ಬೆಂಗಳೂರು: ಕಳೆದೊಂದು ವಾರದಿಂದ ರಾಜ್ಯದ ಹಲವೆಡೆ ಮಳೆ ಅಬ್ಬರ ಮುಂದುವರಿದಿದ್ದು, ಸೋಮವಾರ ಸಂಜೆ ವೇಳೆಗೆ ಬಹುತೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮೇ 2ರಂದು ದಕ್ಷಿಣ ಒಳನಾಡಿನ (south Interior Karnataka) ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, 8 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Karnataka rain) ಮುನ್ಸೂಚನೆಯನ್ನು (Weather Report) ಹವಾಮಾನ ಇಲಾಖೆ ನೀಡಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ (Rain News) ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ (Weather Report) ನೀಡಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ ಹಾಗೂ ರಾಯಚೂರು, ಯಾದಗಿರಿ, ಕೊಪ್ಪಳದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಕೆಲವು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಉಳಿದಂತೆ ಇತರೆ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 31 ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ತಾಪಮಾನ ಏರಿಕೆ
ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಅಬ್ಬರಿಸಿದ್ದರೆ ಕರಾವಳಿಯಲ್ಲಿ ತಾಪಮಾನ ಏರಿಕೆ ಆಗುವ ಸಾಧ್ಯತೆ ಇದೆ. ಕರಾವಳಿಯ ಕೆಲವು ಕಡೆಗಳಲ್ಲಿ ಗರಿಷ್ಠ ಉಷ್ಠಾಂಶವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ವರೆಗೂ ಹೆಚ್ಚಾಗುವ ಸಾಧ್ಯತೆ ಇದೆ.
ಭಾನುವಾರ ಅಬ್ಬರಿಸಿರುವ ಮಳೆ
ಇನ್ನು ಭಾನುವಾರದಂದು ಬೆಂಗಳೂರಿನ ಯಲಹಂಕದಲ್ಲಿ 7 ಸೆಂ.ಮೀ ಪ್ರಮಾಣದಲ್ಲಿ ಮಳೆಯಾಗಿರುವ ವರದಿಯಾಗಿದೆ. ಉಳಿದಂತೆ ಯಡ್ರಾಮಿ, ಭಾಲ್ಕಿಯಲ್ಲಿ ತಲಾ 5 ಸೆಂ.ಮೀ ಹಾಗೂ ಹುಮನಾಬಾದ್, ಕಲಬುರಗಿ, ಪೊನ್ನಂಪೇಟೆ, ತೊಂಡೇಭಾವಿ, ಗೌರಿಬಿದನೂರಿನಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ.
ರಾಯಚೂರು, ಗಂಗಾವತಿ, ಸಿರುಗುಪ್ಪ, ಬೆಂಗಳೂರು ನಗರ, ಜಿಕೆವಿಕೆ, ಭದ್ರಾವತಿ ತಲಾ 3 ಹಾಗೂ ಕೂಡಲಸಂಗಮ, ಕಮಲಾಪುರ, ಗಂಗಾವತಿ, ಮುದಗಲ್, ಬೀದರ್, ಬೆಂಗಳೂರು ಕೆಐಎಎಲ್ ವಿಮಾನ ನಿಲ್ದಾಣ, ಗೋಪಾಲನಗರ ತಲಾ 2 ಸೆಂ.ಮೀ ಮಳೆಯಾಗಿದೆ.
ಇದನ್ನೂ ಓದಿ: Accident Case: ಯಲಹಂಕದಲ್ಲಿ ಲಾರಿ ಬ್ರೇಕ್ ಫೈಲ್ಯೂರ್, ಸರಣಿ ಅಪಘಾತ
ನೆಲೋಗಿ, ಚಿತ್ತಾಪುರ, ಮುನಿರಾಬಾದ್, ರೋಣ, ಸೈದಾಪುರ, ಯಡವಾಡ, ಔರಾದ್ , ಕುರ್ಡಿ, ಉಚ್ಚಂಗಿದುರ್ಗ, ಚಿಕ್ಕಬಳ್ಳಾಪುರ, ಕುಡುತಿನಿ, ಶಿಡ್ಲಪ್ಪ, ಸೋಮವಾರಪೇಟೆ, ಮೂರ್ನಾಡು, ವಿರಾಜಪೇಟೆ, ರಾಮನಗರ, ದೇವನಹಳ್ಳಿ, ಟಿ. ನರಸೀಪುರ, ಮಧುಗಿರಿ ತಲಾ 1 ಸೆಂ.ಮೀ ಮಳೆಯಾಗಿದೆ. ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 37.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.