ಬೆಂಗಳೂರು: ರಾಜ್ಯಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಳೆಯಾಗುವ (Rain News) ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ (weather report) ಇದೆ.
ಬಿರುಗಾಳಿಯ ವೇಗವು ಗಂಟೆಗೆ 55 ಕಿ.ಮೀ ತಲುಪುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಜತೆಗೆ ಕಡಲ ತೀರದ ನಿವಾಸಿಗಳಿಗೆ, ಪ್ರವಾಸಿಗರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಮಲೆನಾಡಿನ ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗಿನಲ್ಲಿ ಗುಡುಗು, ಮಿಂಚಿನ ಮಳೆಯಾಗುವ ಸಾಧ್ಯತೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ರಾಮನಗರ ಮತ್ತು ಬೆಂಗಳೂರು ನಗರದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ವಿಜಯಪುರ, ಬೆಳಗಾವಿ, ಕೊಪ್ಪಳ ಮತ್ತು ಬಾಗಲಕೋಟೆ, ಧಾರವಾಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: ನೀರು ಕೇಳಿದ ಮಗಳ ಬಾಯಿಗೆ ಸ್ಪಿರಿಟ್ ಹಾಕಿದ ತಾಯಿ; ನರ್ಸ್ ವಿರುದ್ಧದ ಆರೋಪಕ್ಕೆ ಆಸ್ಪತ್ರೆ ಕೊಟ್ಟ ಉತ್ತರವೇನು?
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 39 ಡಿ.ಸೆ – 24 ಡಿ.ಸೆ
ಗದಗ: 34 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 33ಡಿ.ಸೆ – 22 ಡಿ.ಸೆ
ಬೆಳಗಾವಿ: 31 ಡಿ.ಸೆ – 21 ಡಿ.ಸೆ
ಕಾರವಾರ: 34 ಡಿ.ಸೆ – 25 ಡಿ.ಸೆ
ಮಂಗಳೂರು: 31 ಡಿ.ಸೆ – 24 ಡಿ.ಸೆ
ಹೊನ್ನಾವರ: 33 ಡಿ.ಸೆ- 24 ಡಿ.ಸೆ
ಬೆಂಗಳೂರು ನಗರ: 31 ಡಿ.ಸೆ – 21 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ