ಬೆಂಗಳೂರು: ರಾಜ್ಯಾದ್ಯಂತ ಸೋಮವಾರ ಸಾಧಾರಣ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ಕರಾವಳಿ ಜಿಲ್ಲೆಯಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಬಹುತೇಕ ಸ್ಥಳದಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಯಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಕೆಲವು ಸ್ಥಳದಲ್ಲಿ ತುಂತುರ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಜಿಲ್ಲೆಯಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ ಹಾಗೂ ಹಾಸನ , ಕೊಡಗು ಸೇರಿದಂತೆ ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.
ಈ ಜಿಲ್ಲೆಯಲ್ಲಿ ಸುಡುವ ಸೂರ್ಯ
ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಿಗೆ ಯಾವುದೇ ಮಳೆ ಮುನ್ಸೂಚನೆಯನ್ನು ನೀಡಿಲ್ಲ. ಬದಲಿಗೆ ಈ ನಾಲ್ಕು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.
ಇದನ್ನೂ ಓದಿ: Student death : ಅಮ್ಮಾ ಬಕೆಟ್ ಇದ್ಯಾ? ಎಂದು ಬಾಲ್ಕನಿಯಿಂದ ಬಾಗಿ ಕೇಳಿದ ಮೆಡಿಕಲ್ ವಿದ್ಯಾರ್ಥಿ ಕೆಳಗೆ ಬಿದ್ದು ಸಾವು
ಮೀನುಗಾರರು ಸಮುದ್ರಕ್ಕೆ ಇಳಿಯುವಂತಿಲ್ಲ
ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ವೇಗವು ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆ ಇದೆ. ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-55 ಕಿ.ಮೀ ವೇಗದಲ್ಲಿ ಬೀಸಲಿ ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಬೆಂಗಳೂರಲ್ಲಿ ಮಳೆ ಸ್ಟಾಪ್
ಬೆಂಗಳೂರು ನಗರದ ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ವಾತಾವರಣವೂ ಬಿಸಿಲಿನಿಂದ ಕೂಡಿದ್ದರೆ, ಸಂಜೆ ವೇಳೆಗೆ ಜಿಟಿ ಜಿಟಿ ಮಳೆಯಾಗಬಹುದು. ಆದರೆ ಕೆಲವೊಮ್ಮೆ ಮೇಲ್ಮೈಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 30 ಡಿ.ಸೆ – 23 ಡಿ.ಸೆ
ಗದಗ: 29 ಡಿ.ಸೆ – 21 ಡಿ.ಸೆ
ಚಿತ್ರದುರ್ಗ: 28 ಡಿ.ಸೆ – 21 ಡಿ.ಸೆ
ಬೆಳಗಾವಿ: 27 ಡಿ.ಸೆ – 21 ಡಿ.ಸೆ
ಕಾರವಾರ: 30 ಡಿ.ಸೆ – 25 ಡಿ.ಸೆ
ಮಂಗಳೂರು: 29 ಡಿ.ಸೆ – 24 ಡಿ.ಸೆ
ಹೊನ್ನಾವರ: 29 ಡಿ.ಸೆ- 24 ಡಿ.ಸೆ
ಬೆಂಗಳೂರು ನಗರ: 29 ಡಿ.ಸೆ – 20 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ