Weather Report: ಕರಾವಳಿಯಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆ; ರೆಡ್‌ ಅಲರ್ಟ್‌ ಘೋಷಣೆ - Vistara News

ಕರ್ನಾಟಕ

Weather Report: ಕರಾವಳಿಯಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆ; ರೆಡ್‌ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಜುಲೈ 10, 11ರಂದು ಭಾರಿ ಮಳೆ ಮುನ್ಸೂಚನೆ ಇದ್ದು, ಹಲವು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ವಿಸ್ತರಿಸಲಾಗಿದೆ.

VISTARANEWS.COM


on

ಮಳೆ
ಮಳೆ ಪರಿಣಾಮ ನೆರೆ ಪರಿಸ್ಥಿತಿ ಉಂಟಾಗಿರುವುದು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಜ್ಯ: ರಾಜ್ಯಾದ್ಯಂತ ನೈರುತ್ಯ ಮಾನ್ಸೂನ್‌ ಸಕ್ರಿಯವಾಗಿದ್ದು, ಬಹುತೇಕ ಕಡೆ ಮಳೆಯಾಗುತ್ತಿದ್ದು, ಮುಂದಿನ 5 ದಿನಗಳು ಮಳೆ ಮುಂದುವರಿಯುವ ಸಾಧ್ಯತೆಯಿದೆ. ಕರಾವಳಿ ಭಾಗದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮುಂದಿನ 48 ಗಂಟೆಗಳ ಕಾಲ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮಳೆಯ ಅಬ್ಬರ ಇರಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಜುಲೈ 11ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧರಣದಿಂದ ಮಧ್ಯಮ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ | ಮಳೆ ಅವಾಂತರ | ಮಂಗಳೂರಿನ ಪಿಲಿಕುಳ ಮೃಗಾಲಯದಲ್ಲಿ ನೆರೆ

ಉತ್ತರ ಒಳನಾಡಿನ ಕಲಬುರಗಿ ಜಿಲ್ಲೆಯಲ್ಲಿ ಭಾನುವಾರ ಭಾರಿ ಮಳೆಯ ಎಚ್ಚರಿಕೆ ನೀಡಿದ್ದು, ಬೆಳಗಾವಿ ಮತ್ತು ಬೀದರ್, ಧಾರವಾಡ, ಹಾವೇರಿ ಹಾಗೂ ಯಾದಗಿರಿ, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕೊಡುಗಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಮುಂದುವರಿಕೆ

ಕೊಡುಗು ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ವರುಣ ಅಬ್ಬರಿಸುತ್ತಿದ್ದು ಜಲಾಶಯ, ನದಿ ಪಾತ್ರದ ನಿವಾಸಿಗಳಲ್ಲಿ ಆತಂಕ ಹೆಚ್ಚಿಸಿದೆ. ಅಪಾಯ ಮಟ್ಟ ಮೀರಿ ಕಾವೇರಿ ನದಿ ಹರಿಯುತ್ತಿದ್ದು, ಜಿಲ್ಲಾಡಳಿತವು ಮುಂಜಾಗ್ರತಾ ಕ್ರಮವಾಗಿ ಎಲ್ಲ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.

ಇದನ್ನೂ ಓದಿ | Rain News | ವರುಣನ ಅಬ್ಬರಕ್ಕೆ ಅಪಾರ ಹಾನಿ: ಕಾಫಿ ಬೆಳೆ ನಷ್ಟ, ಕೊಡಗಿನಲ್ಲಿ ನಡುಗಿದ ಭೂಮಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Wonderla Bengaluru: ಬೇಸಿಗೆ ರಜೆಯನ್ನು ಇನ್ನಷ್ಟು ಮಜವಾಗಿಸಲು ವಂಡರ್‌ಲಾದಲ್ಲಿ ʼಸಮ್ಮರ್‌ಲಾ ಫಿಯೆಸ್ಟಾ-2024ʼ: ಭರಪೂರ ಆಫರ್ಸ್‌

VISTARANEWS.COM


on

Wonderla Bengaluru
Koo

ಬೆಂಗಳೂರು: ಈ ಬೇಸಿಗೆಯ ಮಜವನ್ನು ಇನ್ನಷ್ಟು ಹೆಚ್ಚಿಸಲು ಭಾರತದ ಅತಿದೊಡ್ಡ ಅಮ್ಯೂಸ್‌ಮೆಂಟ್ ಪಾರ್ಕ್ ವಂಡರ್‌ಲಾ (Wonderla Bengaluru) ಬೆಂಗಳೂರು ಪಾರ್ಕ್‌ನಲ್ಲಿ ‘ಸಮ್ಮರ್‌ಲಾ ಫಿಯೆಸ್ಟಾ’ (Summer Fiesta 2024) ನಡೆಸುತ್ತಿದ್ದು, ಮೇ 31 ರವರೆಗೂ ಇರಲಿದೆ. ಸಮ್ಮರ್‌ಲಾ ಫಿಯೆಸ್ಟಾದಲ್ಲಿ ಸಾಕಷ್ಟು ಆಫರ್‌ಗಳು ನಿಮ್ಮನ್ನು ಕೈ ಬೀಸಿ ಕರೆಯುತ್ತಿದ್ದು, ಅನೇಕ ಮೋಜಿನ ರೈಡ್‌, ವಾಟರ್‌ ಗೇಮ್‌ಗಳು, ಫುಡ್‌-ಫೆಸ್ಟಿವಲ್‌, ಡಿಜೆ ಮ್ಯೂಸಿಕ್‌ ಸೇರಿದಂತೆ ಅನೇಕ ವಿಶೇಷತೆಗಳು ಈ ಸಮ್ಮರ್‌ಲಾದಲ್ಲಿ ಇರಲಿವೆ. ಇದಲ್ಲದೆ, ಡೊಳ್ಳು ಕುಣಿತ, ಚಿಂಗಾರಿ ಮೇಳಗಳಂತಹ ವಿಶೇಷ ಸಾಂಸ್ಕೃತಿಕ ಪ್ರದರ್ಶನ ಹಾಗೂ ಮೆರವಣಿಗೆ ಇರಲಿವೆ. ವಾರಾಂತ್ಯದಲ್ಲಿ ನಿಮ್ಮನ್ನು ಇನ್ನಷ್ಟು ಉತ್ಸಾಹಿಗಳನ್ನಾಗಿ ಮಾಡಲು ಡಿಜೆ ಮ್ಯೂಸಿಕ್‌ ಸಹ ಆಯೋಜಿಸಲಾಗುತ್ತಿದೆ.

ಇನ್ನು ಭಾನುವಾರದಂದು ವಂಡರ್‌ಲಾ ರೆಸಾರ್ಟ್‌ನಲ್ಲಿ ಬೇಸಿಗೆಯ ಬ್ರಂಚ್‌ ಸಹ ಇರಲಿದೆ. ಈ ಎಲ್ಲಾ ಮನರಂಜನೆಗಳ ಮೇಲೂ ಸಾಕಷ್ಟು ರಿಯಾಯಿತಿ ಹಾಗೂ ಆಫರ್‌ಗಳು ಇದ್ದು, ಆಸಕ್ತರು ಭಾಗಿಯಾಗಿ ಈ ಬೇಸಿಗೆ ರಜೆಯನ್ನು ಇನ್ನಷ್ಟು ಸಂತಸದಿಂದ ಕಳೆಯಬಹುದು. ಈ ಎಲ್ಲಾ ಇತರ ಕೊಡುಗೆಗಳು ಆನ್‌ಲೈನ್ ಮತ್ತು ಆಫ್‌ಲೈನ್ ಬುಕಿಂಗ್‌ಗಳಿಲ್ಲಿ ಲಭ್ಯವಿರಲಿದೆ. ಪಾರ್ಕ್‌ನಲ್ಲಿ ಈಗ ಲಭ್ಯವಿರುವ ಹೊಸ ವಿಶೇಷ ಪಾನೀಯ ಕೌಂಟರ್‌ಗಳೊಂದಿಗೆ ಈ ಬೇಸಿಗೆಯ ಶಾಖವನ್ನು ತಣಿಸಲು ತಾಜಾ ಹಣ್ಣಿನ ಜ್ಯೂಸ್‌ಗಳು, ಋತುವಿನ ಅತ್ಯುತ್ತಮ ಆಮ್ರಾಸ್‌, ತಂಪಾದ ಮಜ್ಜಿಗೆ ಮತ್ತು ಬೇಸಿಗೆಯ ಪಾನೀಯಗಳು ಲಭ್ಯವಿರಲಿದೆ.

ಇದನ್ನೂ ಓದಿ | E-Pass Mandatory: ಊಟಿ, ಕೊಡೈಕೆನಾಲ್‌ ಪ್ರವಾಸ ಹೊರಟಿದ್ದೀರಾ? ಹಾಗಿದ್ದರೆ ಗಮನಿಸಿ

ಆಫರ್‌ಗಳ ವಿವರ ಇಲ್ಲಿದೆ

  • ವಂಡರ್‌ಲಾಗೆ ಭೇಟಿ ನೀಡಲು ಬಯಸುವವರಿಗೆ Early Bird ಹೆಸರಿನಲ್ಲಿ ಶೇ. 10ರಷ್ಟು ರಿಯಾಯಿತಿ ಸಿಗಲಿದೆ. ಈ ಕೊಡುಗೆ(Offer) ಪಡೆಯಲು ಮೂರು ದಿನಗಳ ಮುಂಚಿತವಾಗಿ ಟಿಕೆಟ್‌ಗಳನ್ನು ಆನ್‌ಲೈನ್‌ನಲ್ಲಿ ಬುಕ್‌ ಮಾಡಿಕೊಳ್ಳಬೇಕು.
  • ಜನ್ಮದಿನದ ಆಫರ್‌, ವಿಶೇಷವಾಗಿ ಮೇ ತಿಂಗಳಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವವರಿಗೆ 1 ಟಿಕೆಟ್‌ ಖರೀದಿಸಿದರೆ ಮತ್ತೊಂದು ಟಿಕೆಟ್‌ ಉಚಿತವಾಗಿ ಸಿಗಲಿದೆ.
  • ಇನ್ನು, ವಿದ್ಯಾರ್ಥಿಗಳಿಗಾಗಿ ಹಾಲ್ ಟಿಕೆಟ್ ಆಫರ್ ಸಹ ಚಾಲ್ತಿಯಲ್ಲಿದೆ. 2023-2024ರ ಶೈಕ್ಷಣಿಕ ವರ್ಷದ 10ನೇ, 11ನೇ ಮತ್ತು 12ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ಮೂಲ ಪರೀಕ್ಷೆಯ ಹಾಲ್ ಟಿಕೆಟ್‌ಗಳನ್ನು ಪ್ರಸ್ತುತಪಡಿಸಿ ಪಾರ್ಕ್ ಪ್ರವೇಶ ಟಿಕೆಟ್‌ಗಳ ಮೇಲೆ ಶೇ. 35ರಷ್ಟು ರಿಯಾಯಿತಿಯನ್ನು ಪಡೆಯಬಹುದು.
  • ವಂಡರ್‌ಲಾ ಕಾಲೇಜು ವಿದ್ಯಾರ್ಥಿಗಳಿಗೆ (16-24 ವರ್ಷ ವಯಸ್ಸಿನವರು) ತಮ್ಮ ಕಾಲೇಜು ಐಡಿ ಕಾರ್ಡ್‌ಗಳನ್ನು ಪ್ರಸ್ತುತಪಡಿಸಿದರೆ ಶೇ. 25ರಷ್ಟು ರಿಯಾಯಿತಿ ಪಡೆಯಲಿದ್ದಾರೆ, ಜೊತೆಗೆ, ವಿದ್ಯಾರ್ಥಿಗಳು ಆಹಾರ ಆಯ್ಕೆಗಳನ್ನು ಒಳಗೊಂಡಿರುವ ಕಾಂಬೊ ಪ್ಯಾಕೇಜ್‌ಗಳನ್ನು ಸಹ ಪಡೆಯಬಹುದು. ಆರಂಭಿಕ ಅರ್ಲಿ ಬರ್ಡ್‌ ಕೊಡುಗೆಯನ್ನು ಹೊರತುಪಡಿಸಿ, ಎಲ್ಲಾ ಇತರ ಕೊಡುಗೆಗಳು ಆನ್‌ಲೈನ್ ಮತ್ತು ಆಫ್‌ಲೈನ್ ಬುಕಿಂಗ್‌ಗಳಿಗೆ ಮಾನ್ಯವಾಗಿರುತ್ತವೆ. ಅತಿಥಿಗಳು ತಮ್ಮ ವಂಡರ್ಲಾ ಸಮ್ಮರ್ಲಾ ಫಿಯೆಸ್ಟಾ ಭಾಗವಾಗಿ ಮೇ 31 ರವರೆಗೆ ಪ್ರತಿ ಶನಿವಾರ ನಡೆಯುವ ವಂಡರ್ಲಾ ವಿಶೇಷ ಪೂಲ್ ಪಾರ್ಟಿಗಳೊಂದಿಗೆ ಭಾಗವಹಿಸಬಹುದು.

ಈ ಕುರಿತು ಮಾತನಾಡಿದ ವಂಡರ್‌ಲಾ ಹಾಲಿಡೇಸ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಅರುಣ್ ಕೆ. ಚಿಟ್ಟಿಲಪ್ಪಿಳ್ಳಿ, ಬೇಸಿಗೆ ರಜೆಯನ್ನು ಇನ್ನಷ್ಟು ಉತ್ಸಾಹ ಭರಿತವನ್ನಾಗಿದಲು ವಂಡರ್‌ಲಾ “ಸಮ್ಮರ್ಲಾ ಫಿಯೆಸ್ಟಾ’ ಆಯೋಜಿಸಿದೆ. ಈ ಸಮ್ಮರ್ಲಾದಲ್ಲಿ ಇಡೀ ಕುಟುಂಬಗಳು, ಕಾಲೇಜು ಸ್ನೇಹಿತರು, ಮಕ್ಕಳು ಎಲ್ಲರೂ ತಮ್ಮ ಪ್ರೀತಿಪಾತ್ರರೊಂದಿಗೆ ಆಗಮಿಸಿ, ಆನಂದಿಸಬಹುದು.

ಸಮ್ಮರ್‌ಲಾ ಭಾಗವಾಗಿ ಫುಡ್‌ಫೆಸ್ಟಿವಲ್‌, ಸಾಂಸ್ಕೃತಿಕ ಮೆರವಣಿಗೆ, ಡಿಜೆ ಮ್ಯೂಸಿಕ್‌ ಸೇರಿದಂತೆ ಇನ್ನೂ ಅನೇಕ ಮನರಂಜನೆಗಳು ಇರಲಿವೆ. ಈ ಎಲ್ಲಾ ಮನರಂಜನೆಯೊಂದಿಗೆ ನಿಮ್ಮ ಸವಿನೆನಪನ್ನು ಅಚ್ಚಳಿಯದಂತೆ ಮಾಡುವುದೇ ನಮ್ಮ ವಂಡರ್‌ಲಾದ ಪ್ರಮುಖ ಉದ್ದೇಶ ಎಂದು ಹೇಳಿದರು.

ವಂಡರ್‌ಲಾ ಆನ್‌ಲೈನ್ ಪೋರ್ಟಲ್ ಮೂಲಕ ಅಥವಾ ನೇರವಾಗಿ ಪಾರ್ಕ್ ಕೌಂಟರ್‌ಗಳಲ್ಲಿ ಟಿಕೆಟ್‌ಗಳನ್ನು ಮುಂಗಡವಾಗಿ ಬುಕ್ ಮಾಡುವ ಮೂಲಕ ಸಮ್ಮರ್ಲಾವನ್ನು ಆನಂದಿಸಿ.

ಇದನ್ನೂ ಓದಿ | Jammu Tour: ಜಮ್ಮುವಿಗೆ ಭೇಟಿ ನೀಡುವವರು ಈ ಸ್ಥಳಗಳನ್ನು ಮಿಸ್ ಮಾಡದೇ ನೋಡಿ!

ಹೆಚ್ಚಿನ ಮಾಹಿತಿ ಮತ್ತು ಬುಕಿಂಗ್‌ಗಳಿಗಾಗಿ, www.wonderla.com ಗೆ ಭೇಟಿ ನೀಡಿ ಅಥವಾ +91 80372 30333, +91 80350 73966 ಅನ್ನು ಸಂಪರ್ಕಿಸಿ.

Continue Reading

ಉತ್ತರ ಕನ್ನಡ

Lok Sabha Election 2024: ಗೊಂದಲಕ್ಕೆ ಅವಕಾಶವಿಲ್ಲದೆ ಚುನಾವಣೆ ನಡೆಸಲು ಉ.ಕ ಡಿಸಿ ಸೂಚನೆ

Lok Sabha Election 2024: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮೇ 7 ರಂದು ನಡೆಯುವ ಮತದಾನದ ವೇಳೆ ಮತಗಟ್ಟೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ, ತರಬೇತಿಯ ಅವಧಿಯಲ್ಲಿ ತಮ್ಮಲ್ಲಿರುವ ಎಲ್ಲಾ ಗೊಂದಲಗಳನ್ನು ಬಗೆಹರಿಸಿಕೊಂಡು, ಮತದಾನದ ಯಾವುದೇ ಗೊಂದಲಗಳಿಗೆ ಒಳಗಾಗದೇ ಅತ್ಯಂತ ಯಶಸ್ವಿಯಾಗಿ ಚುನಾವಣೆ ನಡೆಯುವಂತೆ ಕಾರ್ಯನಿರ್ವಹಿಸಬೇಕು. ಇವಿಎಂಗಳ ಬಳಕೆ, ವಿವಿ ಪ್ಯಾಟ್ ಬಳಕೆ ಸೇರಿದಂತೆ, ಮತದಾನ ದಿನದಂದು ಚುನಾವಣಾ ಆಯೋಗದ ನಿರ್ದೇಶನಗಳ ಅನ್ವಯ ನಡೆಯುವ ಎಲ್ಲಾ ಪ್ರಕ್ರಿಯೆಗಳಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸುವ ಬಗ್ಗೆ ಸವಿವರವಾಗಿ ತಿಳಿದುಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿ, ಡಿಸಿ ಗಂಗೂಬಾಯಿ ಮಾನಕರ್ ಸೂಚಿಸಿದ್ದಾರೆ.

VISTARANEWS.COM


on

training for election duty staff in Karwar
Koo

ಕಾರವಾರ: ಲೋಕಸಭಾ ಚುನಾವಣೆಗೆ (Lok Sabha Election 2024) ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮೇ 7 ರಂದು ನಡೆಯುವ ಮತದಾನದ ಸಂದರ್ಭದಲ್ಲಿ ಮತಗಟ್ಟೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ, ತರಬೇತಿಯ ಅವಧಿಯಲ್ಲಿ ತಮ್ಮಲ್ಲಿರುವ ಎಲ್ಲಾ ಗೊಂದಲಗಳನ್ನು ಬಗೆಹರಿಸಿಕೊಂಡು, ಮತದಾನದ ಯಾವುದೇ ಗೊಂದಲಗಳಿಗೆ ಒಳಗಾಗದೇ ಅತ್ಯಂತ ಯಶಸ್ವಿಯಾಗಿ ಚುನಾವಣೆ ನಡೆಯುವಂತೆ ಕಾರ್ಯನಿರ್ವಹಿಸಿ ಎಂದು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ತಿಳಿಸಿದರು.

ಕಾರವಾರದ ಸೈಂಟ್ ಮೈಕಲ್ ಶಾಲೆಯಲ್ಲಿ, ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಸಿಬ್ಬಂದಿಗೆ ನಡೆದ 2ನೇ ಹಂತದ ತರಬೇತಿ ವೀಕ್ಷಿಸಿ ಅವರು ಮಾತನಾಡಿದರು.

ತರಬೇತಿ ಸಮಯದಲ್ಲಿ ಇವಿಎಂಗಳ ಬಳಕೆ, ವಿವಿ ಪ್ಯಾಟ್ ಬಳಕೆ ಸೇರಿದಂತೆ, ಮತದಾನ ದಿನದಂದು ಚುನಾವಣಾ ಆಯೋಗದ ನಿರ್ದೇಶನಗಳ ಅನ್ವಯ ನಡೆಯುವ ಎಲ್ಲಾ ಪ್ರಕ್ರಿಯೆಗಳಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸುವ ಬಗ್ಗೆ ಸವಿವರವಾಗಿ ತಿಳಿದುಕೊಳ್ಳುವಂತೆ ತಿಳಿಸಿದರು.

ಇದನ್ನೂ ಓದಿ: Hockey India: ಭಾರತ ಮಹಿಳಾ ಹಾಕಿ ತಂಡಕ್ಕೆ 22 ವರ್ಷದ ಸಲೀಮಾ ನೂತನ ನಾಯಕಿ

ಚುನಾವಣಾ ಪ್ರಕ್ರಿಯೆಯ ಯಶಸ್ಸಿಗೆ ಮತಗಟ್ಟೆ ಮಟ್ಟದಲ್ಲಿ ನಡೆಯುವ ಕಾರ್ಯವು ಅತ್ಯಂತ ಪ್ರಮುಖವಾಗಿರುವುದರಿಂದ, ಎಲ್ಲಾ ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳು ಅತ್ಯಂತ ಜವಾಬ್ದಾರಿಯುತವಾಗಿ ಮತ್ತು ಪರಸ್ಪರ ಸಮನ್ವಯದಿಂದ, ಚುನಾವಣಾ ಆಯೋಗದ ಮಾರ್ಗಸೂಚಿಗಳನ್ವಯ ತಮ್ಮ ಕರ್ತವ್ಯ ಕಾರ್ಯನಿರ್ವಹಿಸುವಂತೆ ತಿಳಿಸಿದರು.

ಮತಗಟ್ಟೆಗಳಲ್ಲಿ ಮತದಾನ ಮಾಡುವ ಸ್ಥಳವನ್ನು ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ಸೂಕ್ತ ರೀತಿಯಲ್ಲಿ ಸಿದ್ದಪಡಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಮತಗಟ್ಟೆಗಳಲ್ಲಿ ಮತ್ತು ಮತದಾನದ ಸಂದರ್ಭದಲ್ಲಿ ಯಾವುದೇ ಸಮಸ್ಯೆಗಳಿದ್ದಲ್ಲಿ ಸಂಬಂಧಪಟ್ಟ ಸೆಕ್ಟರ್ ಅಧಿಕಾರಿಗಳಿಗೆ ಕೂಡಲೇ ಮಾಹಿತಿ ನೀಡುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಮತದಾನ ಪ್ರಮಾಣದ ಹೆಚ್ಚಳಕ್ಕೆ ಜಿಲ್ಲಾಡಳಿತದಿಂದ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಇದರಿಂದಾಗಿ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗುವ ಸಾಧ್ಯತೆಯಿದೆ. ಮತ ಚಲಾಯಿಸಲು ಆಗಮಿಸುವ ಮತದಾರರು ತಮ್ಮ ಎಪಿಕ್ ಕಾರ್ಡ್ ಅಥವಾ ಚುನಾವಣಾ ಆಯೋಗ ಸೂಚಿಸಿರುವಂತೆ ಬಳಸಬಹುದಾದ ಪರ್ಯಾಯ ಗುರುತಿನ ದಾಖಲೆಗಳ ಕುರಿತಂತೆ ಎಲ್ಲಾ ಮತಗಟ್ಟೆ ಅಧಿಕಾರಿಗಳು ಸಮಗ್ರ ಮಾಹಿತಿ ಹೊಂದಿರಬೇಕು. ಮತದಾನದ ಅವಧಿ ಮುಕ್ತಾಯದ ನಂತರವೂ ಸರದಿ ಸಾಲಿನಲ್ಲಿ ಇರುವವರಿಗೆ ಟೋಕನ್‌ಗಳನ್ನು ನೀಡುವ ಮೂಲಕ ಅವರಿಗೆ ಮತದಾನ ಮಾಡಲು ಅವಕಾಶ ನೀಡಬೇಕು ಎಂದರು.

ಇದನ್ನೂ ಓದಿ: Bomber Drone: ಭಾರತದ ಮೊದಲ ಬಾಂಬರ್ ಡ್ರೋನ್ ಅನಾವರಣ; ಇದರ ವಿಶೇಷತೆ ಹೀಗಿದೆ ನೋಡಿ

ತರಬೇತಿ ಕಾರ್ಯಕ್ರಮದಲ್ಲಿ ಕಾರವಾರ ತಹಸೀಲ್ದಾರ್ ಪುರಂದರ, ವಿವಿಧ ಸೆಕ್ಟರ್ ಅಧಿಕಾರಿಗಳು ಹಾಗೂ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಸಿಬ್ಬಂದಿ ಉಪಸ್ಥಿತರಿದ್ದರು.

Continue Reading

ಬೆಂಗಳೂರು

Vidyashree HS: ಬೆಂಗಳೂರಿನಲ್ಲಿ ಮೇ 4ರಂದು ವಿದ್ಯಾಶ್ರೀ ಎಚ್.ಎಸ್. ಭರತನಾಟ್ಯ ರಂಗಪ್ರವೇಶ

Vidyashree HS: ಬೆಂಗಳೂರಿನ ಜೆಸಿ ರಸ್ತೆಯ ಎಡಿಎ ರಂಗಮಂದಿರದಲ್ಲಿ ವಿದುಷಿ ರೂಪಶ್ರೀ ಮಧುಸೂದನ ಅವರ ಶಿಷ್ಯೆ ಹಾಗೂ ಚಿನ್ನದ ನಾಡು ಕೋಲಾರ ಮೂಲದ ಕಲಾವಿದೆ ವಿದ್ಯಾಶ್ರೀ ಎಚ್.ಎಸ್. ಅವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮ ನಡೆಯಲಿದೆ.

VISTARANEWS.COM


on

Vidyashree HS
Koo

ಬೆಂಗಳೂರು: ಕೋಲಾರ ಮೂಲದ ಎಂಜಿನಿಯರ್ ಎಚ್.ಎಸ್. ಸುರೇಶ್ ಮತ್ತು ಸಂಸ್ಕೃತ ಶಿಕ್ಷಕಿ ಕೆ. ಸಿ. ನಾಗಶ್ರೀ ಅವರ ಪುತ್ರಿ ವಿದ್ಯಾಶ್ರೀ ಎಚ್.ಎಸ್. (Vidyashree HS) ಇದೀಗ ಭರತನಾಟ್ಯ ರಂಗಪ್ರವೇಶಕ್ಕೆ (Bharatanatyam Arangetram) ಸಿದ್ಧರಾಗಿದ್ದಾರೆ. ಸಂಸ್ಕಾರವಂತ ಕುಟುಂಬದಿಂದ ಬಂದ ಯುವತಿಯು ವಿದುಷಿ ರೂಪಶ್ರೀ ಮಧುಸೂದನ ಅವರಲ್ಲಿ ಶಿಷ್ಯತ್ವ ಪಡೆದಿದ್ದು, ರಂಗಾರೋಹಣಕ್ಕೆ ಅಣಿಯಾಗಿರುವುದು ವಿಶೇಷ.

ಮೇ 4 ರಂದು ಬೆಳಗ್ಗೆ 9.30ಕ್ಕೆ ರಾಜಧಾನಿ ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ಎಡಿಎ ರಂಗಮಂದಿರದಲ್ಲಿ ಹಿರಿಯ ಕಲಾವಿದರು, ಖ್ಯಾತ ವಿದ್ವಾಂಸರ ಸಮ್ಮುಖ ರಂಗ ಪ್ರಸ್ತುತಿ ಸಂಪನ್ನಗೊಳ್ಳಲಿದೆ. ಕಾರ್ಯಕ್ರಮಕ್ಕೆ ಗುರು ವಿದುಷಿ ರೂಪಶ್ರೀ ಮಧುಸೂದನರ ನಟುವಾಂಗ, ವಿದುಷಿ ದೀಪ್ತಿ ಶ್ರೀನಾಥ ಅವರ ಗಾಯನವಿದೆ. ಪಕ್ಕವಾದ್ಯ ಮೃದಂಗದಲ್ಲಿ ವಿದ್ವಾನ್ ಶ್ರೀಹರಿ ರಂಗಸ್ವಾಮಿ, ಕೊಳಲು ವಿದ್ವಾನ್ ವಿವೇಕ ಕೃಷ್ಣ, ರಿದಂ ಪ್ಯಾಡ್‌ನಲ್ಲಿ ವಿದ್ವಾನ್ ಕಾರ್ತಿಕ್ ದಾತಾರ್ ಸಾಥ್ ನೀಡಲಿದ್ದಾರೆ. ಮನೋಜ್ಞ ನೃತ್ಯ ಪ್ರದರ್ಶನಕ್ಕೆ ಮುಖ್ಯ ಅತಿಥಿಗಳಾಗಿ ಕರ್ನಾಟಕ ಕಲಾಶ್ರೀ, ಹಿರಿಯ ನೃತ್ಯ ಪ್ರವೀಣೆ ಡಾ. ಪದ್ಮಜಾ ಸುರೇಶ, ಭರತನಾಟ್ಯ ವಿದ್ವಾಂಸ ಪ್ರವೀಣ ಕುಮಾರ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಮನೆಯ ಸಂಸ್ಕಾರವೇ ಕಲೆಗೆ ಭೂಮಿಕೆಯಾಯಿತು

ಸುಸಂಸ್ಕೃತ ಮನೆಯಲ್ಲಿ ಹಿರಿಯರಿಂದ ದೊರಕುವ ಸಂಸ್ಕಾರವೇ ಮಕ್ಕಳ ಕಲಾಸಕ್ತಿಗೆ ಭೂಮಿಕೆಯಾಗಿತ್ತದೆ ಎಂಬುದಕ್ಕೆ ಯುವ ಪ್ರತಿಭೆ ವಿದ್ಯಾಶ್ರೀ ಪ್ರತೀಕವಾಗಿದ್ದಾರೆ ಎನ್ನಬಹುದು. ಹೌದು, ಕೋಲಾರ ಮೂಲದ ಎಂಜಿನಿಯರ್ ಎಚ್.ಎಸ್. ಸುರೇಶ್ ಮತ್ತು ಸಂಸ್ಕೃತ ಶಿಕ್ಷಕಿ ಕೆ. ಸಿ. ನಾಗಶ್ರೀ ಅವರ ವಂಶದಲ್ಲಿ ಎಲ್ಲರಿಗೂ ಸಂಗೀತ- ನೃತ್ಯದ ಬಗ್ಗೆ ಅಪಾರ ಗೌರವ ಇದೆ. ಆದರೆ ಯಾರೂ ಅದರಲ್ಲಿ ಈ ಮಟ್ಟಿನ ಸಾಧನೆ ಮಾಡಿದವರಿಲ್ಲ. ಆದರೂ ವಿದ್ಯಾಶ್ರೀಗೆ ಹೇಗೆ ಭರತನಾಟ್ಯ ಕಲೆ ಒಲಿಯಿತು ಎಂದು ಅವಲೋಕಿಸಿದಾಗ ಇದರ ಹಿಂದೆ ಅವರ ಮನೆಯ ಸಂಸ್ಕಾರ ಢಾಳಾಗಿ ಎದ್ದು ಕಾಣುತ್ತದೆ.

ಈ ಬಗ್ಗೆ ವಿದ್ಯಾಶ್ರೀ ಅವರ ತಾಯಿ ನಾಗಶ್ರೀ ಪ್ರತಿಕ್ರಿಯಿಸಿ, ನನ್ನ ಮಗಳು ವಿದ್ಯಾಶ್ರೀಗೆ 6ನೇ ವರ್ಷದಿಂದಲೇ ಸಂಗೀತ- ನೃತ್ಯದ ಆಸಕ್ತಿ ಕಾಣಿಸಿತು. ಮನೆಯ ಸಮೀಪದಲ್ಲೇ ಶಾರದಾ ಸುಗಮ ಸಂಗೀತ ಶಾಲೆಯಲ್ಲಿ ಗಾಯನ, ಚಿತ್ರಕಲಾ ತರಗತಿಗೆ ಸೇರಿದಳು. ಮಗಳು ವ್ಯಾಸಂಗ ಮಾಡುತ್ತಿದ್ದ ವಿದ್ಯಾನಿಕೇತನ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ವಿದುಷಿ ರೂಪಶ್ರೀ ಮಧುಸೂದನ ಅವರು ಈಕೆ ಪ್ರತಿಭೆ ಗುರುತಿಸಿದರು. ಸರಿ. ಅವರ ಬಳಿಯೇ ನೃತ್ಯಗಂಗಾ ಕಲಾ ಶಾಲೆಯಲ್ಲಿ ನೃತ್ಯಾಭ್ಯಾಸ ಆರಂಭವಾಯಿತು. 16 ವರ್ಷದಿಂದ ನಾವು ಈಕೆಗೆ ಎಂದೂ ‘ಅಭ್ಯಾಸ ಮಾಡು’, ನೃತ್ಯ ಪರೀಕ್ಷೆ ಕಟ್ಟು ಎಂದು ಹೇಳಿಲ್ಲ. ಎಲ್ಲವೂ ಅವಳ ಸ್ವಯಂ ಸ್ಫೂರ್ತಿಯೇ ಎಂದು ಹೆಮ್ಮೆಯಿಂದ ಹೇಳುತ್ತಾರೆ.

ಶಾಲಾ ಕಲಿಕೆಗೆ ಪೂರಕವಾದ ನೃತ್ಯ

ಸಾಮಾನ್ಯವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಂತಕ್ಕೆ ಬಂದ ಮಕ್ಕಳಿಗೆ ಪಾಲಕರು ಸಂಗೀತ, ನೃತ್ಯ, ಕಲೆ, ಕ್ರೀಡೆ… ಹೀಗೆ ಎಲ್ಲ ಚಟುವಟಿಕೆಗಳನ್ನೂ ನಿಲ್ಲಿಸಿಬಿಡುತ್ತಾರೆ. ‘ಓದಬೇಕು, ಅಂಕ ಗಳಿಸಬೇಕು’ ಅಷ್ಟೇ ಪರಮ ಗುರಿ! ಆದರೆ, ವಿದ್ಯಾಶ್ರೀ ವಿಭಿನ್ನ. ಕಲೆ ಎಂದಿಗೂ ಶಾಲಾ ಪಠ್ಯಕ್ರಮಕ್ಕೆ ಪೂರಕವಾಗಿ ಇರುತ್ತದೆ ಎಂದು ಶಿಕ್ಷಣ ತಜ್ಞರು ಹೇಳುವ ಮಾತನ್ನು ಈಕೆ ದಿಟಗೊಳಿಸಿದಳು. 10ನೇ ತರಗತಿ ವ್ಯಾಸಂಗದ ನಡುವೆಯೇ ಭರತನಾಟ್ಯ ಸೀನಿಯರ್ ಪರೀಕ್ಷೆಯನ್ನು ಉತ್ತಮ ಅಂಕದೊಂದಿಗೇ ಉತ್ತೀರ್ಣಳಾದಳು.

ಮಾದರಿ ವಿದ್ಯಾರ್ಥಿ

ವಿದುಷಿ ದಿವ್ಯಾ ಗಿರಿಧರ ಅವರಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪಾಠಕ್ರಮ ಪೂರ್ಣಗೊಳಿಸಿಕೊಂಡಳು. ಶಾಲಾ-ಕಾಲೇಜಿನ ಯಾವ ಹಂತದ ಪರೀಕ್ಷೆಗೂ ಸಂಗೀತ, ನೃತ್ಯ ಎಂಬುದು ಚೈತನ್ಯ ಕೊಟ್ಟಿತು. ಇದು ನಮ್ಮೆಲ್ಲಾ ಪಾಲಕರಿಗೆ ಮಾದರಿಯಾಗಬೇಕು. ಆ ಮಟ್ಟಿನ ಸಾಧನೆ ಮಾಡಿದ ವಿದ್ಯಾಶ್ರೀ, ಹಿಂತಿರುಗಿ ನೋಡಲೇ ಇಲ್ಲ. ಬಿಇ- ಎಂಎ. ಫೈನ್ ಆರ್ಟ್ಸ್ ಸಂದರ್ಭದಲ್ಲೂ ನೃತ್ಯ ಕಲಿಕೆ ಮರೆಯಲಿಲ್ಲ. ಆ ಮಟ್ಟಿಗಿನ ಬಾಂಧವ್ಯ, ಗುರು- ಶಿಷ್ಯ ಪರಂಪರೆಯನ್ನು ಬಿಗಿಗೊಳಿಸಿದ ಕೀರ್ತಿ ವಿದುಷಿ ರೂಪಶ್ರೀ ಅವರಿಗೂ ಸಲ್ಲುತ್ತದೆ. 16 ವರ್ಷ ನರ್ತನ ಕಲಿಕೆ ಫಲವಾಗಿ ವಿದ್ಯಾಶ್ರೀ ಇದೀಗ ಭರತನಾಟ್ಯ ವಿದ್ವತ್ ಪೂರ್ಣಗೊಳಿಸಿ ಕ್ರೈಸ್ಟ್ ವಿಶ್ವ ವಿದ್ಯಾಲಯದಲ್ಲಿ ಭರತನಾಟ್ಯ ಸ್ನಾತಕೋತ್ತರ ಪದವಿಯನ್ನೂ (ವಾರಾಂತ್ಯ ತರಗತಿಗೆ ಬದ್ಧವಾಗಿ) ಪಡೆದಿರುವುದು ಸಾಧನೆಯ ಛಾವಣಿಯ ನಿಚ್ಚಣಿಕೆಯಾಗಿದೆ.

ಇದನ್ನೂ ಓದಿ | Kaladarpana-Art Reflects: ಬೆಂಗಳೂರಿನಲ್ಲಿ ಮೇ 5ರಂದು ಪ್ರತಿಭಾ ವೇದಿಕೆ ಸೀಜನ್‌-4 ಪ್ರಶಸ್ತಿ ಪ್ರದಾನ, ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ

ಬಹುಮುಖೀ- ಸಖೀ

ವಿದ್ಯಾಶ್ರೀ ಸಂಸ್ಕೃತ ಭಾಷೆಯಲ್ಲೂ ಸ್ನಾತಕೋತ್ತರ ಅಧ್ಯಯನ ಮಾಡುತ್ತಿದ್ದಾರೆ. 15 ವರ್ಷಗಳಿಂದ ವಿದ್ವಾನ್. ಸುಬ್ರಮಣ್ಯಯನ್ ಅವರ ಮಾರ್ಗದರ್ಶನದಲ್ಲಿ ಸಂಸ್ಕೃತ ಭಾಷಾಧ್ಯಯನ ಸಾಗಿದೆ. ವಿದುಷಿ ಅನಂತಲಕ್ಷ್ಮೀ ನಟರಾಜನ್ ರವರು ಸ್ಥಾಪಿಸಿದ ಗೀತಾಗೋವಿಂದ ಸಂಸ್ಕೃತ ಸಂಘದಲ್ಲಿ ಈಕೆ ಸಂಸ್ಕೃತ ಶಿಕ್ಷಕಿಯಾಗಿದ್ದಾರೆ. ವ್ಯೋಮಾ ಲಿಂಗ್ವಿಸ್ಟಿಕ್ ಲ್ಯಾಬ್ಸ್, ಸಂಸ್ಕೃತ ಇ – ಲರ್ನಿಂಗ್ ಸಂಸ್ಥೆಯಲ್ಲಿ ಸ್ವಯಂ ಸೇವಕಿಯಾಗಿ ಸೇವೆ ಮಾಡುತ್ತಿದ್ದಾರೆ.
ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಅನ್ನ ನೀಡುವ ‘ ಆಪ್ತ ಸಹಾಯ ಫೌಂಡೇಷನ್’ ಎಂಬ ಎನ್‌ಜಿಒದಲ್ಲೂ ವಿದ್ಯಾಶ್ರೀ ವಾಲಂಟಿಯರ್. ಹೆತ್ತವರಿಗೆ, ವಿದ್ಯೆ ಕಲಿಸಿದ ಗುರುವಿಗೆ ಇದಕ್ಕಿಂತ ಇನ್ನೇನು ಕಾಣಿಕೆ ಬೇಕು ? ಎಲ್ಲ ಮನೆಯಲ್ಲೂ ವಿದ್ಯಾಶ್ರೀ ಯಂಥಾ ಮಕ್ಕಳೇ ಜನಿಸಿದರೆ ನಮ್ಮ ಭರತಖಂಡದ ಕೀರ್ತಿ ಬಹುಬೇಗ ವಿಶ್ವವ್ಯಾಪಿ ಆಗಲಿದೆ.
ಬನ್ನಿ. ಚಿನ್ನದ ನಾಡು ಕೋಲಾರ ಮೂಲದ ಹೆಮ್ಮೆಯ ಪುತ್ರಿಯ ಕಲಾ ಸೊಬಗಿನ ದರ್ಶನ ಮಾಡೋಣ.

Continue Reading

ಕರ್ನಾಟಕ

Prajwal Revanna Case: ರೇವಣ್ಣ ಮನೆ ಕೆಲಸದ ಮಹಿಳೆ ಕಿಡ್ನ್ಯಾಪ್‌ ಕೇಸ್; 2ನೇ ಆರೋಪಿಗೆ 14 ದಿನ ನ್ಯಾಯಾಂಗ ಬಂಧನ

Prajwal Revanna Case: ಎಚ್‌.ಡಿ. ರೇವಣ್ಣ ಮನೆ ಕೆಲಸದ ಮಹಿಳೆ ಅಪಹರಣ ಪ್ರಕರಣದ 2ನೇ ಆರೋಪಿ ಸತೀಶ್‌ ಬಾಬುಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

VISTARANEWS.COM


on

Prajwal Revanna Case
Koo

ಮೈಸೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣ (Prajwal Revanna Case) ದೇಶಾದ್ಯಂತ ಸದ್ದು ಮಾಡುತ್ತಿರುವ ನಡುವೆ ದಾಖಲಾಗಿದ್ದ ಎಚ್‌.ಡಿ.ರೇವಣ್ಣ ಮನೆ ಕೆಲಸದ ಮಹಿಳೆ ಅಪಹರಣ ಪ್ರಕರಣದಲ್ಲಿ 2ನೇ ಆರೋಪಿ ಸತೀಶ್‌ ಬಾಬುಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ತಾಯಿಯನ್ನು ಅಪಹರಣ ಮಾಡಲಾಗಿದೆ ಎಂದು ಆರೋಪಿಸಿ ರೇವಣ್ಣ ಮನೆ ಕೆಲಸದ ಮಹಿಳೆಯ ಪುತ್ರ ಕೆ.ಆರ್‌.ನಗರ ಠಾಣೆಗ ದೂರು ನೀಡಿದ್ದರು. ಪ್ರಜ್ವಲ್ ರೇವಣ್ಣ ಅವರಿಂದ ನನ್ನ ತಾಯಿ ಲೈಂಗಿಕ ದೌರ್ಜನ್ಯಕ್ಕೆ ಒಳಪಟ್ಟಿದ್ದರು.‌ ಈ ಸಂಬಂಧ ಫೋಟೊಗಳು ಬಹಿರಂಗ ಆಗಿದ್ದವು. ಬಳಿಕ ನನ್ನ ತಾಯಿ ನಾಪತ್ತೆ ಆಗಿದ್ದಾರೆ. ಎ1 ಶಾಸಕ ಎಚ್.ಡಿ.ರೇವಣ್ಣ ಹಾಗೂ ಎ2 ಸತೀಶ್‌ ಬಾಬು ಅಪಹರಣ ಮಾಡಿಸಿದ್ದಾರೆ ಎಂದು ದೂರು ನೀಡಲಾಗಿತ್ತು.

ಮನೆಗೆಲಸದಾಕೆ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ. ಶಾಸಕ ಎಚ್‌.ಡಿ.ರೇವಣ್ಣ ಸಲಹೆ ಮೇರೆಗೆ ಮಹಿಳೆಯನ್ನು ಸತೀಶ್‌ ಬಾಬು ಅಪಹರಣ ಮಾಡಿದ್ದರು ಎನ್ನಲಾಗಿದೆ. ಹೀಗಾಗಿ ರೇವಣ್ಣ ಮನೆ ಕೆಲಸದ ಮಹಿಳೆಯ ಪುತ್ರ ನೀಡಿದ ದೂರಿನ ಮೇರೆಗೆ ಕಿಡ್ನ್ಯಾಪ್‌ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ | Prajwal Revanna Case: ವಿಡಿಯೊದಲ್ಲಿ ಪ್ರಜ್ವಲ್‌ ಮುಖ ಕಾಣಲ್ಲ; ಗಂಡಸ್ತನವಿದ್ದರೆ ರಾಹುಲ್‌ ಗಾಂಧಿಗೆ ನೋಟಿಸ್‌ ಕೊಡಿ: ಸಿಎಂಗೆ ಎಚ್‌ಡಿಕೆ ಸವಾಲು

ದೂರಿನ ಹಿನ್ನೆಲೆಯಲ್ಲಿ ಪ್ರಕರಣದ ಎರಡನೇ ಆರೋಪಿ ಸತೀಶ್‌ ಬಾಬು ಅವರನ್ನು ನೆನ್ನೆ ರಾತ್ರಿಯೇ ಪೊಲೀಸರು ಬಂಧಿಸಿದ್ದರು. ಇದೀಗ ಅವರನ್ನು ಕೆ.ಆರ್‌.ನಗರ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪೆನ್‌ಡ್ರೈವ್‌ ಲೀಕ್‌ ಮಾಡಿದ್ದು ಯಾರು? ಎಸ್‌ಐಟಿಗೆ ಸಾಕ್ಷಿ ಕೊಟ್ಟ ದೇವರಾಜೇಗೌಡ!

Prajwal Revanna Case Who leaked the pen drive Devaraje Gowda gives evidence to SIT

ಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಎಸ್‌ಐಟಿ ಮುಂದೆ ಹಾಜರಾಗಿ ಕೆಲವು ಮಹತ್ವದ ದಾಖಲೆಗಳನ್ನು ನೀಡಿದ್ದಾರೆ ಎನ್ನಲಾಗಿದೆ. ಪೆನ್‌ಡ್ರೈವ್‌ ಲೀಕ್‌ ಮಾಡಿದ್ದು ಯಾರು ಎಂಬ ಬಗ್ಗೆಯೂ ಹೇಳಿಕೆ ನೀಡಿದ್ದೇನೆ. ಇದನ್ನು ಇಲ್ಲಿ ಹೇಳಲಾಗುವುದಿಲ್ಲ. ಆದರೆ, ಇನ್ನೊಂದು ವಾರದಲ್ಲಿ ಎಲ್ಲವೂ ಹೊರಗೆ ಬರಲಿದೆ ಎಂದು ಹೇಳಿದ್ದಾರೆ.

ಎಸ್‌ಐಟಿ ವಿಚಾರಣೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ವಕೀಲ ದೇವರಾಜೇಗೌಡ, ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಅಧಿಕಾರಿಗಳು ಗುರುವಾರ ನೋಟಿಸ್‌ ನೀಡಿದ್ದರು. ಅದರಂತೆ ಇಂದು ಹಾಜರಾಗಿ ನಾನು ಎಲ್ಲ ಸಂಗತಿಗಳನ್ನು ಹೇಳಿದ್ದೇನೆ. ಈ ವಿಡಿಯೊಗಳನ್ನು ವೈರಲ್ ಮಾಡಿದವರು ಯಾರು ಎನ್ನುವ ಮಾಹಿತಿ ನನಗೆ ಗೊತ್ತಿದೆ. ಅದನ್ನು ಎಸ್‌ಐಟಿ ಅಧಿಕಾರಿಗಳಿಗೆ ಹೇಳಿದ್ದೇನೆ. ಯಾರು ಎಂಬುದನ್ನು ನಾನು ಇಲ್ಲಿ ಹೇಳಲು ಸಾಧ್ಯವಿಲ್ಲ ಎಂದು ಸ್ಪಷ್ಟನೆ ನೀಡಿದರು.

ಎಚ್‌ಡಿಕೆಯಿಂದ ಮಹತ್ವದ ನಿರ್ಧಾರ

ಹಾಸನದಲ್ಲಿ ಒಕ್ಕಲಿಗ ನಾಯಕತ್ವಕ್ಕೆ ಇಷ್ಟೆಲ್ಲ ಆಗುತ್ತಲಿದೆ. ಮುಂದಿನ ಒಂದು ವಾರದಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಮಹತ್ವದ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ. ಆಗ ಎಲ್ಲವನ್ನೂ ಪ್ರಕಟಿಸುವವರಿದ್ದಾರೆ. ಯಾರು ವಿಡಿಯೊಗಳನ್ನು ಬಿಡುಗಡೆ ಮಾಡಿದ್ದಾರೋ ಆ ಎಲ್ಲವೂ ಒಂದು ವಾರದಲ್ಲಿ ಹೊರಗೆ ಬರತ್ತದೆ ಎಂದು ದೇವರಾಜೇಗೌಡ ತಿಳಿಸಿದರು.

ನನ್ನ ಬಳಿ ಇದ್ದ ಎಲ್ಲ ಸಾಕ್ಷಿಗಳನ್ನು ನೀಡಿದ್ದೇನೆ. ನಿನ್ನೆ ನನ್ನನ್ನು ಸಾಕ್ಷಿಯಾಗಿ ಮಾಡಿಕೊಂಡಿದ್ದಾರೆ. ಸರ್ಕಾರ ಮತ್ತು ಎಸ್‌ಐಟಿ ಅಧಿಕಾರಿಗಳು ತೀವ್ರ ಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ದೇವರಾಜೇಗೌಡ ಹೇಳಿದರು.
ರಾಜಕೀಯಕ್ಕಾಗಿಯೇ ಇದೆಲ್ಲ ನಡೆಯುತ್ತಿದೆ.

ಇದನ್ನೂ ಓದಿ | Prajwal Revanna Case: ಪ್ರಜ್ವಲ್ ದುಬೈ ಅಲ್ಲ, ಎಲ್ಲಿ ಎಸ್ಕೇಪ್‌ ಆದ್ರೂ ಅಲ್ಲಿಂದ್ಲೇ ಹಿಡಿದುಕೊಂಡು ಬರುತ್ತೇವೆ: ಸಿಎಂ ಸಿದ್ದರಾಮಯ್ಯ

ಈ ಎಲ್ಲ ಬೆಳವಣಿಗೆಗಳು ರಾಜಕೀಯ ಕುತಂತ್ರದಿಂದ ನಡೆದಿದೆಯಾ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ದೇವರಾಜೇಗೌಡ, ಇದೆಲ್ಲ ನಡೆಯುತ್ತಿರುವುದೇ ರಾಜಕೀಯವಾಗಿ. ಎಲ್ಲ ದಿಕ್ಕಿನಲ್ಲಿಯೂ ತನಿಖೆ ನಡೆಸುತ್ತಿರುವುದು ಖುಷಿಯನ್ನು ತಂದಿದೆ. ಯಾರೂ ಈ ತನಿಖೆಯಿಂದ ತಪ್ಪಿಸಿಕೊಳ್ಳುತ್ತಾರೆ ಎಂದು ಅನ್ನಿಸುತ್ತಿಲ್ಲ ಎಂದು ಹೇಳಿದರು.

Continue Reading
Advertisement
Wonderla Bengaluru
ಕರ್ನಾಟಕ2 mins ago

Wonderla Bengaluru: ಬೇಸಿಗೆ ರಜೆಯನ್ನು ಇನ್ನಷ್ಟು ಮಜವಾಗಿಸಲು ವಂಡರ್‌ಲಾದಲ್ಲಿ ʼಸಮ್ಮರ್‌ಲಾ ಫಿಯೆಸ್ಟಾ-2024ʼ: ಭರಪೂರ ಆಫರ್ಸ್‌

training for election duty staff in Karwar
ಉತ್ತರ ಕನ್ನಡ5 mins ago

Lok Sabha Election 2024: ಗೊಂದಲಕ್ಕೆ ಅವಕಾಶವಿಲ್ಲದೆ ಚುನಾವಣೆ ನಡೆಸಲು ಉ.ಕ ಡಿಸಿ ಸೂಚನೆ

IPL 2024
ಕ್ರೀಡೆ19 mins ago

IPL 2024 : ರಾಜಸ್ಥಾನ್​ ಸೋಲಿನ ಬಳಿಕ ಮೊಹಮ್ಮದ್ ಕೈಫ್​ ಟ್ರೋಲ್ ಮಾಡಿದ ವಾಸಿಮ್ ಜಾಫರ್​!

Rohith Vemula
ದೇಶ40 mins ago

Rohith Vemula: ರೋಹಿತ್‌ ವೇಮುಲ ದಲಿತನೇ ಅಲ್ಲ ಎಂದ ಪೊಲೀಸರು; ಕೇಸ್‌ ಕ್ಲೋಸ್‌, ಸ್ಮೃತಿ ಇರಾನಿ ಸೇರಿ ಹಲವರಿಗೆ ಕ್ಲೀನ್‌ ಚಿಟ್

IPL 2024
Latest46 mins ago

IPL 2024 : ನನ್ನ ನಿದ್ದೆಗೆಡಿಸಿದ್ದ ರೋಹಿತ್​ ಶರ್ಮಾ; ಗಂಭೀರ್​ ಹೀಗೆ ಹೇಳಲು ಕಾರಣವೇನು?

Vidyashree HS
ಬೆಂಗಳೂರು54 mins ago

Vidyashree HS: ಬೆಂಗಳೂರಿನಲ್ಲಿ ಮೇ 4ರಂದು ವಿದ್ಯಾಶ್ರೀ ಎಚ್.ಎಸ್. ಭರತನಾಟ್ಯ ರಂಗಪ್ರವೇಶ

Prajwal Revanna Case
ಕರ್ನಾಟಕ1 hour ago

Prajwal Revanna Case: ರೇವಣ್ಣ ಮನೆ ಕೆಲಸದ ಮಹಿಳೆ ಕಿಡ್ನ್ಯಾಪ್‌ ಕೇಸ್; 2ನೇ ಆರೋಪಿಗೆ 14 ದಿನ ನ್ಯಾಯಾಂಗ ಬಂಧನ

Summer Fashion
ಫ್ಯಾಷನ್2 hours ago

Summer Fashion: ಬೇಸಿಗೆಯಲ್ಲಿ ಹುಡುಗಿಯರನ್ನು ಸವಾರಿ ಮಾಡುತ್ತಿರುವ 5 ಶೈಲಿಯ ಗ್ಲಾಮರಸ್‌ ಟಾಪ್‌ಗಳಿವು

Summer Tour
ಪ್ರವಾಸ2 hours ago

Summer Tour: ಕಾಶ್ಮೀರ ಪ್ರವಾಸ ಮಾಡಲೊಂದು ಚಾನ್ಸ್! ಐ ಆರ್ ಸಿ ಟಿ ಸಿಯಿಂದ ವಿಶೇಷ ಪ್ಯಾಕೇಜ್

IPL 2024
ಕ್ರೀಡೆ2 hours ago

IPL 2024 : ಐಪಿಎಲ್​ಗೆ ಅರ್ಧದಲ್ಲೇ ವಿದಾಯ ಹೇಳಿದ ಮುಸ್ತಾಫಿಜುರ್​ಗೆ ಸಹಿ ಹಾಕಿದ ಜೆರ್ಸಿ ನೀಡಿದ ಧೋನಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru Rains
ಮಳೆ4 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ15 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ1 day ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಟ್ರೆಂಡಿಂಗ್‌