ಬೆಂಗಳೂರು: ರಾಜ್ಯದ ಕರಾವಳಿ ಭಾಗದ ಬಹುತೇಕ ಕಡೆಗಳಲ್ಲಿ ಮಳೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರ, ಹಾಸನ, ಕೋಲಾರ ಸೇರಿದಂತೆ ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Weather Report) ತಿಳಿಸಿದೆ.
ಬೆಂಗಳೂರು ನಗರದಲ್ಲಿ ಬೆಳಗ್ಗೆ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿದ್ದು, ಗುಡುಗು ಸಹಿತ ಕೆಲವೊಮ್ಮೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 26 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಇನ್ನು ಉತ್ತರ ಒಳನಾಡಿನಲ್ಲಿ ನೈರುತ್ಯ ಮುಂಗಾರು ದುರ್ಬಲಗೊಂಡಿದ್ದು, ಯಾವುದೇ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿಲ್ಲ.
ಇದನ್ನೂ ಓದಿ | Rain News | ಮಳೆಯಿಂದ ಉಕ್ಕಿದ ನದಿ: ದಡದಲ್ಲೇ ಮಗುವಿನ ಜನನ