ಬೆಂಗಳೂರು: ಈಗಾಗಲೇ ಕರಾವಳಿ ಭಾಗದಲ್ಲಿ ದೊಡ್ಡ ಮಟ್ಟದಲ್ಲಿ ಮಳೆಯನ್ನು ಹೊಯ್ಯಿಸಬೇಕಾಗಿದ್ದ ಮುಂಗಾರು ಮಾರುತಗಳು (Mansoon Rains) ಅಷ್ಟೇನೂ ಅಬ್ಬರಿಸುತ್ತಿಲ್ಲ. ಹಾಗಾಗಿ ಸಾಮಾನ್ಯ ಮಳೆಯ ಮುನ್ಸೂಚನೆ (Weather Report) ಇದೆ.
ಜೂನ್ 14ರ ಮುಂಜಾನೆಯಿಂದ ಅನ್ವಯವಾಗುವ ಹಾಗೆ, ಮುಂದಿನ 24 ಘಂಟೆಗಳಲ್ಲಿ ಕರಾವಳಿಯ ಹಲವು ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳಲ್ಲಿ ಕರಾವಳಿಯ ಹಲವು ಕಡೆಗಳಲ್ಲಿ; ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಆದರೆ, ಭಾರಿ ಮಳೆ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿಲ್ಲ.
ಗುಡುಗು ಮುನ್ನೆಚ್ಚರಿಕೆ
ಮುಂದಿನ 24 ಘಂಟೆಗಳಲ್ಲಿ ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು ಗಾಳಿಯ ವೇಗವು ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಘಂಟೆಗೆ 40-50 ಕಿ.ಮೀ ಹಾಗೂ ದಕ್ಷಿಣ ಒಳನಾಡಿನಲ್ಲಿ ಘಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳಲ್ಲಿ ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು ಗಾಳಿಯ ವೇಗವು ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಘಂಟೆಗೆ 40-50 ಕಿ.ಮೀ ಹಾಗೂ ದಕ್ಷಿಣ ಒಳನಾಡಿನಲ್ಲಿ ಘಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ.
ಗರಿಷ್ಠ ಉಷ್ಣಾಂಶದ ಮುನ್ಸೂಚನೆ
ರಾಜ್ಯದ ಕೆಲವು ಕಡೆ ಮಳೆಯಿಂದಾಗಿ ಸ್ವಲ್ಪ ತಂಪಿನ ವಾತಾವರಣವಿದ್ದರೂ ಉತ್ತರ ಕರ್ನಾಟಕದ ಹಲವೆಡೆ ಇನ್ನೂ ಬಿಸಿಲಿನ ಬೇಗೆ ಜೋರಾಗಿದೆ. ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ 39.6 ಡಿಗ್ರಿ ಸೆಲ್ಷಿಯಸ್ ಕಲಬುರ್ಗಿಯಲ್ಲಿ ದಾಖಲಾಗಿದೆ.
ಮುಂದಿನ 48 ಘಂಟೆಗಳಲ್ಲಿ ಗರಿಷ್ಠ ಉಷ್ಣಾಂಶವು ಒಳನಾಡಿನ ಕೆಲವು ಕಡೆಗಳಲ್ಲಿ 3-4 ಡಿಗ್ರಿ ಸೆಲ್ಷಿಯಸ್ ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಷಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ, ಕಡಲಿಗಿಳಿಯದಂತೆ ಸೂಚನೆ
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಬೆಂಗಳೂರಿನಲ್ಲಿ ಮಳೆ, ಹವಾಮಾನ ಹೇಗಿರಲಿದೆ?
ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.
ಮುಂದಿನ 48 ಗಂಟೆಗಳಲ್ಲೂ ಪರಿಸ್ಥಿತಿ ಇದಕ್ಕಿಂತ ಹೆಚ್ಚು ಭಿನ್ನವಿಲ್ಲ. ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.
ಮಂಗಳವಾರ (ಜೂನ್ 13) ಎಲ್ಲೆಲ್ಲಿ ಮಳೆಯಾಗಿದೆ?
ಮಂಗಳವಾರ ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.
ಭಾರಿ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ಬೆಂಗಳೂರು ಎಚ್‌ಏಎಲ್ ವಿಮಾನ ನಿಲ್ದಾಣ (ಬೆಂಗಳೂರು ನಗರ ಜಿಲ್ಲೆ) 8.
ಇತರ ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ಕಾರವಾರ (ಉತ್ತರ ಕನ್ನಡ ಜಿಲ್ಲೆ), ಹೊಸಕೋಟೆ (ಬೆಂಗಳೂರು ಗ್ರಾಮಾಂತರ ಜಿಲ್ಲೆ), ತಿಪಟೂರು (ತುಮಕೂರು ಜಿಲ್ಲೆ), ಗೋಣಿಕೊಪ್ಪಲು ಕೆವಿಕೆ (ಮಡಿಕೇರಿ ಜಿಲ್ಲೆ) ತಲಾ 4; ಕೋಟ (ಉಡುಪಿ ಜಿಲ್ಲೆ), ಹೊನ್ನಾವರ (ಉತ್ತರ ಕನ್ನಡ ಜಿಲ್ಲೆ), ಮಂಗಳೂರು (ದಕ್ಷಿಣ ಕನ್ನಡ ಜಿಲ್ಲೆ), ಮಾಲೂರು (ಕೋಲಾರ ಜಿಲ್ಲೆ) ತಲಾ 3; ಅಂಕೋಲಾ, ಮಂಕಿ (ಎರಡೂ ಉತ್ತರ ಕನ್ನಡ ಜಿಲ್ಲೆ), ಬೆಳ್ತಂಗಡಿ (ದಕ್ಷಿಣ ಕನ್ನಡ ಜಿಲ್ಲೆ), ಬೆಂಗಳೂರು ನಗರ, ಹುಣಸೂರು (ಮೈಸೂರು ಜಿಲ್ಲೆ) ತಲಾ 2; ಕದ್ರಾ, ಬೇಲಿಕೇರಿ (ಎರಡೂ ಉತ್ತರ ಕನ್ನಡ ಜಿಲ್ಲೆ), ಪುತ್ತೂರು (ದಕ್ಷಿಣ ಕನ್ನಡ ಜಿಲ್ಲೆ), ಕುಂದಾಪುರ (ಉಡುಪಿ ಜಿಲ್ಲೆ), ಜ್ಞಾನಭಾರತಿ ವಿವಿ ಕ್ಯಾಂಪಸ್ (ಬೆಂಗಳೂರು ನಗರ ಜಿಲ್ಲೆ), ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ ಜಿಲ್ಲೆ), ಟಿ ನರಸೀಪುರ, ಸರಗೂರು (ಎರಡೂ ಮೈಸೂರು ಜಿಲ್ಲೆ), ಭಾಗಮಂಡಲ (ಕೊಡಗು ಜಿಲ್ಲೆ), ಕೊಟ್ಟಿಗೆಹಾರ (ಚಿಕ್ಕಮಗಳೂರು ಜಿಲ್ಲೆ) ತಲಾ 1.
ಇದನ್ನೂ ಓದಿ: Monsoon Footwear Fashion: ಮಳೆಗಾಲಕ್ಕೆ ತಕ್ಕಂತೆ ಬದಲಾಗುವ ಫುಟ್‌ವೇರ್ ಸ್ಟೈಲಿಂಗ್‌ಗೆ ಸೈ ಎನ್ನಿ!