ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Weather report) ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆಯಾಗಲಿದೆ.
ಮಲೆನಾಡಿನ ಶಿವಮೊಗ್ಗ ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Monsoon Boots Fashion: ಮಾನ್ಸೂನ್ ಸೀಸನ್ ವೆಸ್ಟರ್ನ್ ಔಟ್‌ಫಿಟ್ಸ್ ಜೊತೆಯಾದ ಬೂಟ್ಸ್ ಫ್ಯಾಷನ್
ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಇನ್ನು ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಾದ್ಯಂತ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ವ್ಯಾಪ್ತಿಯಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ