Site icon Vistara News

Weather Report: ಕರಾವಳಿ ಭಾಗದಲ್ಲಿ ಭಾರಿ ಮಳೆ ಮುನ್ಸೂಚನೆ: ಆರೆಂಜ್‌ ಅಲರ್ಟ್‌ ಘೋಷಣೆ

rain

ಬೆಂಗಳೂರು: ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಚುರುಕಾಗಿದೆ. ರಾಜ್ಯಾದ್ಯಂತ ಬಹುತೇಕ ಕಡೆಗಳಲ್ಲಿ ಮಳೆಯಾಗಿರುವ ವರದಿಯಾಗಿದೆ. ಜುಲೈ 15ರಂದು ಎಲ್ಲ ಕಡೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಕರಾವಳಿಯ ಎಲ್ಲ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಕಲಬುರಗಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. 

ಇದನ್ನೂ ಓದಿ | ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ವರುಣಾರ್ಭಟ, ಮೂರು ದಿನ ಭಾರೀ ಮಳೆ ಸಾಧ್ಯತೆ

ಉತ್ತರ ಒಳನಾಡಿನ ಬೀದರ್, ವಿಜಯಪುರ ಜಿಲ್ಲೆಗಳ ಹಾಗೂ ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದ ಸುತ್ತಮುತ್ತಲ ಪ್ರದೇಶದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಕೆಲವೊಮ್ಮೆ ಅಲ್ಪ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 25 ಮತ್ತು 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮುಂದಿನ 48 ಗಂಟೆಗಳಲ್ಲಿ ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 45-55 ಕಿ.ಮೀ. ಇರಲಿದ್ದು,  65 ಕಿ.ಮೀ.ವರೆಗೂ ತಲುಪುವ ಸಾಧ್ಯತೆ ಇದೆ. ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.

ಇದನ್ನೂ ಓದಿ | Coffee News | ಹವಾಮಾನ ವೈಪರಿತ್ಯ ತಾಳಿಕೊಳ್ಳುವ ಕಾಫಿ ತಳಿ ಅಭಿವೃದ್ಧಿಗೆ ಮುಂದಾದ ಕಾಫಿ ಮಂಡಳಿ

Exit mobile version