Site icon Vistara News

Weather Report: ಮುಂಗಾರು ಚುರುಕು; ಜೂ.17ರವರೆಗೆ ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ

Rain in hasan

ಬೆಂಗಳೂರು: ಕೇರಳ ಮೂಲಕ ಕರುನಾಡಿಗೆ‌ ಮುಂಗಾರು ಪ್ರವೇಶವಾಗಿದ್ದು, ಕರಾವಳಿ ಭಾಗದಲ್ಲಿ ವರುಣ (Rain News) ಅಬ್ಬರಿಸುತ್ತಿದ್ದಾನೆ. ಮುಂದಿನ ನಾಲ್ಕು ದಿನಗಳು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Weather report) ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಬಿಪರ್‌ಜಾಯ್‌ ಚಂಡಮಾರುತದ ಯಾವುದೆ ಪ್ರಭಾವ ಇಲ್ಲ. ಬದಲಿಗೆ ನೈರುತ್ಯ ಮುಂಗಾರು ಪ್ರವೇಶದಿಂದಾಗಿ ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆಯಾಗುತ್ತಿದೆ ಎಂದು ತಜ್ಞರು ತಿಳಿಸಿದ್ದಾರೆ. ರಾಜ್ಯಾದ್ಯಂತ ನಾಲ್ಕು ದಿನಗಳು ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಎಚ್ಚರಿಸಲಾಗಿದೆ.

ಕರಾವಳಿ ಭಾಗದಲ್ಲಿ ಬಿರುಗಾಳಿ ಸಹಿತ ಮಳೆಯ ಎಚ್ಚರಿಕೆ ನೀಡಲಾಗಿದೆ. ಕರಾವಳಿ ತೀರದ ಹಲವು ಕಡೆ ಭಾರಿ ಅಲೆಗಳ ಕಾರಣದಿಂದ ಕಡಲ್ಕೊರೆತ ಉಂಟಾಗಿದೆ. ಹೀಗಾಗಿ ಸಮುದ್ರಕ್ಕೆ ಮೀನುಗಾರರು ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ಬೀಸಲಿದ್ದರೆ, ದಕ್ಷಿಣ ಒಳನಾಡಿನಲ್ಲಿ ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ.

ಎಲ್ಲೆಲ್ಲಿ ಮಳೆ ಅಬ್ಬರ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಬಿರುಗಾಳಿ ಸಹಿತ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿತ್ರದುರ್ಗ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Rain News: ಬಿಪರ್‌ಜಾಯ್ ಸೈಕ್ಲೋನ್ ಎಫೆಕ್ಟ್; ಸಮುದ್ರ ಪಾಲಾದ ಮನೆಗಳು, ಇನ್ನೂ 5 ದಿನ ಭಾರಿ ಮಳೆ

ಉತ್ತರ ಒಳನಾಡಿನ ಜಿಲ್ಲೆಗಳಾದ ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ಮಲೆನಾಡಿನ ಭಾಗಗಳಾದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಮಳೆ ನಡುವೆಯು ಹಲವು ಒಳನಾಡಿನ ಕೆಲವು ಜಿಲ್ಲೆಗಳಲ್ಲಿ 3-4 ಡಿಗ್ರಿ ಸೆಲ್ಸಿಯಸ್‌ ಮತ್ತು ಕರಾವಳಿಯಲ್ಲಿ 2-3 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version