Site icon Vistara News

Weather Report: ದಕ್ಷಿಣ ಒಳನಾಡಲ್ಲಿ ತಗ್ಗಿದ ಮಳೆ; ಕರಾವಳಿ, ಉತ್ತರ ಒಳನಾಡಿನಲ್ಲಿ ಮುಂದುವರಿಯಲಿದೆ ಅಬ್ಬರ

Weather Forecast

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಬಾಗಲಕೋಟೆ, ವಿಜಯಪುರದಲ್ಲಿ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ (Karnataka Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather update) ನೀಡಿದೆ.

ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ ಹಾಗೂ ವಿಜಯಪುರ, ಕಲಬುರಗಿಯ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ಗುಡುಗು ಮುನ್ನೆಚ್ಚರಿಕೆ

ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಜತೆಗೆ ಉತ್ತರ ಒಳನಾಡಿನಲ್ಲೂ ಮಳೆ ಅಬ್ಬರ ಮುಂದುವರಿಯಲಿದ್ದು, ಬಾಗಲಕೋಟೆ, ಬೆಳಗಾವಿ, ವಿಜಯಪುರ, ಧಾರವಾಡ, ಕಲಬುರಗಿಯಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ.

ಬೆಂಗಳೂರು ನಗರಕ್ಕಿಲ್ಲ ಮಳೆ ಅಲರ್ಟ್‌

ರಾಜಧಾನಿ ಬೆಂಗಳೂರಲ್ಲಿ ಭಾಗಶಃ ನೀಲಾಕಾಶ ಇರಲಿದ್ದು, ಯಾವುದೇ ಮಳೆಯ ಮುನ್ಸೂಚನೆ ಇಲ್ಲ. ಗರಿಷ್ಠ ಉಷ್ಣಾಂಶ 35 ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಗರಿಷ್ಠ ಉಷ್ಣಾಂಶದ ಎಚ್ಚರಿಕೆ!

ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆ ಇದೆ.

ಎಲ್ಲೆಲ್ಲಿ ಮಳೆ ಅಬ್ಬರ?

ಶುಕ್ರವಾರ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಕರಾವಳಿಯ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಒಣಹವೆ ಇತ್ತು. ಬೆಳಗಾವಿಯ ಚಿಕ್ಕೋಡಿಯಲ್ಲಿ 5ಸೆಂ.ಮೀ ನಷ್ಟು ಮಳೆಯಾಗಿದ್ದರೆ, ರಾಯಬಾಗ, ಬೈಲಹೊಂಗಲ, ಕಲಘಟಗಿ ತಲಾ 2 ಸೆಂ.ಮೀ ಮಳೆಯಾಗಿದೆ.

ಹಳಿಯಾಳ, ಮುಂಡಗೋಡ, ಜಗಲಬೆಟ್, ಬೀದರ್, ಮಂಠಾಳ, ಭಾಲ್ಕಿ, ನಿಪ್ಪಾಣಿ, ಸುತಗಟ್ಟಿ ಮಟ್ಟಿಕೊಪ್ಪ, ಸದಗಲ ಹಾಗೂ ಇಂಡಿ ಮಹಾಲಿಂಗಪುರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಇತ್ತ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 40.9 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಇದನ್ನೂ ಓದಿ: Rahul Gandhi: ಏ.16, 17ರಂದು ರಾಹುಲ್‌ ಗಾಂಧಿ ರಾಜ್ಯ ಪ್ರವಾಸ; ಕೋಲಾರದ ಜೈ ಭಾರತ್‌ ಸಮಾವೇಶದಲ್ಲಿ ಭಾಗಿ

ವಿಜಯಪುರದಲ್ಲಿ ಆಲಿಕಲ್ಲು ಮಳೆ

ಆಲಿಕಲ್ಲು ಸಹಿತ ಮಳೆ

ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣ ಸೇರಿದಂತೆ ತಾಲೂಕಿನ ಬಾಬಾನಗರ, ಧನ್ಯಾಳ, ಕೊಟ್ಯಾಳ, ದಾಸ್ಯಾಳ, ಬಿಜ್ಜರಗಿ, ಘೋಣಸಗಿ, ಕಳ್ಳಕವಟಗಿ, ಸೋಮದೇವರಹಟ್ಟಿ, ಹಾಗೂ ಮಲಕನದೇವರಹಟ್ಟಿ, ಹುಬನೂರ, ಟಕ್ಕಳಕಿ, ಸೇರಿದಂತೆ ಗುಡುಗಿನೊಂದಿಗೆ ಆಲಿಕಲ್ಲು ಮಳೆಯಾಗಿದೆ.

Exit mobile version