ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಯಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಭಯಂಕರ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿಯಲ್ಲೂ ಭರ್ಜರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 48 ಗಂಟೆ ಭಾರಿ ಮಳೆ ಎಚ್ಚರಿಕೆ
ಮುಂದಿನ 48 ಗಂಟೆಯಲ್ಲೂ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿಯ ಎಲ್ಲ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲೂ ಸಿಕ್ಕಾಪಟ್ಟೆ ಮಳೆಯಾಗಲಿದೆ.
ಇದನ್ನೂ ಓದಿ: Rain News : ಮಳೆ ಅನಾಹುತಕ್ಕೆ ಪ್ರತ್ಯೇಕ ಕಡೆ ಮೂವರು ವೃದ್ಧೆಯರು ಸಾವು
ಬಿರುಗಾಳಿ ಜತೆಗೆ ಮಳೆ ಅಬ್ಬರ
ರಾಜ್ಯಾದ್ಯಂತ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಸಾಧ್ಯತೆ ಇದ್ದು, ಬಿರುಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ಇರುವ ಸಾಧ್ಯತೆ ಇದೆ. ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 55 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಬೆಂಗಳೂರಲ್ಲಿ ತುಂತುರು ಮಳೆಯ ಸಿಂಚನ
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆಯಾಗಲಿದೆ. ಕೆಲವೊಮ್ಮೆ ಮಧ್ಯಮ ಮಳೆಯಾಗುವ ಸಾಧ್ಯತೆ ಇದ್ದು ಗಾಳಿಯು ರಭಸವಾಗಿ ಬೀಸಲಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ