Site icon Vistara News

Weather Report: ಆಗಿದೆ ಮುಂಗಾರಿನ ರಂಗ ಪ್ರವೇಶ; ಹಂತ ಹಂತವಾಗಿ ನೀಡಲಿದೆ ಭರ್ಜರಿ ಪ್ರದರ್ಶನ!

Karnataka Rain in coastal

ಬೆಂಗಳೂರು: ಕೊನೆಗೂ ರಾಜ್ಯಕ್ಕೆ ನೈರುತ್ಯ ಮುಂಗಾರು (Southwest Monsoon) ಪ್ರವೇಶವಾಗಿದ್ದು, ಕರಾವಳಿ ಭಾಗದಲ್ಲಿ ಉತ್ತಮವಾಗಿ ಮಳೆಯಾಗುತ್ತಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಉತ್ತಮ ಮಳೆ (Rain news) ಆಗುತ್ತಿದ್ದು, ಉಳಿದಂತೆ ನಿಧಾನವಾಗಿ ರಾಜ್ಯದ ವಿವಿಧೆಡೆ ವ್ಯಾಪಿಸಿಕೊಳ್ಳಲಿದೆ ಎಂದು ಹವಾಮಾನ ಇಲಾಖೆ (Weather Report) ಮುನ್ಸೂಚನೆ ನೀಡಿದೆ.

ಇನ್ನು ಎರಡು ದಿನಗಳಲ್ಲಿ ಕೆಲವು ಭಾಗಗಳಲ್ಲಿ ವರುಣ ಆವರಿಸಿಕೊಳ್ಳಲಿದ್ದು, ಅಲ್ಲಿಂದ ಬಹುತೇಕ ಎಲ್ಲ ಕಡೆ ಹಂತ ಹಂತವಾಗಿ ಆರಂಭವಾಗಲಿದೆ. ಇನ್ನು ಕೃಷಿ ಚಟುವಟಿಕೆ ಸಹ ಬಿರುಸುಗೊಳ್ಳಲಿದ್ದು, ರೈತರು ಸಜ್ಜಾಗುತ್ತಿದ್ದಾರೆ.

ಇದನ್ನೂ ಓದಿ: Free Bus Travel: ಉಚಿತ ಪ್ರಯಾಣಕ್ಕೆ ಮುಖ್ಯಮಂತ್ರಿಯಿಂದ ಮೊದಲ ಟಿಕೆಟ್​ ಪಡೆಯುವ ಮಹಿಳೆ ಯಾರು?

ಈ ಬಾರಿ ಮುಂಗಾರು ತಡವಾಗಿ ಪ್ರವೇಶಿಸಿದರೂ ವಾಡಿಕೆಯ ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಜೂನ್‌ ಮೊದಲೆರಡು ವಾರದೊಳಗೆ ಪ್ರವೇಶಿಸುವ ಮುಂಗಾರು ಮಳೆಯು ಜುಲೈ ಹಾಗೂ ಆಗಸ್ಟ್‌, ಸೆಪ್ಟೆಂಬರ್‌ವರೆಗೆ ಇರಲಿದೆ. ವಾಡಿಕೆಯ ಪ್ರಕಾರ ಈ ನಾಲ್ಕು ತಿಂಗಳಲ್ಲಿ ರಾಜ್ಯಕ್ಕೆ 83 ಸೆಂ.ಮೀ ನಷ್ಟು, ಬೆಂಗಳೂರಲ್ಲಿ ನಾಲ್ಕು ತಿಂಗಳಲ್ಲಿ 60 ಸೆಂ.ಮೀ ಮಳೆಯಾಗಬೇಕೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಕರಾವಳಿಯಲ್ಲಿ ಭರ್ಜರಿ ಮಳೆ

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಐದು ದಿನಗಳು ಗಾಳಿಯ ವೇಗವು ಗಂಟೆಗೆ 40-50ಕಿ.ಮೀ ತಲುಪುವ ಸಾಧ್ಯತೆ ಇದೆ. ಈ ವೇಳೆ ಅಲೆಗಳ ಅಬ್ಬರ ಇರಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಜತೆಗೆ ಪ್ರವಾಸಿಗರು, ಸಮುದ್ರ ತೀರದ ಜನರು ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ.

ಬೆಂಗಳೂರಲ್ಲೂ ಇದೆ ವರ್ಷಧಾರೆ

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯಂದು ಗುಡುಗು, ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಿರುಗಾಳಿಯು ಬೀಸಲಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಮರದ ಕೆಳಗೆ ನಿಲ್ಲದಂತೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: ಹಾಸನಕ್ಕೆ ಹೊರಟಿದ್ದ ಸಚಿವರಿಗೆ ಕುಣಿಗಲ್​​ನಲ್ಲಿ ಕಣ್ಣಿಗೆ ಗಾಯ; ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಧಾರವಾಡ, ಮಂಡ್ಯ, ಶಿವಮೊಗ್ಗ, ವಿಜಯನಗರ ಸೇರಿದಂತೆ ಬಾಗಲಕೋಟೆ, ಬಳ್ಳಾರಿ, ಬೆಳಗಾವಿಯಲ್ಲಿ ವ್ಯಾಪಕ ಮಳೆಯಾಗಲಿದೆ. ಚಿತ್ರದುರ್ಗ, ದಾವಣಗೆರೆ, ಗದಗ, ಹಾವೇರಿ, ಕೊಪ್ಪಳದಲ್ಲೂ ಮಳೆಯ ಅಬ್ಬರ ಇರಲಿದೆ. ತುಮಕೂರು, ಮೈಸೂರು, ರಾಯಚೂರು, ಕಲಬುರಗಿಗೂ ಮಳೆ ಅಲರ್ಟ್‌ ನೀಡಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version