ಬೆಂಗಳೂರು: ಮಾಂಡೌಸ್ ಸೈಕ್ಲೋನ್ ಎಫೆಕ್ಟ್‌ನಿಂದಾಗಿ ಕಳೆದ ಮೂರು ದಿನದಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಇನ್ನೆರಡು ದಿನ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Weather Report) ತಿಳಿಸಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ಮೀನುಗಾರರಿಗೆ ಎಚ್ಚರಿಕೆ
ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 40 -45 ಕಿ.ಮೀ. ಇರಲಿದ್ದು, 55 ಕಿ.ಮೀ. ವರೆಗೂ ತಲುಪುವ ಸಾಧ್ಯತೆ ಇದೆ. ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.
ರಾಜಧಾನಿಯಲ್ಲಿ ಮುಂದುವರಿಯಲಿದೆ ಜಿಟಿ ಜಿಟಿ ಮಳೆ
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜಿನಿಂದ ಕೂಡಿರಲಿದ್ದು, ಜಿಟಿ ಜಿಟಿ ಮಳೆಯು ಮುಂದುವರಿಯಲಿದೆ. ಗರಿಷ್ಠ ಉಷ್ಣಾಂಶ 24 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ | Zika virus | ರಾಜ್ಯದಲ್ಲಿ ಮೊದಲ ಝಿಕಾ ವೈರಸ್ ರಾಯಚೂರಿನಲ್ಲಿ ಪತ್ತೆ; 5 ವರ್ಷದ ಬಾಲಕಿಗೆ ಪಾಸಿಟಿವ್