Site icon Vistara News

Weather Report: ವೇಗ ಪಡೆಯದ ಮುಂಗಾರು; ಈ 12 ಜಿಲ್ಲೆಗಳಲ್ಲಿ ಸಾಧಾರಣ ಮಳೆ

Rain News karwar

ಬೆಂಗಳೂರು: ಮುಂದಿನ 48 ಗಂಟೆಯಲ್ಲಿ ಕರಾವಳಿಯಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾದರೆ, ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Weather Report) ಮುನ್ಸೂಚನೆ ನೀಡಿದೆ. ಆದರೆ 12 ಜಿಲ್ಲೆಗಳಲ್ಲಿ ಮುಂಗಾರು ದುರ್ಬಲಗೊಂಡಿದ್ದು, ಸಾಧಾರಣ ಮಳೆಯಾಗಲಿದೆ.

ಮಲೆನಾಡಿನ ಭಾಗವಾದ ಕೊಡಗು ಜಿಲ್ಲೆಯಾದ್ಯಂತ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಧಾರಾಕಾರ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಮೈಸೂರಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದರೆ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಬೆಳಗಾವಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಬೀದರ್, ಬಾಗಲಕೋಟೆ, ಕೊಪ್ಪಳ, ವಿಜಯಪುರ ಹಾಗೂ ರಾಯಚೂರು, ಕಲಬುರಗಿ, ಧಾರವಾಡ, ಗದಗ, ಹಾವೇರಿಯಲ್ಲಿ ಜಿಟಿ ಜಿಟಿ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮೀನುಗಾರರಿಗೆ ಮುಂದುವರಿದ ಅಲರ್ಟ್‌

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ನಿಂದ 55 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.

ಇದನ್ನೂ ಓದಿ: Monsoon Food: ಮಳೆಗಾಲದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಲು ಕೆಂಪಕ್ಕಿ ಅನ್ನ!

ಒಳನಾಡಿನಲ್ಲಿ ಚುರುಕುಗೊಂಡ ಮುಂಗಾರು

ರಾಜ್ಯದಲ್ಲಿ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ಚುರುಕಾಗಿತ್ತು ಹಾಗೂ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಕರಾವಳಿ ಹಾಗೂ ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಅತಿ ಹೆಚ್ಚು ಮಳೆಯು ಕುಂದಾಪುರ, ಕೋಟ, ಮಂಕಿಯಲ್ಲಿ ದಾಖಲಾಗಿದೆ. ಈ ಭಾಗದಲ್ಲಿ ತಲಾ 11 ಸೆಂ.ಮೀ ಮಳೆಯಾಗಿದೆ. ಹೊನ್ನಾವರ, ಶಿರಾಲಿ ಪಿಟಿಒ ತಲಾ 9 ಹಾಗೂ ಗೇರುಸೊಪ್ಪ 8, ಅಂಕೋಲಾ, ಕಾರ್ಕಳದಲ್ಲಿ ತಲಾ 7ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version