ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಮುಂದುವರಿಯಲಿದ್ದು, ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಈ ಸಂಬಂಧ ಹವಾಮಾನ ಇಲಾಖೆ (Weather Report) ಮುನ್ಸೂಚನೆ ನೀಡಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಚಿತ್ರದುರ್ಗ, ಹಾಸನ, ಮೈಸೂರು ಸೇರಿದಂತೆ ಮಂಡ್ಯ, ಚಿಕ್ಕಬಳ್ಳಾಪುರ ಭಾಗದಲ್ಲಿ ವರುಣ ಅಬ್ಬರಿಸಲಿದ್ದಾನೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣವಿರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಂಗಳವಾರ ರಾಜ್ಯಾದ್ಯಂತ ಒಣ ಹವೆ ಇದ್ದು, ಕನಿಷ್ಠ ಉಷ್ಣಾಂಶ 12.6 ಡಿಗ್ರಿಸೆಲ್ಸಿಯಸ್ ಬಾಗಲಕೋಟೆಯಲ್ಲಿ ದಾಖಲಾಗಿದೆ.
ಇದನ್ನೂ ಓದಿ | Appu Namana | ಅಪ್ಪುಗಾಗಿ 336 ಕಿ.ಮೀ. ನಡೆದೇ ಬೆಂಗಳೂರಿಗೆ ಬಂದ ಅಭಿಮಾನಿ; ಹುಕ್ಕೇರಿಯಲ್ಲಿ ಅಪ್ಪು ಹೆಸರಲ್ಲಿ ಬಾವುಟ ಹಂಚಿಕೆ