ಬೆಂಗಳೂರು: ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather Report) ನೀಡಿದೆ. ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮತ್ತು ಉತ್ತರ ಒಳನಾಡು ಹಾಗೂ ಕರಾವಳಿಯ ವ್ಯಾಪಕ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು ಹಾಗೂ ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗಿನಿಂದ ಕೂಡಿದ ಭಾರಿ ಮಳೆಯಾಗಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬುಧವಾರ ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶವು 33.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಬಾಗಲಕೋಟೆಯಲ್ಲಿ 18.6 ಕಡಿಮೆ ಉಷ್ಣಾಂಶ ದಾಖಲಾಗಿದೆ.
ಇದನ್ನೂ ಓದಿ | Bengaluru Road | ಬೆಂಗಳೂರು ರಸ್ತೆಯ ಒಂದು ಗುಂಡಿ ಮುಚ್ಚಲು 10 ಸಾವಿರ ರೂಪಾಯಿ ಬೇಕಾ?