Site icon Vistara News

Weather Report : ಬಿರುಗಾಳಿ ಜತೆಗೆ ರಾಜ್ಯದಲ್ಲಿ ನಾಳೆ ಸಾಧಾರಣ ಮಳೆ

Rain in women

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಧ್ಯಮ (Rain news) ಮಳೆಯಾಗಲಿದೆ. ಮಲೆನಾಡು ಮತ್ತು ಒಳನಾಡಿನ ಕೆಲವು ಭಾಗಗಳಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Weather report) ಮುನ್ಸೂಚನೆಯನ್ನು ನೀಡಿದೆ. ರಾಜ್ಯಾದ್ಯಂತ ಗಾಳಿಯ ವೇಗವು ಗಂಟೆಗೆ 30-40ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

ಮಲೆನಾಡಿನ ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ತುಂತುರ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆಯಾದರೆ, ಉಳಿದ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿಯಲ್ಲಿ ಮಳೆಯ ಸಿಂಚನವಾಗಲಿದೆ. ಇನ್ನುಳಿದ ಪ್ರದೇಶಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನ ಕೆಲವು ಕಡೆಗಳಲ್ಲಿ ಮಾತ್ರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲವೊಮ್ಮೆ ಸೂರ್ಯನ ದರ್ಶನವಾದರೆ, ಮತ್ತೆ ಕೆಲವೊಮ್ಮೆ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version