ಬೆಂಗಳೂರು: ರಾಜ್ಯದ ಕರಾವಳಿಯಲ್ಲಿ ವರುರ್ಣಾಭಟ ಮುಂದುವರಿದಿದ್ದು ಜು.15,16 ರಂದು ಭಾರಿ ಮಳೆ ಆಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 45-55 ಕಿ.ಮೀ ವರೆಗೂ ತಲುಪುವ ಸಾಧ್ಯತೆ ಇದೆ. ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ತಜ್ಞರು ಸೂಚಿಸಿದ್ದಾರೆ.
ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದ ಒಂದೆರಡು ಕಡೆಗಳಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮೇಲ್ಮೈ ಮಾರುತಗಳು ಕೆಲವೊಮ್ಮೆ ಪ್ರಬಲವಾಗಿರುವ ಸಾಧ್ಯತೆಯಿದ್ದು ವ್ಯಾಪಕ ಮಳೆಯಾಗಲಿದೆ.
ಇದನ್ನೂ ಓದಿ | ಮಳೆ ಅವಾಂತರ | ಮಂಗಳೂರಿನ ಪಿಲಿಕುಳ ಮೃಗಾಲಯದಲ್ಲಿ ನೆರೆ
ಉತ್ತರ ಒಳನಾಡಿನ ಜಿಲ್ಲೆಯಾದ ಬೆಳಗಾವಿಯಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಯಾದ ಹಾಸನದ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಕೆಲವು ಸಲ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 25 ಮತ್ತು 19 ಡಿಗ್ರಿ ಸೆಲ್ಸಿಯಸ್ ಇರಲಿದೆ.
ವ್ಯಾಪಕ ಮಳೆ ಶಾಲೆಗಳು ಬಂದ್!
ಕೊಡಗು ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಮುಂದುರಿದಿದ್ದು, ಶುಕ್ರವಾರ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ವೀರಾಜಪೇಟೆ, ಪೊನ್ನಂಪೇಟೆ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಎರಡು ದಿನ ರಜೆ ಘೋಷಣೆ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ | Rain fury: ಮುಂಗಾರು ಅಬ್ಬರಕ್ಕೆ ನಲುಗಿದ ಗುಜರಾತ್, ಮಹಾರಾಷ್ಟ್ರ, ತೆಲಂಗಾಣ; ಇನ್ನೂ ಇದೆ ಭಾರಿ ಮಳೆ