ರಾಜ್ಯ: ರಾಜ್ಯಾದ್ಯಂತ ನೈರುತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ಬಹುತೇಕ ಕಡೆ ಮಳೆಯಾಗುತ್ತಿದ್ದು, ಮುಂದಿನ 5 ದಿನಗಳು ಮಳೆ ಮುಂದುವರಿಯುವ ಸಾಧ್ಯತೆಯಿದೆ. ಕರಾವಳಿ ಭಾಗದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮುಂದಿನ 48 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮಳೆಯ ಅಬ್ಬರ ಇರಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಜುಲೈ 11ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧರಣದಿಂದ ಮಧ್ಯಮ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ | ಮಳೆ ಅವಾಂತರ | ಮಂಗಳೂರಿನ ಪಿಲಿಕುಳ ಮೃಗಾಲಯದಲ್ಲಿ ನೆರೆ
ಉತ್ತರ ಒಳನಾಡಿನ ಕಲಬುರಗಿ ಜಿಲ್ಲೆಯಲ್ಲಿ ಭಾನುವಾರ ಭಾರಿ ಮಳೆಯ ಎಚ್ಚರಿಕೆ ನೀಡಿದ್ದು, ಬೆಳಗಾವಿ ಮತ್ತು ಬೀದರ್, ಧಾರವಾಡ, ಹಾವೇರಿ ಹಾಗೂ ಯಾದಗಿರಿ, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೊಡುಗಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಮುಂದುವರಿಕೆ
ಕೊಡುಗು ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ವರುಣ ಅಬ್ಬರಿಸುತ್ತಿದ್ದು ಜಲಾಶಯ, ನದಿ ಪಾತ್ರದ ನಿವಾಸಿಗಳಲ್ಲಿ ಆತಂಕ ಹೆಚ್ಚಿಸಿದೆ. ಅಪಾಯ ಮಟ್ಟ ಮೀರಿ ಕಾವೇರಿ ನದಿ ಹರಿಯುತ್ತಿದ್ದು, ಜಿಲ್ಲಾಡಳಿತವು ಮುಂಜಾಗ್ರತಾ ಕ್ರಮವಾಗಿ ಎಲ್ಲ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.
ಇದನ್ನೂ ಓದಿ | Rain News | ವರುಣನ ಅಬ್ಬರಕ್ಕೆ ಅಪಾರ ಹಾನಿ: ಕಾಫಿ ಬೆಳೆ ನಷ್ಟ, ಕೊಡಗಿನಲ್ಲಿ ನಡುಗಿದ ಭೂಮಿ