Site icon Vistara News

Weather Report: ವೀಕೆಂಡ್‌ನಲ್ಲಿ ಕರಾವಳಿಯಲ್ಲಿ ಭಾರಿ ಮಳೆ ಎಚ್ಚರಿಕೆ; ಈ ಜಿಲ್ಲೆಗಳಿಗೂ ಅಲರ್ಟ್

Rain in mangalore

ಬೆಂಗಳೂರು: ಬಿಪರ್‌ಜಾಯ್ ಚಂಡಮಾರುತದ ಪ್ರಭಾವದಿಂದಾಗಿ ಕರಾವಳಿಯಲ್ಲಿ ಭಾರಿ ಮಳೆಯಾಗುವ (Rain News) ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ತಲುಪುವ ಸಾಧ್ಯತೆ ಇದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಭಾಗಗಳಾದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಅಲ್ಲಲ್ಲಿ ಕೆಲವು ಕಡೆ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಕಲಬುರಗಿ, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಕೆಲವು ಸಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದ ಜಿಟಿ ಜಿಟಿ ಮಳೆಯಾಗುವ ಸಾಧ್ಯತೆಯಿದೆ.

ಮೀನುಗಾರರಿಗೆ ಎಚ್ಚರಿಕೆ

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಜತೆಗೆ ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ, ಜತೆಗೆ ಬೀಚ್‌ಗಳಲ್ಲಿ ನಡೆಸುವ ವಾಟರ್‌ ಗೇಮ್ಸ್‌ಗಳಿಗೂ ನಿಷೇಧ ಮಾಡಲಾಗಿದೆ.

ತಾಪಮಾನ ಏರಿಕೆ ಸಾಧ್ಯತೆ

ಮುಂದಿನ 48 ಗಂಟೆಯಲ್ಲಿ ತಾಪಮಾನ ಏರಿಕೆ ಆಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶವು ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Health Tips For Monsoon: ಮಳೆಗಾಲದಲ್ಲಿ ಕಾಡುವ ಶೀತ-ಜ್ವರವನ್ನು ದೂರ ಇರಿಸುವುದು ಹೇಗೆ?

ಇನ್ನು ರಾಜ್ಯದಲ್ಲಿ ಗುರುವಾರದಂದು ಕೂಡ್ಲಿಗಿ 4 ಸೆಂ.ಮೀ, ಮಂಗಳೂರು, ಬರಗೂರು, ಇಳಕಲ್, ಸೈದಾಪುರದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಉಳಿದಂತೆ ಧರ್ಮಸ್ಥಳ, ಹೊನ್ನಾವರ , ಬಿ ಬಾಗೇವಾಡಿ, ತಾವರಗೇರಾ, ಗಂಗಾವತಿ ಏ‌ಆರ್‌ಜಿ , ಸಿರಾ, ಚಿಕ್ಕನಹಳ್ಳಿ ಹಾಗೂ ಭಾಗಮಂಡಲ, ಪರಶುರಾಂಪುರ, ರಾಯಲ್ಪಾಡು, ಹಗರಿ ಕೆವಿಕೆಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಇನ್ನು ಗರಿಷ್ಠ ಉಷ್ಣಾಂಶ 41.3 ಡಿಗ್ರಿ ಸೆಲ್ಸಿಯಸ್ ಕಲಬುಗಿರಯಲ್ಲಿ ದಾಖಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version