗಿದು ಕಸಿದುಕೊಂಡ ಎಸ್‌ಪಿ ಇಶಾಪಂತ್‌

48 ಗಂಟೆಯಲ್ಲಿ ಭಾರಿ ಮಳೆ ಸಾಧ್ಯತೆ

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಸೇರಿ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ರಾಜ್ಯದ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಸಾಧ್ಯತೆ ಇದೆ. ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಬೀಸಲಿದೆ.

ಮೀನುಗಾರರಿಗೆ ಎಚ್ಚರಿಕೆ

ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಒಂದೆರಡು ಬಾರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version