ಬೆಂಗಳೂರು: ಮುಂದಿನ 5 ದಿನಗಳು ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ (Weather report) ಸಾಧ್ಯತೆ ಇದೆ. ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದರೆ ಮಲೆನಾಡಲ್ಲಿ ವ್ಯಾಪಕ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ನೈರುತ್ಯ ಮುಂಗಾರು (Southwest monsoon) ಚುರುಕುಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ.
ಮಲೆನಾಡಿನ ಜಿಲ್ಲೆಯಾದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಹಾವೇರಿ, ಗದಗ, ಯಾದಗಿರಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿಗಿಲ್ಲ ಮಳೆ ಅಲರ್ಟ್
ಕಳೆದೆರಡು ದಿನಗಳಿಂದ ಬೆಂಗಳೂರಲ್ಲಿ ಮಳೆ ಪ್ರಮಾಣ ತಗ್ಗಿದೆ. ಜು.21ರಂದು ಬೆಂಗಳೂರು ಸುತ್ತಮುತ್ತ ಒಣ ಹವೆ ಇರಲಿದ್ದು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಪ್ರದೇಶಗಳಲ್ಲಿ ಒಣಹವೆ ಇರಲಿದೆ.
ಉತ್ತರ ಕನ್ನಡಕ್ಕೆ ಆರೆಂಜ್ ಆಲರ್ಟ್, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮುಂದಿನ 4 ದಿನಗಳಿಗೆ ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿಗೆ, ಕೊಪ್ಪಳ, ರಾಯಚೂರು ಯೆಲ್ಲೋ ಅಲರ್ಟ್ ನೀಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡುಗು ಹಾಗೂ ಬೆಂಗಳೂರು, ಬೆಂಗಳೂರು ಗ್ರಾಮಾಂತರಕ್ಕೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಗುಡುಗು ಮುನ್ನೆಚ್ಚರಿಕೆ
ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಮಿಂಚು ಗುಡುಗಿನ ಸಾಧ್ಯತೆ ಇದೆ. ಒಳನಾಡಿನಲ್ಲಿ ಬಿರುಗಾಳಿಯ ವೇಗವು 40-50 ಕಿ.ಮೀ. ಇರುವ ಸಾಧ್ಯತೆ ಇದೆ. ಕರಾವಳಿಯಲ್ಲಿ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.
ಇದನ್ನೂ ಓದಿ: Brij Bhushan: ಜಾಮೀನು ಪಡೆದ ಬ್ರಿಜ್ಭೂಷಣ್; ದೇಶ ತೊರೆಯದಂತೆ ಸೂಚನೆ
ಮೀನುಗಾರರಿಗೆ ಎಚ್ಚರಿಕೆ
ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಮೂರು ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆ
ಉತ್ತರ ಒಳನಾಡಿನ ಜಿಲ್ಲೆಯಾದ ಬೀದರ್, ಚಿತ್ರದುರ್ಗ, ವಿಜಯನಗರ ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿರುವ ವರದಿ ಆಗಿದೆ. ಇತ್ತ ಕರಾವಳಿ ಉಡುಪಿ, ದಕ್ಷಿಣ ಕನ್ನಡ ಸೇರಿ ಒಳನಾಡಿನ ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಹಾಗೂ ಚಾಮರಾಜನಗರ, ದಾವಣಗೆರೆ, ಮೈಸೂರು, ತುಮಕೂರು ಒಟ್ಟು 12 ಜಿಲ್ಲೆಯಲ್ಲಿ ವಾಡಿಕೆಯ ಮಳೆಯಾಗಿದೆ. ಉಳಿದ 16 ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ