Site icon Vistara News

Weather Report | ಮುಂದಿನ 24 ಗಂಟೆಯಲ್ಲಿ ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

rain

ಬೆಂಗಳೂರು: ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ (Weather Report) ನೀಡಿ ಹವಾಮಾನ ಇಲಾಖೆ ಅಲರ್ಟ್‌ ಘೋಷಣೆ ಮಾಡಿದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ಚುರುಕಾಗಿರಲಿದ್ದು, ಆದಾಗ್ಯೂ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಬಹುತೇಕ ಭಾಗ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆ ಮುಂದುವರಿಯಲಿದೆ.

ಇದನ್ನೂ ಓದಿ : Rain News | ಮಳೆಯಿಂದ ಉಕ್ಕಿದ ನದಿ: ದಡದಲ್ಲೇ ಮಗುವಿನ ಜನನ

Exit mobile version