ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರಿನ (Rain News) ಕಣ್ಣಾಮುಚ್ಚಾಲೆ ಮುಂದುವರಿದಿದೆ. ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಇದ್ದು, ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆಯನ್ನು (Weather report) ನೀಡಲಾಗಿದೆ. ಇನ್ನು ರಾಜ್ಯಾದ್ಯಂತ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.
ದಕ್ಷಿಣ ಒಳನಾಡಿನ ಜಿಲ್ಲೆಯಾದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ದಾವಣಗೆರೆ, ಮೈಸೂರು, ಮಂಡ್ಯ, ಚಾಮರಾಜನಗರದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಅತಿ ಕಡಿಮೆ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಇರಲಿದೆ.
ಉತ್ತರ ಒಳನಾಡಿನ ಜಿಲ್ಲೆಯಾದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆಯಾಗಲಿದೆ. ಉಳಿದದಂತೆ ಶುಷ್ಕ ಹವಾಮಾನ ಇರಲಿದೆ.
ಇದನ್ನೂ ಓದಿ: ಅಜ್ಜಿ I Love you! ಒಂಟಿಯಾಗಿರುವೆ ಜಂಟಿಯಾಗು ಎಂದು ಪಟಾಯಿಸಿದ್ದ ಅಜ್ಜ ಕೈಕೊಟ್ಟʼನಲ್ಲʼ!
ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ
ಮುಂದಿನ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಹಗುರ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇನ್ನು ರಾಜ್ಯದಲ್ಲಿ ಭಾನುವಾರ ನೈರುತ್ಯ ಮುಂಗಾರು ದುರ್ಬಲವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಮಳೆಯಾಗಿದೆ. ಮಂಕಿ, ಅಜ್ಜಂಪುರ ತಲಾ 2 ಸೆಂ.ಮೀ ಮಳೆಯಾಗಿದೆ. ಉಳಿದಂತೆ ಉಡುಪಿ, ಕಾರ್ಕಳ, ಕೋಟ, ಕೊಲ್ಲೂರು, ಮಂಗಳೂರು, ಮೂಲ್ಕಿ, ಕ್ಯಾಸಲ್ ರಾಕ್, ಶಿರಾಲಿ ಸೇರಿದಂತೆ ದೇವರಹಿಪ್ಪರಗಿ, ಬಿ ಬಾಗೇವಾಡಿ, ಸೇಡಂ, ಎಂಪ್ರಿ, ಬೆಳ್ಳೂರಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ