ಬೆಂಗಳೂರು: ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಭಾರಿ (Rain News) ಮಳೆಯಾಗಲಿದ್ದು, ಜತೆಗೆ ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ (Weather report) ಇದೆ. ಒಳನಾಡಿನಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ. ಇರಲಿದೆ.
ಕರಾವಳಿಯಲ್ಲಿ ಮಳೆ ಆರ್ಭಟ
ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇತ್ತ ಮಲೆನಾಡಿನ ಕೊಡಗು, ಶಿವಮೊಗ್ಗ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಘಟ್ಟಪ್ರದೇಶದಲ್ಲಿ ಸಾಧಾರಣ ಮಳೆಯಾಗಲಿದೆ.
ಒಳನಾಡಲ್ಲಿ ಅಲ್ಪ ಮಳೆ
ಉತ್ತರ ಒಳನಾಡಿನ ಜಿಲ್ಲೆಯಾದ ಬೀದರ್, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಆಗಲಿದೆ. ಉಳಿದ ಭಾಗಗಳಲ್ಲಿ ಲಘುವಾಗಿ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಜಿಲ್ಲೆಯಾದ ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಮೈಸೂರು, ಮಂಡ್ಯ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಅತಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಲ್ಲಿ ಚದುರಿದ ಮಳೆ
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ ಆಗೊಮ್ಮೆ ಈಗೊಮ್ಮೆ ಸೂರ್ಯ ದರ್ಶನ ಕೊಟ್ಟರೆ, ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಮಳೆ ಜತೆಗೆ ಗುಡುಗು ಇರಲಿದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ : Self Harm: ಮಗನ ಅನಾರೋಗ್ಯ, ನೊಂದ ತಾಯಿ ಆಸ್ಟ್ರೇಲಿಯಾದಿಂದ ಬಂದು ಭಾರತದಲ್ಲಿ ಆತ್ಮಹತ್ಯೆ
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 29 ಡಿ.ಸೆ – 20 ಡಿ.ಸೆ
ಮಂಗಳೂರು: 27 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 28 ಡಿ.ಸೆ – 21 ಡಿ.ಸೆ
ಗದಗ: 28 ಡಿ.ಸೆ – 20 ಡಿ.ಸೆ
ಹೊನ್ನಾವರ: 29 ಡಿ.ಸೆ- 24 ಡಿ.ಸೆ
ಕಲಬುರಗಿ: 28 ಡಿ.ಸೆ – 23 ಡಿ.ಸೆ
ಬೆಳಗಾವಿ: 27 ಡಿ.ಸೆ – 21 ಡಿ.ಸೆ
ಕಾರವಾರ: 30 ಡಿ.ಸೆ – 25 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ