ಬೆಂಗಳೂರು: ಮಾಂಡೌಸ್ ಸೈಕ್ಲೋನ್ ಎಫೆಕ್ಟ್‌ನಿಂದಾಗಿ ಜನರು ತತ್ತರಿಸಿ ಹೋಗಿದ್ದು, ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ. ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಹಾಗೂ ಕರಾವಳಿ, ಉತ್ತರ ಒಳನಾಡಿನ ಕೆಲವೆಡೆ ಜಿಟಿಜಿಟಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ (Weather Report) ಇಲಾಖೆ ಹೇಳಿದೆ.
ಭಾರೀ ಮಳೆಯ ಎಚ್ಚರಿಕೆ
ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಜತೆಗೆ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು, ಕೋಲಾರ, ಮೈಸೂರು ಜಿಲ್ಲೆಗಳಲ್ಲಿ ಕೆಲವು ಕಡೆ ವ್ಯಾಪಕ ಮಳೆಯಾಗಲಿದೆ.
ರಾಜಧಾನಿಯಲ್ಲಿ ವರುಣಾಘಾತ
ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಮೇಲ್ಮೈ ಮಾರುತಗಳು ಕೆಲವೊಮ್ಮೆ ಪ್ರಬಲವಾಗಿರಲಿದೆ. ಇದರಿಂದಾಗಿ ಜಿಟಿ ಜಿಟಿ ಮಳೆಯೊಂದಿಗೆ ಕೆಲವೊಮ್ಮೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಾಗಿರಲಿದೆ. ಗರಿಷ್ಠ ಉಷ್ಣಾಂಶ 21 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ | Karnataka Elections | ಬಿಜೆಪಿಯಿಂದ ಮತ್ತೊಂದು ಮೆಗಾ ಸಮಾವೇಶ: ಡಿ. 18ರಂದು ನಾನಾ ಪ್ರಕೋಷ್ಠಗಳ ಶಕ್ತಿ ಸಂಗಮ