ಬೆಂಗಳೂರು: ರಾಜ್ಯದ ಬಹುತೇಕ ಕಡೆಗಳಲ್ಲಿ ಜುಲೈ 3ರ ಭಾನುವಾರದಿಂದ 7ರವರೆಗೆ ಮಳೆಯಾಗುವ ಸಾಧ್ಯತೆ ಇದ್ದು, ಮೊದಲ ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 4ರ ನಂತರ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ | Rain News | ಕೊಡಗಿನಲ್ಲಿ ಮಳೆ ಅಬ್ಬರ, ಭೂಕುಸಿತ: ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಶಾಸಕ
ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯೊಂದಿಗೆ ಅಲ್ಲಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನಲ್ಲಿ ಮಧ್ಯಮ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಯಾವುದೇ ಅಲರ್ಟ್ ನೀಡಿಲ್ಲ. ಜತೆಗೆ ಬೆಂಗಳೂರಿನಲ್ಲೂ ಚದುರಿದ ಮಳೆಯಾಗಲಿದ್ದು, ಇಲ್ಲಿಗೂ ಯಾವುದೇ ಅಲರ್ಟ್ ಘೋಷಣೆ ಮಾಡಿಲ್ಲ. ನಗರದಲ್ಲಿ ಮೊದಲ ಎರಡು ದಿನ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ | Rain News | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಅವಾಂತರ: ತೋಟ, ಮನೆಗಳಿಗೆ ನುಗ್ಗಿದ ನೀರು