ಬೆಂಗಳೂರು: ಮುಂಗಾರು ಮಂಕಾಗಿರುವ ಈ ಹೊತ್ತಿನಲ್ಲೂ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಉತ್ತರ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಮಳೆಯಾಗುವ (Rain News) ಸಾಧ್ಯತೆ ಇದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು ಸಹಿತ ಗುಡುಗು ಇರಲಿದೆ ಎಂದು ಹವಾಮಾನ ಇಲಾಖೆ (Weather report) ಮುನ್ಸೂಚನೆಯನ್ನು ನೀಡಿದೆ.
ಉತ್ತರದಲ್ಲಿ ಸಾಧಾರಾಣ
ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯೊಂದರಲ್ಲೇ ಸಾಧಾರಣ ಮಳೆಯಾಗುವ ಸಂಭವವಿದೆ. ಉಳಿದ ಭಾಗಗಳಲ್ಲಿ ಲಘು ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.
ದಕ್ಷಿಣದ ಹಲವೆಡೆ ಮಳೆ, ಉಳಿದೆಡೆ ಒಣಹವೆ
ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಒಣಹವೆ ಇರಲಿದೆ.
ಕರಾವಳಿ, ಮಲೆನಾಡಲ್ಲಿ ಜಿಟಿ ಜಿಟಿ ಮಳೆ
ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆ ಆಗಬಹುದು. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲೂ ಮಳೆಯ ಸಿಂಚನವಾಗಲಿದೆ.
ಬೆಂಗಳೂರಲ್ಲಿ ಸೂರ್ಯ ನಾಪತ್ತೆ
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಹಗುರ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: India Post GDS Recruitment : 30,041 ಗ್ರಾಮೀಣ ಅಂಚೆ ಸೇವಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಂದು ಕೊನೇ ದಿನ
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 30 ಡಿ.ಸೆ – 21 ಡಿ.ಸೆ
ಮಂಗಳೂರು: 30 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 22 ಡಿ.ಸೆ
ಗದಗ: 32 ಡಿ.ಸೆ – 21 ಡಿ.ಸೆ
ಹೊನ್ನಾವರ: 30 ಡಿ.ಸೆ- 24 ಡಿ.ಸೆ
ಕಲಬುರಗಿ: 34 ಡಿ.ಸೆ – 23 ಡಿ.ಸೆ
ಬೆಳಗಾವಿ: 29 ಡಿ.ಸೆ – 20 ಡಿ.ಸೆ
ಕಾರವಾರ: 32 ಡಿ.ಸೆ – 24 ಡಿ.ಸೆ
ಆಗಸ್ಟ್ 22ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ
ಜಲಾಶಯ | ಗರಿಷ್ಠ ಮಟ್ಟ (ಅಡಿಗಳಲ್ಲಿ) | ಇಂದಿನ ಮಟ್ಟ (ಅಡಿಗಳಲ್ಲಿ) | ಒಳ ಹರಿವು (ಕ್ಯೂಸೆಕ್) | ಹೊರ ಹರಿವು (ಕ್ಯೂಸೆಕ್) |
ಕೆಆರ್‌ಎಸ್ ಜಲಾಶಯ (KRS Dam) | 38.04 | 26.90 | 5269 | 13457 |
ಆಲಮಟ್ಟಿ ಜಲಾಶಯ (Almatti Dam) | 519.6 | 123.08 | 901 | 901 |
ಮಲಪ್ರಭಾ ಜಲಾಶಯ (Malaprabha Dam) | 633.8 | 23.01 | 194 | 194 |
ಘಟಪ್ರಭಾ ಜಲಾಶಯ (Ghataprabha Dam) | 662.91 | 43.04 | 1798 | 3955 |
ತುಂಗಾಭದ್ರಾ ಜಲಾಶಯ (Tungabhadra Dam) | 497.71 | 83.43 | 1085 | 10854 |
ಭದ್ರಾ ಜಲಾಶಯ (Bhadra Dam) | 657.73 | 48.76 | 3467 | 3224 |
ನಾರಾಯಣಪುರ ಜಲಾಶಯ (Narayanpur Dam) | 492.25(ಮೀಟರ್) | 491.84(ಮೀಟರ್) | 50,000 | 40,260 |
ಹಾರಂಗಿ (Harangi Dam) | 871.38 | 8.33 | 1310 | 2100 |
ಲಿಂಗನಮಕ್ಕಿ (Linganamakki Dam) | 554.44 | 73.74 | 4745 | 7853 |
ಹೇಮಾವತಿ (Hemavathi Dam) | 890.58 | 28.34 | 2747 | 6450 |
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ