Site icon Vistara News

Weather Report : ರಾಜ್ಯಾದ್ಯಂತ 5 ದಿನ ಮಿಂಚಿನ ಜತೆ ಹಗುರ ಮಳೆ!

girl enjoying rain and putting her face under water drops smiling happily

ಬೆಂಗಳೂರು: ಕರಾವಳಿಯ ಹಲವು ಕಡೆ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಆಗಸ್ಟ್‌ 15ರವರೆಗೆ ಗುಡುಗು ಸಹಿತ ಮಳೆಯಾಗುವ (Rain News) ಇದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ (Weather report) ಸಾಧ್ಯತೆ ಇದೆ. ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆ ಇದೆ.

ಇನ್ನೈದು ದಿನ ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯ ಹಲವು ಕಡೆ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಯಾದ ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ ಸೇರಿದಂತೆ ಕಲಬುರಗಿ, ಕೊಪ್ಪಳ, ರಾಯಚೂರಿನಲ್ಲಿ ತುಂತುರು ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಜಿಲ್ಲೆಯಾದ ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ, ತುಮಕೂರು , ವಿಜಯನಗರದಲ್ಲಿ ಲಘು ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ.

ಇದನ್ನೂ ಓದಿ: liquid lipsticks awareness : ಮಾನ್ಸೂನ್​​ನಲ್ಲಿ ಲಿಕ್ವಿಡ್‌ ಲಿಪ್​ಸ್ಟಿಕ್​ ಬಗ್ಗೆ ತಿಳಿದಿರಬೇಕಾದ 5 ಸಿಕ್ರೇಟ್ಸ್

ಮುಂದಿನ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಜಿಲ್ಲೆಗಳಲ್ಲಿ ಮಳೆ ಮಯ

ಯಾದಗಿರಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಿಗೆ ಯಾವುದೇ ಮಳೆ ಮುನ್ಸೂಚನೆ ಇಲ್ಲ. ಈ ಮೂರು ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version