ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Weather report) ಸಾಧ್ಯತೆ ಇದ್ದು, ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಮಲೆನಾಡಿನ ಭಾಗವಾದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ತುಮಕೂರು, ಮಂಡ್ಯ, ಮೈಸೂರು ಸೇರಿ ಚಾಮರಾಜನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಉಳಿದ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ ಹಾಗೂ ಧಾರವಾಡ, ಹಾವೇರಿ, ಗದಗ, ಕೊಪ್ಪಳ ಸೇರಿ ರಾಯಚೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Monsoon Fashion Show: ಸಮ್ಮೋಹನಗೊಳಿಸಿದ ಮೀರಜ್ ಗ್ರ್ಯಾಂಡ್ ಡಿಸೈನರ್ ಬ್ರೈಡಲ್ ರ‍್ಯಾಂಪ್ ಶೋ!
ಭಾರಿ ಮಳೆ ಮುನ್ನೆಚ್ಚರಿಕೆ
ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಮೀನುಗಾರರಿಗೆ ಎಚ್ಚರಿಕೆ
ಮುಂದಿನ 24 ಗಂಟೆಯಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ.ನಿಂದ 55 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಜತೆಗೆ ಪ್ರವಾಸಿಗರು ನೀರಿಗೆ ಇಳಿಯಂತೆ ಎಚ್ಚರಿಕೆ ನೀಡಲಾಗಿದೆ. ಕಡಲತೀರದ ನಿವಾಸಿಗಳು ಸುರಕ್ಷಿತ ಸ್ಥಳದಲ್ಲಿ ಇರುವಂತೆ ಸೂಚಿಸಲಾಗಿದೆ.
ದುರ್ಬಲಗೊಂಡ ಮುಂಗಾರು
ಸೋಮವಾರದಂದು ನೈರುತ್ಯ ಮುಂಗಾರು ರಾಜ್ಯಾದ್ಯಂತ ದುರ್ಬಲವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ, ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಬಸವಕಲ್ಯಾಣದಲ್ಲಿ 5 ಸೆಂ.ಮೀ ಮಳೆಯಾಗಿದ್ದರೆ, ಮಂಗಳೂರು, ಕೋಟ, ಕುಂದಾಪುರ ಮತ್ತು ಅಂಕೋಲಾ, ಕ್ಯಾಸಲ್ ರಾಕ್, ಕೊಟ್ಟಿಗೆಹಾರದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಉಡುಪಿ, ಕಾರ್ಕಳ, ಕಾರವಾರ, ಗುಂಜಿಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಧರ್ಮಸ್ಥಳ, ಪುತ್ತೂರು, ಸುಬ್ರಹ್ಮಣ್ಯ, ಸಿದ್ದಾಪುರ, ಹೊನ್ನಾವರ, ಗೋಕರ್ಣ, ಬೇಲಿಕೇರಿ, ಲೋಂಡಾ, ಕಲ್ಘಟಗಿ, ಭಾಲ್ಕಿ, ರಾಜೇಶ್ವರ, ಹಲಬರ್ಗಾ ಹಾಗೂ ನಿಟ್ಟೂರು, ನಿರ್ಣಾ, ಕಳಸ , ಸಕಲೇಶಪುರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.
ಇದನ್ನೂ ಓದಿ: Karnataka Education: ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ಅಧಿಕಾರಿಗಳು ತಲೆ ಹಾಕುವಂತಿಲ್ಲ: ಸ್ಯಾಂಡಲ್ ಕೊಳ್ಳಲೂ ಅವಕಾಶ
ಸಂಜೆ ವೇಳೆಗೆ ಬೆಂಗಳೂರಲ್ಲಿ ಸುರಿದ ಧಾರಾಕಾರ ಮಳೆ
ರಾಜಧಾನಿ ಬೆಂಗಳೂರಲ್ಲಿ ಸಂಜೆ ವೇಳೆಗೆ ಭಾರಿ ಮಳೆಯಾಗುತ್ತಿದೆ. ಜಯನಗರ, ಶಾಂತಿನಗರ, ಜೆ.ಪಿನಗರ, ಕಾರ್ಪೋರೇಷನ್, ಪುಟ್ಟೇನಹಳ್ಳಿ, ಕೋರಮಂಗಲ, ಡೈರಿ ಸರ್ಕಲ್ ಸೇರಿದಂತೆ ವಿಧಾನಸೌಧ, ಶಿವಾಜಿನಗರ, ಕಬ್ಬನ್ ಪಾರ್ಕ್ ಸುತ್ತಮುತ್ತ ಮಳೆಯಾಗಿದೆ. ಸಂಜೆ ವೇಳೆ ಹಿಡಿದುಕೊಂಡ ಮಳೆಗೆ ವಾಹನ ಸವಾರರು ಪರದಾಡಿದರು.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ