Site icon Vistara News

Weather Report : ನಾಳೆಯಿಂದ ಕರಾವಳಿಯಲ್ಲಿ ಮತ್ತೆ ಜೋರು ಮಳೆ

Rain image

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಗುಡುಗು, ಮಿಂಚಿನ ಮಳೆಯಾಗುವ (Weather report) ಎಚ್ಚರಿಕೆಯನ್ನು ನೀಡಲಾಗಿದೆ.

ಜು.12ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಕೆಲವೊಮ್ಮ ಬಿರುಸಿನ ಗಾಳಿ ಜತೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್‌, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿಯ ಕೆಲವು ಕಡೆ ಮಳೆಯಾಗಲಿದೆ. ಉಳಿದಂತೆ ಬಾಗಲಕೋಟೆ, ಕೊಪ್ಪಳ, ವಿಜಯಪುರದಲ್ಲಿ ಒಣಹವೆ ಇರಲಿದೆ.

ದಕ್ಷಿಣ ಒಳನಾಡಿನ ಜಿಲ್ಲೆಯಾದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ ಹಾಗೂ ಕೊಡಗು, ಕೋಲಾರ, ಮಂಡ್ಯ ಸೇರಿದಂತೆ ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ. ದಾವಣಗೆರೆ, ಬಳ್ಳಾರಿ ಜಿಲ್ಲೆಗೆ ಯಾವುದೇ ಮಳೆ ಸೂಚನೆ ಇಲ್ಲ.

ಬೆಂಗಳೂರಲ್ಲಿ ಗುಡುಗು ಸಹಿತ ಭಾರಿ ಮಳೆ

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

Rain Effect tree fall

ಸಂಜೆ ಮಳೆಗೆ ಧರೆಗುರುಳಿದ ಮರ

ಮಂಗಳವಾರ ಸಂಜೆ ಸುರಿದ ಮಳೆಗೆ ಮರವೊಂದು ಧರೆಗುರುಳಿತ್ತು. ಬೆಂಗಳೂರಿನ ರಾಜಾಜಿನಗರ ಬಳಿಯ ಗಾಯತ್ರಿ ನಗರದ ಮುಖ್ಯ ರಸ್ತೆಯಲ್ಲಿ ಮರದ ರೆಂಬೆಯು ತುಂಡಾಗಿ ಬಿದ್ದಿತ್ತು. ಮರ ಬಿದ್ದರಿಂದ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಯಿತು. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

ರಸ್ತೆಗೆ ಅಡ್ಡಲಾಗಿ ಬಿದ್ದ ಮರ

ಇದನ್ನೂ ಓದಿ: Double Murder : ಕಚೇರಿಗೆ ನುಗ್ಗಿ ಎಂಡಿ, ಸಿಇಒರನ್ನೇ ಕೊಂದು ಹಾಕಿದ ಮಾಜಿ ಉದ್ಯೋಗಿ!

ದುರ್ಬಲಗೊಂಡಿದ್ದ ಮುಂಗಾರು

ರಾಜ್ಯದಲ್ಲಿ ಸೋಮವಾರ (ಜು.10) ನೈರುತ್ಯ ಮುಂಗಾರು ದುರ್ಬಲವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಮಂಗಳೂರಲ್ಲಿ 5 ಸೆಂ.ಮೀ, ಕ್ಯಾಸಲ್ ರಾಕ್, ದೊಡ್ಡಬಳ್ಳಾಪುರದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಅಂಕೋಲಾ, ಪಣಂಬೂರು, ದೇವನಹಳ್ಳಿ, ಕೆಎಸ್‌ಎನ್‌ಡಿಎಂಸಿ ಕ್ಯಾಂಪಸ್, ಬೆಂಗಳೂರು ಕೆಐಎಎಲ್ ವಿಮಾನ ನಿಲ್ದಾಣ, ಯಲಹಂಕ ಐಎಎಫ್ ತಲಾ 2 ಸೆಂ.ಮೀ ಮಳೆಯಾಗಿದೆ. ಶಿರಾಲಿ ಪಿಟಿಒ, ಗೇರುಸೊಪ್ಪಾ, ಕಾರವಾರ, ಕದ್ರಾ, ಜೋಯಿಡಾ, ಮಂಕಿ, ಬೇಲಿಕೇರಿ, ಗೋಕರ್ಣ ಹಾಗೂ ಉಡುಪಿ, ಕಾರ್ಕಳ, ಕೊಲ್ಲೂರು, ಕೋಟ ಸೇರಿ ಮಂಗಳೂರು ವಿಮಾನ ನಿಲ್ದಾಣ, ಉಪ್ಪಿನಂಗಡಿ, ಬೆಳ್ಳೂರು, ಭಾಗಮಂಡಲ, ಬೆಂಗಳೂರು ನಗರ, ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣ ಹಾಗೂ ಕುಣಿಗಲ್, ತಾಳಗುಪ್ಪ, ಹೊಸಕೋಟೆ, ರಾಮನಗರ, ಹಿರಿಯೂರಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version