ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಮಳೆ ಅಬ್ಬರಿಸುತ್ತಿದ್ದು ಬಹುತೇಕ ಎಲ್ಲ ಕಡೆ ಭಾರಿ ಮಳೆಯಾಗುತ್ತಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ಜುಲೈ 6-7ರಂದು ಕರಾವಳಿಯಲ್ಲಿ ಭಾರಿ ಮಳೆಯ ಮನ್ಸೂಚನೆಯನ್ನು ನೀಡಿದ್ದು, ಅರಬ್ಬೀ ಸಮುದ್ರದ ಮಟ್ಟದಲ್ಲಿ ತೇವಾಂಶ ತುಂಬಿದ ಗಾಳಿ ವೇಗವಾಗಿ ಬೀಸುತ್ತಿದೆ. ಈ ಕಾರಣದಿಂದ ಹೆಚ್ಚು ಮಳೆಯಾಗಲಿದ್ದು, ರಾಜ್ಯದ ಕೆಲವು ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಒಳನಾಡಿನ ಮೂರು ಜಿಲ್ಲೆಗಳಿಗೆ ಅಲರ್ಟ್ ನೀಡಿದ್ದು, ಬೆಳಗಾವಿಗೆ ಆರೇಂಜ್, ಧಾರವಾಡ ಮತ್ತು ಹಾವೇರಿಗೆ ಯೆಲ್ಲೋ ಅಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನಲ್ಲಿ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಆರೇಂಜ್ ಮತ್ತು ಹಾಸನ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಸಾಧರಣದಿಂದ ಮಧ್ಯಮ ಪ್ರಮಾಣದಲ್ಲಿ ಮಳೆ ಆಗುವ ಸಾಧ್ಯತೆ ಇದೆ. ಹೀಗಾಗಿ ಈ ಭಾಗದಲ್ಲಿ ಯಾವುದೇ ಅಲರ್ಟ್ ಘೋಷಣೆ ಮಾಡಿಲ್ಲ.
ಮೀನುಗಾರರಿಗೆ ಎಚ್ಚರಿಕೆ
ಕರಾವಳಿ ಭಾಗದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಸಮುದ್ರ ಮಟ್ಟದಲ್ಲಿ ಬಿರುಗಾಳಿ ವೇಗವು ಪ್ರತಿ ಗಂಟೆಗೆ 40-50 ಕಿ.ಮೀ ಬೀಸುವ ಸಾಧ್ಯತೆ ಇದ್ದು, ಮೀನುಗಾರಿಕೆಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ | Rain fury: ಮಳೆಗೆ ತತ್ತರಿಸಿದ ಮುಂಬಯಿ, ಇನ್ನಷ್ಟು ವರುಣಾರ್ಭಟದ ಮುನ್ನೆಚ್ಚರಿಕೆ