ಬೆಂಗಳೂರು: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿದ್ದ ಮುಂಗಾರು ಈಗ ಮತ್ತೆ ಸಕ್ರಿಯವಾಗಿದ್ದು, ರಾಜ್ಯದಲ್ಲಿ ಆಗಸ್ಟ್ 2ರಿಂದ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather Report) ನೀಡಿದೆ. ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿದ್ದು, ಮುಂದಿನ ೫ ದಿನಗಳಲ್ಲಿ ಹೆಚ್ಚಿನ ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳಿಗೆ ಸೋಮವಾರ ಯೆಲ್ಲೋ ಅಲರ್ಟ್ ಹಾಗೂ ಆಗಸ್ಟ್ 2 ರಿಂದ ನಾಲ್ಕು ದಿನಗಳು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಿಗೆ ಆಗಸ್ಟ್ 2 ರಿಂದ 4ರವರೆಗೆ ಯೆಲ್ಲೋ ಅಲರ್ಟ್ ಬಳಿಕ ಬೀದರ್‌ಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉಳಿದಂತೆ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗಲಿದೆ.
ಇದನ್ನೂ ಓದಿ | Rain News | ಬೆಂಗಳೂರಿನಲ್ಲಿ ಭಾರಿ ಮಳೆ: ಗೃಹ ಪ್ರವೇಶದ ಸಂಭ್ರಮ ನೀರು ಪಾಲು