ಬೆಂಗಳೂರು: ರಾಜ್ಯದಲ್ಲಿ ಇನ್ನೈದು ದಿನ ಮಳೆ ಆರ್ಭಟ (Rain News) ಮುಂದುವರಿಯಲಿದೆ. ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಧಾರಾಕಾರ (Weather report) ಮಳೆಯಾಗಲಿದೆ.
ಕರಾವಳಿ ಜಿಲ್ಲೆಯಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಭರ್ಜರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿಯಲ್ಲೂ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಈ ಜಿಲ್ಲೆಯಲ್ಲಿ ಸಿಕ್ಕಾಪಟ್ಟೆ ಮಳೆ
ಕರಾವಳಿಯ ಎಲ್ಲ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲೂ ಸಿಕ್ಕಾಪಟ್ಟೆ ಮಳೆಯಾಗಲಿದೆ. ರಾಜ್ಯಾದ್ಯಂತ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಸಾಧ್ಯತೆ ಇದ್ದು, ಬಿರುಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ಇರುವ ಸಾಧ್ಯತೆ ಇದೆ. ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 55 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಇದನ್ನೂ ಓದಿ: Rain News : ಮಳೆಗೆ ಗೋಡೆ ಕುಸಿದು ಯುವಕ, ವೃದ್ಧೆ ಮೃತ್ಯು; ನಿದ್ದೆಯಲ್ಲಿದ್ದ ಬಾಲಕಿ ಪವಾಡಸದೃಶ ಪಾರು
ಬೆಂಗಳೂರಲ್ಲಿ ತುಂತುರು ಮಳೆಯ ಸಿಂಚನ
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆಯಾಗಲಿದೆ. ಕೆಲವೊಮ್ಮೆ ಮಾಧ್ಯಮ ಮಳೆಯಾಗುವ ಸಾಧ್ಯತೆ ಇದ್ದು ಗಾಳಿಯು ರಭಸವಾಗಿ ಬೀಸಲಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 27 ಡಿ.ಸೆ – 23 ಡಿ.ಸೆ
ಗದಗ: 26 ಡಿ.ಸೆ – 20 ಡಿ.ಸೆ
ಚಿತ್ರದುರ್ಗ: 25 ಡಿ.ಸೆ – 21 ಡಿ.ಸೆ
ಬೆಳಗಾವಿ: 26 ಡಿ.ಸೆ – 21 ಡಿ.ಸೆ
ಕಾರವಾರ: 28 ಡಿ.ಸೆ – 24 ಡಿ.ಸೆ
ಮಂಗಳೂರು: 27 ಡಿ.ಸೆ – 23 ಡಿ.ಸೆ
ಹೊನ್ನಾವರ: 28 ಡಿ.ಸೆ- 24 ಡಿ.ಸೆ
ಬೆಂಗಳೂರು ನಗರ: 26 ಡಿ.ಸೆ – 20 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ