ಬೆಂಗಳೂರು: ರಾಜ್ಯದಲ್ಲಿ ಮಳೆಯು ಕಣ್ಣಾಮುಚ್ಚಾಲೆ ಆಟವಾಡುತ್ತಿದೆ. ಬೆಳಗ್ಗೆ ಬಿಸಿಲು ಇದ್ದರೆ ಮಧ್ಯಾಹ್ನದ ಹೊತ್ತಿಗೆ ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಿರುತ್ತದೆ. ಬಳಿಕ ದಿಢೀರ್ ಬರುವ ಮಳೆಗೆ (Weather Report) ಜನರು ಹೈರಾಣಾಗಿದ್ದಾರೆ.
ಮುಂದಿನ 48 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Weather Report) ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ ಹಾಗೂ ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಬಿಟ್ಟು ಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 23 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿಯಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.
ಇದನ್ನೂ ಓದಿ | Modi In Bengaluru | Airport Terminal-2 ಚೆಲುವಿಗೆ ಬೆರಗಾದ ಮೋದಿ; ಇಲ್ಲಿವೆ ಫೋಟೊ ಝಲಕ್