ಬೆಂಗಳೂರು: ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಬೀದರ್ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಇಂದು (ಜು.20) ಅತಿ ಹೆಚ್ಚು ಮಳೆಯಾಗುವ (Heavy Rain alert) ಸಾಧ್ಯತೆ ಇದೆ. ಉತ್ತರ ಒಳನಾಡಿನ ಕಲಬುರಗಿ, ಬೆಳಗಾವಿ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ (Weather report) ಭಾರೀ ಮಳೆಯಾಗುವ (Rain News) ಸಾಧ್ಯತೆ ಇದೆ.
ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಜಿಲ್ಲೆಯಾದ ದಾವಣಗೆರೆ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಮೈಸೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಜಿಲ್ಲೆಯಾದ ಬೆಳಗಾವಿ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಬಾಗಲಕೋಟೆ, ವಿಜಯಪುರ ಯಾದಗಿರಿ, ರಾಯಚೂರು, ಗದಗ ಮತ್ತು ಧಾರವಾಡ ಜಿಲ್ಲೆಗಳಲ್ಲಿ ವ್ಯಾಪಕದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.
ಇನ್ನು ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಒಂದೆರಡು ಬಾರಿ ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಗುಡುಗು ಮುನ್ನೆಚ್ಚರಿಕೆ
ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಮಿಂಚು ಗುಡುಗಿನ ಸಾಧ್ಯತೆ ಇದ್ದು, ಬಿರುಗಾಳಿಯ ವೇಗವು 30-40 ಕಿ.ಮೀ. ಇರುವ ಸಾಧ್ಯತೆ ಇದೆ.
ಇದನ್ನೂ ಓದಿ: Beauty Tips: ಮಹಿಳೆಯರೇ, ಸರಳವಾಗಿ ಸುಂದರವಾಗಿ ಕಾಣಲು ಇಲ್ಲಿವೆ ಹತ್ತು ಸೂತ್ರಗಳು!
ಮೀನುಗಾರರಿಗೆ ಎಚ್ಚರಿಕೆ
ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 28 ಡಿ.ಸೆ – 23 ಡಿ.ಸೆ
ಗದಗ: 25 ಡಿ.ಸೆ – 20 ಡಿ.ಸೆ
ಚಿತ್ರದುರ್ಗ: 26 ಡಿ.ಸೆ – 21 ಡಿ.ಸೆ
ಬೆಳಗಾವಿ: 23 ಡಿ.ಸೆ – 20 ಡಿ.ಸೆ
ಕಾರವಾರ: 30 ಡಿ.ಸೆ – 25 ಡಿ.ಸೆ
ಮಂಗಳೂರು: 29 ಡಿ.ಸೆ – 25 ಡಿ.ಸೆ
ಹೊನ್ನಾವರ: 29 ಡಿ.ಸೆ- 23 ಡಿ.ಸೆ
ಬೆಂಗಳೂರು ನಗರ: 27 ಡಿ.ಸೆ – 20 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ