ಬೆಂಗಳೂರು: ರಾಜ್ಯಾದ್ಯಂತ ಹಲವೆಡೆ ಮಳೆಯ (Rain updates) ಅಬ್ಬರ ತಗ್ಗಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿವ ವರದಿ ಆಗಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆಯಿಂದ (Weather Report) ಕೂಡಿತ್ತು. ಧಾರವಾಡ 2 ಹಾಗೂ ಬೆಳಗಾವಿಯ ಲೋಂಡಾದಲ್ಲಿ 1 ಸೆಂ.ಮೀ ಮಳೆಯಾಗಿದ್ದು, ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 37.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮುಂದಿನ 48 ಗಂಟೆಯಲ್ಲಿ ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದ ಕೆಲವು ಭಾಗದಲ್ಲಿ ಜಿಟಿ ಜಿಟಿ ಮಳೆಯಾಗಲಿದೆ. ಉಳಿದಂತೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಇದನ್ನೂ ಓದಿ: Lorry Accident: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸಿಮೆಂಟ್ ಲಾರಿ; ಆಂಬ್ಯುಲೆನ್ಸ್ ಸಿಗದೆ ಒಂದೂವರೆ ಗಂಟೆ ನರಳಾಡಿದ ಚಾಲಕ
ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.