ಬೆಂಗಳೂರು: ತಮಿಳುನಾಡಿಗೆ ಮಾಂಡೌಸ್ ಚಂಡಮಾರುತ ಅಪ್ಪಳಿಸಿದ್ದು, ಇದರ ಪರಿಣಾಮ ಕರ್ನಾಟಕದ ಮೇಲೂ ಬೀರಲಿದೆ. ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆಯನ್ನು ಐಎಂಡಿ (Weather Report) ನೀಡಿದೆ. ತಮಿಳುನಾಡು, ಪುದುಚೆರಿ, ಆಂಧ್ರ ಪ್ರದೇಶದ ಕರಾವಳಿಯಲ್ಲಿ ಮಾಂಡೌಸ್ ಚಂಡಮಾರುತದ ಪರಿಣಾಮವಾಗಿ ರಾಜ್ಯದ ದಕ್ಷಿಣ ಒಳನಾಡಿಗೆ ನಾಲ್ಕು ದಿನ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಪ್ರಮುಖವಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಜಿಟಿಜಿಟಿ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜಿನಿಂದ ಕೂಡಿರಲಿದೆ. ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ | Cyclone Mandous| ನಾಳೆ ತಮಿಳುನಾಡಿಗೆ ಅಪ್ಪಳಿಸಲಿದೆ ಮಾಂಡೌಸ್ ಚಂಡಮಾರುತ; ಭಾರಿ ಮಳೆಯ ಎಚ್ಚರಿಕೆ ನೀಡಿದ ಐಎಂಡಿ